Lok Sabha Election 2024 Results Live: ತೆರೆದ ಸ್ಟ್ರಾಂಗ್​ ರೂಂ, ದೇಶದೆಲ್ಲೆಡೆ ಮತ ಎಣಿಕೆ ಆರಂಭ

| Updated By: ನಯನಾ ರಾಜೀವ್

Updated on:Jun 04, 2024 | 8:15 AM

ಲೋಕಸಭಾ ಚುನಾವಣೆ ಫಲಿತಾಂಶ 2024 ಲೈವ್: ಸುದೀರ್ಘ ಎರಡು ತಿಂಗಳುಗಳ ಕಾಲ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆಯಿತು. ನಾಯಕರ ರಾಜಕೀಯ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ಜೂನ್​ 4 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಮತದಾರ ಯಾರತ್ತ ವಾಲಿದ್ದಾನೆ ಕಾದುನೋಡಬೇಕಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಟಿವಿ9 ಡಿಜಿಟಲ್​ನಲ್ಲಿ ಲಭ್ಯ.

Lok Sabha Election 2024 Results Live: ತೆರೆದ ಸ್ಟ್ರಾಂಗ್​ ರೂಂ, ದೇಶದೆಲ್ಲೆಡೆ ಮತ ಎಣಿಕೆ ಆರಂಭ
ಲೋಕಸಭಾ ಚುನಾವಣೆ ಫಲಿತಾಂಶ

India General Election Result Live Updates in Kannada: ಲೋಕಸಭೆ ಚುನಾವಣೆ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಸುದೀರ್ಘ ಎರಡು ತಿಂಗಳುಗಳ ಕಾಲ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆಯಿತು. ಜೂನ್​ 1 ರಂದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ಜೂನ್​ 4 ರಂದು ನಿರ್ಣಾಯಕ ದಿನವಾಗಿದೆ. ಮಂಗಳವಾರ ಲೋಕಸಭೆ ಚುನಾವಣೆ ಮತ್ತು ಕೆಲವು ಕಡೆ ವಿಧಾನಸಭೆ ಚುನಾಣೆಯ ಫಲಿತಾಂಶ ಹೊರಬೀಳಲಿದೆ. ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಮತಗಳು ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.

ಸತತ ಎರಡು ಬಾರಿ ಗೆದ್ದು ಕೇಂದ್ರದಲ್ಲಿ ಗದ್ದುಗೆಯನ್ನು ಅಲಂಕರಿಸಿದ್ದ ಕಮಲ ಈ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ಸಾಧಿಸುವ ಮೂಲಕ ಬಿಜೆಪಿ ಹ್ಯಾಟ್ರಿಕ್​ ಜಯಗಳಿಸುತ್ತಾ ಕಾದು ನೋಡಬೇಕಾಗಿದೆ. ಅಲ್ಲದೆ ಈ ಬಾರಿ 400 ಪಾಸ್​ ಗುರಿ ಹೊಂದಿರುವ ಎನ್​ಡಿಎ ಅಷ್ಟು ಸೀಟುಗಳನ್ನು ಗೆಲ್ಲುತ್ತಾ ಎಂಬುವುದು ಕಾದು ನೋಡಬೇಕಿದೆ. ಇನ್ನು ಕಾಂಗ್ರೆಸ್​ನ ಇಂಡಿಯಾ ಮೈತ್ರಿಕೂಟ ಈ ಬಾರಿ ಬಿಜೆಪಿ ಸೋಲಿಸಿ ಅಧಿಕಾರಿದ ಗದ್ದುಗೆ ಏರಲು ತುದಿಗಾಲಿನಲ್ಲಿದೆ. ಆದರೆ ಮತದಾರ ಯಾರತ್ತ ವಾಲಿದ್ದಾನೆ ಕಾದು ನೋಡಬೇಕಿದೆ.

