AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿಷೇಧ ಹೇರಿದ ಚುನಾವಣಾ ಆಯೋಗ

ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಯು "ಭಾರತದಲ್ಲಿ ಮಹಿಳೆಯರ ಸ್ಥಾನಮಾನವನ್ನು ಅವಮಾನಿಸುವಂಥದ್ದು. ಇಂಥಾ ಹೇಳಿಕೆಯು ಯಾವುದೇ ಮಹಿಳೆ ಬಗ್ಗೆ ಬಳಸಿದ್ದರೂ, ಹಿರಿಯ ರಾಜಕೀಯ ನಾಯಕ ಮತ್ತು ಸಂವಿಧಾನಿಕ ಸ್ಥಾನದಲ್ಲಿರುವವರ ಬಗ್ಗೆ ಮಾತನಾಡಿದ್ದರೂ ಖಂಡನೀಯ. ಅಂತಹ ಅಸಹ್ಯಕರ ಮಾತುಗಳು ಅಭಿಜಿತ್ ಗಂಗೋಪಾಧ್ಯಾಯ ಅವರ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯ ಯಾರೊಬ್ಬರಿಂದ ಬಂದಿದ್ದರೂ ಅದು ಖಂಡನೀಯವೇ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿಷೇಧ ಹೇರಿದ ಚುನಾವಣಾ ಆಯೋಗ
ಮಮತಾ ಬ್ಯಾನರ್ಜಿ- ಅಭಿಜಿತ್ ಗಂಗೋಪಾಧ್ಯಾಯ
ರಶ್ಮಿ ಕಲ್ಲಕಟ್ಟ
|

Updated on:May 21, 2024 | 4:19 PM

Share

ಕೊಲ್ಕತ್ತಾ ಮೇ 21: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರ ಮೇಲೆ ಕೀಳುಮಟ್ಟದ ವೈಯಕ್ತಿಕ ದಾಳಿ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಅವರನ್ನು ಚುನಾವಣಾ ಆಯೋಗ (Election Commission) ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. ಇಂದು ಸಂಜೆ 5 ಗಂಟೆಯಿಂದ 24 ಗಂಟೆಗಳ ಕಾಲ ಬಿಜೆಪಿಯ ತಮ್ಲುಕು ಅಭ್ಯರ್ಥಿ ಗಂಗೋಪಾಧ್ಯಾಯ ಅವರು ಚುನಾವಣಾ ಪ್ರಚಾರ ಮಾಡದಂತೆ ನಿಷೇಧಿಸಿರುವ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಅವಧಿಯಲ್ಲಿ ಸಾರ್ವಜನಿಕ ಹೇಳಿಕೆಗಳಲ್ಲಿ ಜಾಗರೂಕರಾಗಿರಿ ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದೆ.

ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ, ಗಂಗೋಪಾಧ್ಯಾಯ ಅವರು ಬಂಗಾಳಿ ಭಾಷೆಯಲ್ಲಿ ಮಮತಾ ಅವರನ್ನು ನಿಂದಿಸಿದ್ದರು. ‘ಮಮತಾ ಬ್ಯಾನರ್ಜಿ, ನಿಮ್ಮನ್ನು ಎಷ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ? ನಿಮ್ಮ ದರ ರೂ10 ಲಕ್ಷ, ಏಕೆ? ಏಕೆಂದರೆ ಕೇಯಾ ಸೇಠ್‌ನಿಂದ ನಿಮ್ಮ ಮೇಕಪ್ ಮಾಡಿಸಿಕೊಳ್ಳುತ್ತಿದ್ದೀರಾ? ಮಮತಾ ಬ್ಯಾನರ್ಜಿ, ಅವರು ಮಹಿಳೆಯೇ? ನಾನು ಕೆಲವೊಮ್ಮೆ ಅಚ್ಚರಿ ಪಡುತ್ತೇನೆ ಎಂದಿದ್ದರು ಬಿಜೆಪಿ ಅಭ್ಯರ್ಥಿ.

