ಹಾವೇರಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಬಸವರಾಜ ಬೊಮ್ಮಾಯಿ ಗೆಲುವು

Haveri Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಗೆದ್ದಿದ್ದಾರೆ. ಕಾಂಗ್ರೆಸ್​​ನ ಆನಂದಸ್ವಾಮಿ ಗಡ್ಡದೇವರಮಠ ಸೋತಿದ್ದಾರೆ.​

ಹಾವೇರಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಬಸವರಾಜ ಬೊಮ್ಮಾಯಿ ಗೆಲುವು
ಬಸವರಾಜ ಬೊಮ್ಮಾಯಿ, ಆನಂದಸ್ವಾಮಿ ಗಡ್ಡದೇವರಮಠ
Follow us
ವಿವೇಕ ಬಿರಾದಾರ
|

Updated on:Jun 04, 2024 | 3:16 PM

ಹಾವೇರಿ, ಜೂನ್​ 4: 2008ರಲ್ಲಿ ಕ್ಷೇತ್ರ ಪುನರ್​ ವಿಂಗಡೆಯಾದ ಬಳಿಕ ಹಾವೇರಿ ಲೋಸಕಭಾ ಕ್ಷೇತ್ರ (Haveri Lok Sabha Constituency) ಅಸ್ತಿತ್ವಕ್ಕೆ ಬಂತು. ಕ್ಷೇತ್ರ ವಿಂಗಡಣೆ ಬಳಿಕ 2009ರಿಂದ 2019ರ ವರೆಗೂ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ (BJP) ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲ್ಲುತ್ತಾ ಬಂದಿದ್ದರು. ಶಿವಕುಮಾರ್​ ಉದಾಸಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಳಿಕ, ಈ ಬಾರಿ ಟಿಕೆಟ್​ ಅನ್ನು ಬಿಜೆಪಿ ಹಾಲಿ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ನೀಡಿತ್ತು. ಬಸವರಾಜ ಬೊಮ್ಮಾಯಿ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಎರಡು ದಶಕಗಳ ರಾಜಕೀಯ ಅನುಭವ ಹೊಂದಿರುವ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಸ್ಪರ್ಧಿಯಾಗಿದ್ದ ಆನಂದಸ್ವಾಮಿ ಗಡ್ಡದೇವರಮಠ (Anandswamy Gaddadevarmath) ಅವರು ಸೋಲುಂಡಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17,92,774 ಮತದಾರಿದ್ದಾರೆ. ಇದರಲ್ಲಿ 13,91,214 ಜನ ಮತಚಲಾಯಿಸಿದರು. 7,13,613 ಪುರುಷ, 6,77,577 ಮಹಿಳೆಯರು, 24 ಇತರೆ ಮತಚಲಾಯಿಸಿದ್ದಾರೆ. ಒಟ್ಟು ಶೇ 77.60 ರಷ್ಟು ಮತದಾನವಾಗಿದೆ.

ಈ ಹಿಂದಿನ ಚುನಾವಣೆ ಫಲಿತಾಂಶ

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 2009ರಿಂದ ಇಲ್ಲಿಯವರೆಗೂ ಬಿಜೆಪಿಯ ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ 2009ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಕುಮಾರ್ ಚನ್ನಬಸಪ್ಪ ಉದಾಸಿ ಮತ್ತು ಕಾಂಗ್ರೆಸ್​ನಿಂದ ಸಲೀಮ ಅಹ್ಮದ್​ ಸ್ಪರ್ಧಿಸಿದ್ದರು. ಬಿಜೆಪಿಯ ಶಿವಕುಮಾರ್ ಚನ್ನಬಸಪ್ಪ ಉದಾಸಿ ಅವರು ಕಾಂಗ್ರೆಸ್​ನ ಸಲೀಮ ಅಹ್ಮದ್ ಅವರ ವಿರುದ್ಧ​ 87,920 ಅಂತರದಿಂದ ಗೆದ್ದಿದ್ದರು.

ನಂತರ 2014ರಲ್ಲಿ ನಡೆದ ಚುನಾವಣೆಯಲ್ಲೂ ಬಿಜೆಪಿಯ ಶಿವಕುಮಾರ್ ಚನ್ನಬಸಪ್ಪ ಉದಾಸಿ ಅವರೇ ಗೆದ್ದಿದ್ದರು. ಇವರ ವಿರುದ್ಧ ಕಾಂಗ್ರೆಸ್​​ನಿಂದ ಮತ್ತೆ ಸಲೀಮ ಅಹ್ಮದ್ ಅವರು ಸ್ಪರ್ಧಿಸಿ ಸೋಲುಂಡರು. 2014ರಲ್ಲಿ ಶಿವಕುಮಾರ್ ಉದಾಸಿಯವರು 5,66,970 ಮತಗಳನ್ನು ಪಡೆದಿದ್ದರು. ಸಲೀಮ ಅಹ್ಮದ್​ ಅವರು 4,79,219 ಮತಗಳನ್ನು ಪಡೆದಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಂದು ಬಾರಿ ಶಿವಕುಮಾರ್ ಚನ್ನಬಸಪ್ಪ ಉದಾಸಿ ಅವರಿಗೆ ಟಿಕೆಟ್​ ನೀಡಿತ್ತು. ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿದಿದ್ದ ಉದಾಸಿಯವರು ಮೂರನೇ ಬಾರಿಗೆ ವಿಜಯಶಾಲಿಯಾಗುವ ಮೂಲಕ ಹ್ಯಾಟ್ರಿಕ್​ ಗೆಲವು ಸಾಧಿಸಿದ್ದರು. ಇನ್ನು ಇವರ ವಿರುದ್ಧ ಕಾಂಗ್ರೆಸ್​ ಡಿಆರ್​ ಪಾಟೀಲ್​ ಅವರನ್ನು ಕಣಕ್ಕೆ ಇಳಿಸಿತ್ತು.

ಈ ಚುನಾವಣೆಯಲ್ಲಿ ಶಿವಕುಮಾರ್ ಉದಾಸಿಯವರು 6,83,660 ಮತಗಳನ್ನು ಪಡೆದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಡಿಆರ್ ಪಾಟೀಲ್​ 5,42, 778 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:27 am, Tue, 4 June 24

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