LIVE NEWS & UPDATES

The liveblog has ended.
 • 03 Jun 2024 11:12 PM (IST)

  Lok Sabha Election Results 2024 Live: ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ

  ನಾಳೆ ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, 543 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದಲ್ಲಿ ಮತದಾನ ನಡೆದಿತ್ತು. ಏ.19ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ. ಏಪ್ರಿಲ್ 26ರಂದು 2ನೇ ಹಂತದಲ್ಲಿ 89 ಕ್ಷೇತ್ರಗಳಲ್ಲಿ ಮತದಾನ. ಮೇ 7ರಂದು 3ನೇ ಹಂತದಲ್ಲಿ 94 ಕ್ಷೇತ್ರಗಳಲ್ಲಿ ಮತದಾನ. ಮೇ 13ರಂದು 4ನೇ ಹಂತದಲ್ಲಿ 96 ಕ್ಷೇತ್ರಗಳಲ್ಲಿ ಮತದಾನ. ಮೇ 20ರಂದು 5ನೇ ಹಂತದಲ್ಲಿ 49 ಕ್ಷೇತ್ರಗಳಲ್ಲಿ ಮತದಾನ. ಮೇ 25ರಂದು 6ನೇ ಹಂತದಲ್ಲಿ 56 ಕ್ಷೇತ್ರಗಳಲ್ಲಿ ಮತದಾನ. ಜೂನ್ 1ರಂದು ಅಂತಿಮ ಹಂತದಲ್ಲಿ 57 ಕ್ಷೇತ್ರಗಳಲ್ಲಿ ಮತದಾನ. ರಾಜ್ಯದ 28 ಕ್ಷೇತ್ರಗಳಿಗೆ ಏ. 26, ಮೇ 7ರಂದು ಮತದಾನ ನಡೆದಿತ್ತು. ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 474 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಶೇಕಡಾ 70.64ರಷ್ಟು ಮತದಾನವಾಗಿತ್ತು. ಇಂದು ಒಡಿಶಾ, ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ.

 • 03 Jun 2024 10:26 PM (IST)

  Lok Sabha Election Results 2024 Live: ಬಿಜೆಪಿ ರಾಜ್ಯ ಕಚೇರಿಗೆ ವಿದ್ಯುತ್ ದೀಪಗಳಿಂದ ಅಲಂಕಾರ

  ನಾಳೆ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಜಗನ್ನಾಥ ಭವನಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಕಚೇರಿ ಕಟ್ಟಡಕ್ಕೆ ಪಕ್ಷದ ಬಾವುಟಗಳನ್ನು ಅಳವಡಿಕೆ ಮಾಡಲಾಗಿದೆ.

 • 03 Jun 2024 09:58 PM (IST)

  Lok Sabha Election Results 2024 Live: 400 ಸೀಟು ದಾಟುವ ವಿಶ್ವಾಸ ಇದೆ: ಬೊಮ್ಮಾಯಿ

  ಇಡಿ ದೇಶದಲ್ಲಿ 400 ಸೀಟು ದಾಟುವ ವಿಶ್ವಾಸ ಇದೆ. ಕರ್ನಾಟಕದಲ್ಲಿ ನಾವು ಜೆಡಿಎಸ್ ಸೇರಿ ಮೊದಲು 25 ಸೀಟು ಇತ್ತು. ಅದೇ ಸೀಟುಗಳು ಮುಂದುವರೆಯುತ್ತೆ ಎಂದು ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • 03 Jun 2024 09:34 PM (IST)

  Lok Sabha Election Results 2024 Live: ದೆಹಲಿ ಕಾಂಗ್ರೆಸ್​​ ಕಚೇರಿಯಲ್ಲಿ ಫಲಿತಾಂಶ ವೀಕ್ಷಿಸಲು ವ್ಯವಸ್ಥೆ

  ನಾಳೆ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ ದೆಹಲಿ ಕಾಂಗ್ರೆಸ್​​ ಕಚೇರಿಯಲ್ಲಿ ಫಲಿತಾಂಶ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮೊದಲ ಬಾರಿಗೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಫಲಿತಾಂಶ ವೀಕ್ಷಿಸಲು ಎಲ್​ಇಡಿ ಪರದೆ ಅಳವಡಿಕೆ ಮಾಡಲಾಗಿದೆ.