ಗಂಗೋಪಾಧ್ಯಾಯ ಅವರು “ಕೆಳಮಟ್ಟದ ವೈಯಕ್ತಿಕ ದಾಳಿಯನ್ನು ಮಾಡಿದ್ದು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ” ಎಂದು ಮನವರಿಕೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಯು “ಭಾರತದಲ್ಲಿ ಮಹಿಳೆಯರ ಸ್ಥಾನಮಾನವನ್ನು ಅವಮಾನಿಸುವಂಥದ್ದು. ಇಂಥಾ ಹೇಳಿಕೆಯು ಯಾವುದೇ ಮಹಿಳೆ ಬಗ್ಗೆ ಬಳಸಿದ್ದರೂ, ಹಿರಿಯ ರಾಜಕೀಯ ನಾಯಕ ಮತ್ತು ಸಂವಿಧಾನಿಕ ಸ್ಥಾನದಲ್ಲಿರುವವರ ಬಗ್ಗೆ ಮಾತನಾಡಿದ್ದರೂ ಖಂಡನೀಯ. ಅಂತಹ ಅಸಹ್ಯಕರ ಮಾತುಗಳು ಅಭಿಜಿತ್ ಗಂಗೋಪಾಧ್ಯಾಯ ಅವರ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯ ಯಾರೊಬ್ಬರಿಂದ ಬಂದಿದ್ದರೂ ಅದು ಖಂಡನೀಯವೇ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ಆಯೋಗವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆದೇಶದ ಪ್ರತಿಯನ್ನು ಕಳುಹಿಸಿದ್ದು, “ಪ್ರಚಾರದ ಅವಧಿಯಲ್ಲಿ ಈ ಲೋಪ ಮರುಕಳಿಸುವುದಿಲ್ಲ” ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ಬಿಜೆಪಿ ಅಭ್ಯರ್ಥಿಗಳು ಮತ್ತು ಪಕ್ಷದ ಪ್ರಚಾರಕರಿಗೆ ಸಲಹೆಯನ್ನು ನೀಡುವಂತೆ ಕೇಳಿದೆ.

ಬ್ಯಾನರ್ಜಿ ವಿರುದ್ಧದ ಹೇಳಿಕೆಗಳಿಗಾಗಿ ಗಂಗೋಪಾಧ್ಯಾಯ ವಿರುದ್ಧ ತೃಣಮೂಲ ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಇಸಿಐ ಅವರಿಗೆ ಶೋಕಾಸ್ ನೋಟಿಸ್ ಕಳುಹಿಸಿದೆ. ಚುನಾವಣಾ ಆಯೋಗವು ಮೇ 20 ರಂದು ಸಂಜೆ 5 ಗಂಟೆಯೊಳಗೆ ಗಂಗೋಪಾಧ್ಯಾಯ ಅವರಿಂದ ಪ್ರತಿಕ್ರಿಯೆ ಕೇಳಿತ್ತು.

ಇದನ್ನೂ ಓದಿ: Gopi Thotakura: ಇತಿಹಾಸ ಸೃಷ್ಟಿಸಿದ ಆಂಧ್ರ ಮೂಲದ ಗೋಪಿ ತೋಟಕೂರ; ಬಾಹ್ಯಾಕಾಶ ಪ್ರವಾಸ ಕೈಗೊಂಡ ಭಾರತೀಯ ಪೈಲಟ್

ಗಂಗೋಪಾಧ್ಯಾಯ ಅವರ ಹೇಳಿಕೆಯು “ಪ್ರತಿಯೊಂದು ಅರ್ಥದಲ್ಲಿಯೂ ಘನತೆಯನ್ನು ಮೀರಿದೆ” ಮತ್ತು ಕೆಟ್ಟ ಅಭಿರುಚಿಯಲ್ಲಿದೆ. ಇದು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಮತ್ತು ರಾಜಕೀಯ ಪಕ್ಷಗಳಿಗೆ ಅದರ ಸಲಹೆಯನ್ನು ಪ್ರಾಥಮಿಕವಾಗಿ ಉಲ್ಲಂಘಿಸುತ್ತಿದೆ ಎಂದು ಚುನಾವಣಾ ಆಯೋಗ ತನ್ನ ಸೂಚನೆಯಲ್ಲಿ ತಿಳಿಸಿದೆ.

ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Tue, 21 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