 • 03 Jun 2024 08:56 PM (IST)

  Lok Sabha Election Results 2024 Live: ಲೋಕ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಸಂಭ್ರಮಾಚರಣೆ

  ಲೋಕ ಫಲಿತಾಂಶಕ್ಕೂ ಮುನ್ನವೇ ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಕ್ಕೆ ತಯಾರಿ ನಡೆದಿದೆ. ಬಿಜೆಪಿ ಕಚೇರಿಗೆ ಕಾರ್ಯಕರ್ತರಿಂದ ಬಂಟಿಗ್ಸ್, ಬಾವುಟ ಕಟ್ಟುತ್ತಿದ್ದಾರೆ. ಬಿಜೆಪಿ ಹಾಗೂ ನಾಯಕರಿಗೆ ಕಾರ್ಯಕರ್ತರಿಂದ ಮೂರನೇ ಬಾರಿ ಮೋದಿ ಸರ್ಕಾರ್ ಎಂದು ಘೋಷಣೆ ಕೂಗಿದ್ದಾರೆ.

 • 03 Jun 2024 08:50 PM (IST)

  Lok Sabha Election Results 2024 Live: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್‌ ಗೆಲ್ಲುತ್ತಾರೆ: ಹುಸೇನ್

  ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 1.15 ಲಕ್ಷ ಮತಗಳಿಂದ ಡಿ.ಕೆ.ಸುರೇಶ್‌ ಗೆಲ್ಲುತ್ತಾರೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ ನುಡಿದಿದ್ದಾರೆ. ಕೆಳ ಮಟ್ಟದಿಂದ ಕೆಲಸ ಮಾಡಿ ಮಾಹಿತಿ ಪಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

 • 03 Jun 2024 08:08 PM (IST)

  Lok Sabha Election Results 2024 Live: ಖಂಡಿತವಾಗಲೂ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ

  ಲೋಕಸಭೆ ಫಲಿತಾಂಶ ಬಂದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್​ ಸಿಎಂ ಆಗೋ ವಿಚಾರವಾಗಿ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್​, ಪಕ್ಷವನ್ನು ಯಾರೂ ತಳಮಟ್ಟದಿಂದ ತಂದು ಬಲಿಷ್ಠ ಮಾಡಿದ್ದಾರೋ,‌ ಅವರಿಗೆ ಒಂದು ಅವಕಾಶ ಸಿಗಲೇಬೇಕು. ಖಂಡಿತವಾಗಲೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

 • 03 Jun 2024 07:25 PM (IST)

  Lok Sabha Election Results 2024 Live: ಎಕ್ಸಿಟ್‌ ಪೋಲ್‌ ಫಲಿತಾಂಶ ಕಾಂಗ್ರೆಸ್‌ ನಾಯಕರ ಎದೆಬಡಿತ ಹೆಚ್ಚಿಸಿದೆ: ವಿಜಯೇಂದ್ರ

  ಮುಂದಿನ ದಿನಗಳಲ್ಲಿ ವಿಧಾನ ಪರಿಷತ್ತಿನಲ್ಲಿ ನಮ್ಮ ಧ್ವನಿ ಮತ್ತಷ್ಟು ಬಲವಾಗಲಿದೆ. ಎಕ್ಸಿಟ್‌ ಪೋಲ್‌ ಫಲಿತಾಂಶಗಳಿಂದ ಕಾಂಗ್ರೆಸ್‌ ನಾಯಕರ ಎದೆಬಡಿತ ಹೆಚ್ಚಾಗಿದೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

 • 03 Jun 2024 07:10 PM (IST)

  Lok Sabha Election Results 2024 Live: ಸಿಎಂ ಬದಲಾವಣೆ ಮುನ್ಸೂಚನೆ ನೀಡಿದ ಬೊಮ್ಮಾಯಿ

  ಲೋಕಸಭಾ ಚುನಾವಣೆ ನಂತರ ಏನಾದರೂ ಆಗಬಹದು. ನಂಬರ್ ಮುಖ್ಯವಲ್ಲ, ರಾಜಕಾರಣ ಮುಖ್ಯ. ರಾಜ್ಯ ಸರ್ಕಾರ ಬದಲಾವಣೆ ಆಗುತ್ತೊ ಇಲ್ಲೋ ಗೊತ್ತಿಲ್ಲ, ರಾಜಕಾರಣ ಬದಲಾವಣೆ ಆಗುತ್ತೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಮುನ್ಸೂಚನೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ.

 • 03 Jun 2024 06:37 PM (IST)

  Lok Sabha Election Results 2024 Live: ಕಲಬುರಗಿಯಲ್ಲಿ ಅಧಿಕಾರಿಗಳಿಂದ ಮತ ಎಣಿಕೆ ಅಂತಿಮ ಸಿದ್ಧತಾ ಕಾರ್ಯ ಪರಿಶೀಲನೆ

  ನಾಳೆ ಕಲಬುರಗಿ ಲೋಕಸಭೆ ಕ್ಷೇತ್ರದ ಮತ ಎಣಿಕೆ ಹಿನ್ನೆಲೆ ಕೇಂದ್ರಕ್ಕೆ ಗುಲಬರ್ಗಾ ವಿವಿಗೆ ಕ್ಷೇತ್ರದ ಸಾಮಾನ್ಯ ವೀಕ್ಷಕ ದೀಪನಕರ್ ಸಿನ್ಹಾ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಮತ ಎಣಿಕೆ ಅಂತಿಮ ಸಿದ್ಧತಾ ಕಾರ್ಯ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಡಿಸಿಗೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್ ಚೇತನ್ ಸಾಥ್ ನೀಡಿದ್ದಾರೆ.

 • 03 Jun 2024 06:22 PM (IST)

  Lok Sabha Election Results 2024 Live: ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ: ಇಪ್ಪತ್ತು ಶಾಲಾ ಕಾಲೇಜುಗಳಿಗೆ ರಜೆ

  ಬೆಳಗಾವಿಯ ಟಿಳಕವಾಡಿಯಲ್ಲಿರುವ ರಾಣಿ ಪಾರ್ವತಿ ದೇವಿ ಕಾಲೇಜಿನಲ್ಲಿ ನಾಳೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಮತ ಎಣಿಕಾ ಕೇಂದ್ರದ ಸುತ್ತ ಮುತ್ತಲಿರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಟಿಳಕವಾಡಿಯಲ್ಲಿರುವ ಇಪ್ಪತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ.

 • 03 Jun 2024 06:18 PM (IST)

  Lok Sabha Election Results 2024 Live: ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮತ ಎಣಿಕೆ ವೀಕ್ಷಣೆಗೆ ಸಿದ್ದತೆ

  ದೆಹಲಿ: ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮತ ಎಣಿಕೆ ವೀಕ್ಷಣೆಗೆ ಸಿದ್ದತೆ ಮಾಡಲಾಗುತ್ತಿದೆ. ಕಾರ್ಯಕರ್ತರಿಗೆ ನೃತ್ಯ ಮಾಡಿ ಸಂಭ್ರಮಿಸಲು ಸ್ಥಳಾವಕಾಶ ನೀಡಲಾಗಿದ್ದು, ಪ್ರಧಾನ‌ಕಚೇರಿ ಮುಂದೆ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಲಾಗಿದೆ. ಒಳಗಿನ ಹಾಲ್​​ಗಳಲ್ಲಿ ಟೇಬಲ್​​ಗಳನ್ನು ವ್ಯವಸ್ಥೆ ಮಾಡಿದ್ದು, ಫಲಿತಾಂಶ ಬಂದ ಬಳಿಕ ಬಿಜೆಪಿ ಕಚೇರಿಗೆ ಮೋದಿ ಆಗಮಿಸುವ ಸಾಧ್ಯತೆ ಇದೆ. ಮೋದಿ ಆಗಮನದ ಹಾದಿಯಲ್ಲಿ ಸಕಲ ಭದ್ರತೆ ಒದಗಿಸಲಾಗಿದೆ.

 • 03 Jun 2024 05:46 PM (IST)

  Lok Sabha Election Results 2024 Live: ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆ ಹೇಗಿದೆ ನೋಡಿ

  ಲೋಕಸಭಾ ಚುನಾವಣಾ ಮತ ಎಣಿಕೆಗೆ ಕೌಂಟ್​ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆ ಹೇಗಿದೆ? ವಿಡಿಯೋ ನೋಡಿ.

 • 03 Jun 2024 05:43 PM (IST)

  Lok Sabha Election Results 2024 Live: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿ ಕ್ಯಾಂಪಸ್​ನಲ್ಲಿ ಮತ ಎಣಿಕೆಗೆ ಸಿದ್ಧತೆ

  ದಾವಣಗೆರೆಯಲ್ಲಿ ಡಿಸಿ ಡಾ.ಎಂ ವಿ ವೆಂಕಟೇಶ್​ರಿಂದ ಸ್ಟ್ರಾಂಗ್ ರೂಂ ಮತ್ತು ಮತ‌ ಎಣಿಕೆ ಕೇಂದ್ರ ಪರಿಶೀಲನೆ ಮಾಡಲಾಗಿದೆ. ಮತ ಎಣಿಕೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಡಾಗ್ ಸ್ಕ್ವಾಡ್ ಮೂಲಕ ಮತ ಎಣಿಕೆ ಕೇಂದ್ರದ ಸುತ್ತ ಪರಿಶೀಲನೆ ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನ ತೊಳಹುಣಸೆ ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿ ಕ್ಯಾಂಪಸ್​ನಲ್ಲಿ ಮತ ಎಣಿಕೆ ನಡೆಯಲಿದೆ.

 • 03 Jun 2024 04:39 PM (IST)

  Lok Sabha Election Results 2024 Live: ಮತ ಎಣಿಕೆ ಕಾರ್ಯಕ್ಕೆ ಬೀದರ್ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

  ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ ಮತ ಎಣಿಕೆ ಕಾರ್ಯಕ್ಕೆ ಬೀದರ್ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿ.ವ್ಹಿ.ಭೂಮರಡ್ಡಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯದ ಅಂತಿಮ ಹಂತದ ಸಿದ್ಧತೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದ್ದಾರೆ.

 • 03 Jun 2024 04:10 PM (IST)

  Lok Sabha Election Results 2024 Live: ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ

  ಇವಿಎಂ ಮಷಿನ್​​ ಇರುವ ಕೇಂದ್ರಗಳಲ್ಲಿ ಸಿಆರ್​ಪಿಎಫ್ ಭದ್ರತೆ ಒದಗಿಸಲಾಗಿದ್ದು, ರಕ್ಷಣೆಗಾಗಿ ಕೆಎಸ್​ಆರ್​ಪಿ, ಸಿಎಆರ್​ ತುಕಡಿಗಳ ನಿಯೋಜನೆ ಮಾಡಲಾಗಿದೆ. ಕಾನೂನುಸುವ್ಯವಸ್ಥೆ, ಸೂಕ್ತ ರೆಗ್ಯುಲೇಟರಿ ವ್ಯವಸ್ಥೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಡಿಸಿಪಿ ಮಟ್ಟದ ಅಧಿಕಾರಿಗಳು ಮೇಲುಸ್ತುವಾರಿ ವಹಿಸುತ್ತಾರೆ. ಮತ ಎಣಿಕೆ ಕೇಂದ್ರಗಳ ಹೊರಗೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

 • 03 Jun 2024 04:05 PM (IST)

  Lok Sabha Election Results 2024 Live: ನಾಳೆ ಮತ ಎಣಿಕೆ ಹಿನ್ನೆಲೆ ಬೆಂಗಳೂರಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ

  ನಾಳೆ ಮತ ಎಣಿಕೆ ಹಿನ್ನೆಲೆ ಬೆಂಗಳೂರಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್​​ ಭದ್ರತೆ ನಿಯೋಜಿಸಲಾಗಿದೆ. ಮೂರು ಹಂತಗಳಲ್ಲಿ ರಕ್ಷಣೆ ಕೊಡಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.

 • 03 Jun 2024 03:22 PM (IST)

  Lok Sabha Election Results 2024 Live: ಬೆಂಗಳೂರು ನಗರದಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ

  ಬೆಂಗಳೂರು ನಗರದಲ್ಲಿ 3 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕೆ ಮೇಲ್ವಿಚಾರಕರು, ಮತಎಣಿಕೆ ಸಹಾಯಕರ ನಿಯೋಜನೆ ಮಾಡಲಾಗಿದೆ.

 • 03 Jun 2024 02:49 PM (IST)

  ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲುವುದು ನಾವೇ: ಡಿ.ಕೆ.ಶಿವಕುಮಾರ್

  ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲುವುದು ನಾವೇ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಹೋದರ ಡಿ.ಕೆ.ಸುರೇಶ್ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 • 03 Jun 2024 02:25 PM (IST)

  Lok Sabha Election Results 2024 Live: ಕರ್ನಾಟಕದಲ್ಲಿ 15-20 ಸ್ಥಾನ ಗೆಲ್ಲುತ್ತೇವೆ; ಸಿದ್ದರಾಮಯ್ಯ

  ಬೆಂಗಳೂರು: ನಾವು ಚುನಾವಣೋತ್ತರ ಸಮೀಕ್ಷೆ ಅನ್ನು ಒಪ್ಪುವುದಿಲ್ಲ.ಇದು ಪ್ರಧಾನಿ ಮೋದಿಯವರ ಮಾಧ್ಯಮ ಸಮೀಕ್ಷೆ ಕರ್ನಾಟಕದಲ್ಲಿ ನಾವು 15-20 ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 • 03 Jun 2024 12:37 PM (IST)

  Lok Sabha Election Results 2024 Live: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ; ದಿಗ್ವಿಜಯ ಸಿಂಗ್​

  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ. ಇಂಡಿಯಾ ಮೈತ್ರಿ ಕೂಟ 295 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದರು.

 • 03 Jun 2024 11:54 AM (IST)

  Lok Sabha Election Results 2024 Live: ಸಮೀಕ್ಷೆ ವಿರುದ್ಧವಾಗಿ ಫಲಿತಾಂಶ ಬರಲಿದೆ; ಸೋನಿಯಾ ಗಾಂಧಿ

  ಚುನಾವನೋತ್ತರ ಪರೀಕ್ಷೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಕಡಿಮೆ ಸ್ಥಾನಗಳು ಬಂದಿವೆ. ಈ ಕುರಿತಾ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಮಾತನಾಡಿ, ಕಾದು ನೋಡಬೇಕು ಏನಾಗುತ್ತೆ. ಸಮೀಕ್ಷೆ ವಿರುದ್ಧವಾಗಿ ಫಲಿತಾಂಶ ಬರಲಿದೆ ಎಂದು ಹೇಳಿದರು.

 • 03 Jun 2024 11:18 AM (IST)

  Lok Sabha Election Results 2024 Live: ಒಡಿಶಾ ಪ್ರಮುಖ ಆರ್ಥಿಕ ಕೇಂದ್ರವಾಗಲಿದೆ; ಕೇಂದ್ರ ಸಚಿವ

  ಒಡಿಶಾದಲ್ಲಿ ಬದಲಾವಣೆ ಗಾಳಿ ಬೀಸಿದೆ. ಪ್ರಧಾನಿ ಮೋದಿಯವರ ನಾಯಕತ್ವ ಒಪ್ಪಿ ಜನರು ಮತ ಹಾಕಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ. ಈ ಬದಲಾವಣೆಯು ಜನರ ಕಲ್ಯಾಣಕ್ಕಾಗಿ. 21 ನೇ ಶತಮಾನದಲ್ಲಿ, ಒಡಿಶಾ ಪ್ರಮುಖ ಆರ್ಥಿಕ ಕೇಂದ್ರವಾಗಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಹೇಳಿದರು.

 • 03 Jun 2024 10:45 AM (IST)

  Lok Sabha Election Results 2024 Live: ಚುನಾವಣೋತ್ತರ ಸಮೀಕ್ಷೆಗಳಿಗೆ ಯಾವುದೇ ಮೌಲ್ಯವಿಲ್ಲ; ಮಮತಾ

  ಚುನಾವಣೋತ್ತರ ಸಮೀಕ್ಷೆಗಳಿಗೆ ಯಾವುದೇ ಮೌಲ್ಯವಿಲ್ಲ. 2016 ಮತ್ತು 2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳಲ್ಲಿ ಸಮೀಕ್ಷೆದಾರರು ತಪ್ಪಾಗಿ ಭವಿಷ್ಯ ನುಡಿದಿದ್ದರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

 • 03 Jun 2024 10:22 AM (IST)

  Lok Sabha Election Results 2024 Live: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿಷೇಧ

  ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಫಲಿತಾಂಶವೂ ಪ್ರಕಟಗೊಳ್ಳಲಿದೆ. ಈ ಕಾರಣ ಜೂನ್ 4 ರಂದು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ.

 • 03 Jun 2024 09:31 AM (IST)

  Lok Sabha Election Results 2024 Live: ಬೆಂಗಳೂರಿನಲ್ಲಿ ಮತಎಣಿಕೆಗೆ ಭರ್ಜರಿ ತಯಾರಿ

  ಲೋಕಸಭಾ ಚುನಾವಣೆಯ ಮತಎಣಿಕೆಗೆ ಕೌಂಟ್ ಡೌನ್ ಶುರುವಾಗಿದೆ. ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದೆ. ಹಾಗಿದ್ದರೆ ಬೆಂಗಳೂರಿನಲ್ಲಿ ತಯಾರಿ ಹೇಗಿದೆ? ಈ ಕೆಳಗಿನ ಸುದ್ದಿ ಮೇಲೆ ಕ್ಲಿಕ್​ ಮಾಡಿ.

 • 03 Jun 2024 09:08 AM (IST)

  Lok Sabha Election Results 2024 Live: ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ

  ಜೂನ್​ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.03) ಮಧ್ಯಾಹ್ನ 12.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.

 • 03 Jun 2024 08:32 AM (IST)

  Lok Sabha Election Results 2024 Live: 24 ಗಂಟೆಯಲ್ಲಿ ಫಲಿತಾಂಶ ಹೊರಕ್ಕೆ

  ಲೋಕಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿದೆ. ಏಳು ಹಂತಗಳಲ್ಲಿ ಸುದೀರ್ಘ ಎರಡು ತಿಂಗಳುಗಳ ಕಾಲ ಮತದಾನ ನಡೆಯಿತು. ಜೂನ್​ 4 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಇನ್ನು 24 ಗಂಟೆಯಲ್ಲಿ ನಾಯಕರ ರಾಜಕೀಯ ಭವಿಷ್ಯ ತಿಳಿಯಲಿದೆ.

 • Published On - Jun 03,2024 8:29 AM

  Follow us
  ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
  ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
  ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
  ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
  ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
  ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
  ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
  ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
  ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
  ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
  ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
  ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
  ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
  ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
  ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
  ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
  ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
  ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
  ವಿಡಿಯೋ: ದರ್ಶನ್ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ನಟ ಧ್ರುವ ಸರ್ಜಾ
  ವಿಡಿಯೋ: ದರ್ಶನ್ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ನಟ ಧ್ರುವ ಸರ್ಜಾ