AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಕ್ಷೇತ್ರಗಳಲ್ಲಿ 7 ಶಾಸಕರಿದ್ದರೂ ಆಗ್ಲಿಲ್ಲ ವರ್ಕೌಟ್​: ಮಂಡ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳು

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಕಾಡೆ ಮಲಗಿದ್ದಾರೆ. ಯಾರು ನಿರೀಕ್ಷೆ ಮಾಡದಂತಹ ಅಂತರದಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಹೊರಗೆ ಬಂದ ನಂತರ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ. ಅದರಲ್ಲೂ ಜೆಡಿಎಸ್ ಅಭ್ಯರ್ಥಿಯಾಗಿದ್ದ ಕುಮಾರಸ್ವಾಮಿ ಗೆಲುವಿಗೆ ಹಲವು ಕಾರಣಗಳಿವೆ. ಆ ಮೂಲಕ ಅವರು ತಮ್ಮ ಮಗನ ಸೇಡು ತೀರಿಸಿಕೊಂಡಿದ್ದಾರೆ.

8 ಕ್ಷೇತ್ರಗಳಲ್ಲಿ 7 ಶಾಸಕರಿದ್ದರೂ ಆಗ್ಲಿಲ್ಲ ವರ್ಕೌಟ್​: ಮಂಡ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳು
8 ಕ್ಷೇತ್ರಗಳಲ್ಲಿ 7 ಶಾಸಕರಿದ್ದರೂ ಆಗ್ಲಿಲ್ಲ ವರ್ಕೌಟ್​: ಮಂಡ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳು
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 05, 2024 | 8:20 PM

Share

ಮಂಡ್ಯ, ಜೂನ್​ 05: ತೀವ್ರ ಕೂತುಹಲ ಮೂಡಿಸಿದ್ದ ಲೋಕಸಭಾ ಚುನಾವಣಾ ಫಲಿತಾಂಶ (Mandya Lok Sabha Constituency) ಹೊರ ಬಿದ್ದಿದೆ. ಅದರಲ್ಲೂ ರಾಜ್ಯದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಭರ್ಜರಿ ಮತಗಳಿಂದ ಗೆಲವು ಸಾಧಿಸಿದ್ದಾರೆ. ಎಂಟು ಕ್ಷೇತ್ರಗಳ ಪೈಕಿ ಏಳು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು, ಕಾಂಗ್ರೆಸ್ ಅಭ್ಯರ್ಥಿ ಮಕಾಡೆ ಮಲಗಿದ್ದಾರೆ. ಯಾರು ನಿರೀಕ್ಷೆ ಮಾಡಿರದಂತಹ ಅಂತರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಫಲಿತಾಂಶ ಹೊರಗೆ ಬಂದ ನಂತರ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ. ಅದರಲ್ಲೂ ಜೆಡಿಎಸ್ ಅಭ್ಯರ್ಥಿಯಾಗಿದ್ದ ಕುಮಾರಸ್ವಾಮಿ ಗೆಲುವಿಗೆ ಹಲವು ಕಾರಣಗಳು ಇವೆ.

ಪ್ರಮುಖವಾಗಿ ಕುಮಾರಸ್ವಾಮಿ ಅವರೇ ಸ್ವರ್ಧೆ ಮಾಡಿದ್ದು ಅವರ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಅಲ್ಲದೆ ಕುಮಾರಸ್ವಾಮಿ ಅವರ ವರ್ಚಸ್ಸು, ಮಂಡ್ಯ ಈ ಹಿಂದಿನಿಂದಲೂ ಜೆಡಿಎಸ್​ನ ಭದ್ರ ಕೋಟೆಯಾಗಿರುವುದು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಕೂಡ ವರ್ಕೌಟ್ ಆಗಿದೆ. ಅಲ್ಲದೆ ಒಕ್ಕಲಿಗರು ಪ್ರಮುಖವಾಗಿ ಹೆಚ್​ಡಿ ಕುಮಾರಸ್ವಾಮಿ ಕೈ ಹಿಡಿದ್ದಿದ್ದು ಕೂಡ ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಚುನಾವಣೆ 2024 ಫಲಿತಾಂಶ; ಮಗನ ಸೋಲಿನ ಸೇಡು ತೀರಿಸಿಕೊಂಡ ಹೆಚ್​ಡಿ ಕುಮಾರಸ್ವಾಮಿ, 2 ಲಕ್ಷಕ್ಕೂ ಅಧಿಕ ಮತಗಳಿಂದ‌ ಗೆಲುವು

ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಿ ಒಟ್ಟಾಗಿ ಕೆಲಸ ಮಾಡಿದ್ದು ಕೂಡ ಗೆಲುವಿಗೆ ಕಾರಣವಾಗಿದೆ. ಇದರ ನಡುವೆ ಕುಮಾರಸ್ವಾಮಿ ಗೆದ್ದರೇ ಕೇಂದ್ರದಲ್ಲಿ ಮಂತ್ರಿ ಆಗುತ್ತಾರೆ. ಕಾವೇರಿ ಸಮಸ್ಯೆಗೆ ಪರಿಹಾರ ಸಿಗಬಹುದು, ಎದುರಾಗಿ ಅಭ್ಯರ್ಥಿ ಹೊಸ ಮುಖ. ಕಳೆದ ಬಾರಿ ಪುತ್ರ ನಿಖಿಲ್​​ರನ್ನ ಸೋಲಿನ ಸಿಂಪತಿ. ಗ್ಯಾರಂಟಿ ಯೋಜನೆಗಳು ಕೈ ಹಿಡಿಯದ್ದೆ ಇದ್ದದ್ದು, ಕಾಂಗ್ರೆಸ್ ನಾಯಕರುಗಳ ಹೇಳಿಕೆಗಳು ಕುಮಾರಸ್ವಾಮಿ ಗೆಲುವಿಗೆ ಪ್ರಮುಖ ಅಂಶಗಳಾಗಿವೆ.

ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳಲ್ಲಿ ಆರು ಕಾಂಗ್ರೆಸ್ ಶಾಸಕರು ಹಾಗೂ ಒಬ್ಬ ಬೆಂಬಲಿತ ಶಾಸಕ ಇದ್ದರು ಕೂಡ ಮಂಡ್ಯದಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು ಆಗಿದೆ. ಈ ಚುನಾವಣೆ ಕುಮಾರಸ್ವಾಮಿ ವರ್ಸಸ್ ಚಲುವರಾಯಸ್ವಾಮಿ ಎಂಬಂತೆ ಇತ್ತು. ಆದರೂ ಕೂಡ ಅತ್ಯಾಧಿಕ ಮತಗಳಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಬಿಜೆಪಿ ಎಡವಿದ್ದೆಲ್ಲಿ? ಶ್ರೀರಾಮುಲು ಮುಂದಿನ ರಾಜಕೀಯ ಜೀವನ ಕಥೆ ಏನು?

ಇನ್ನು ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಸೋಲಿಗೆ ಪ್ರಮುಖವಾಗಿ ಕಾಂಗ್ರೆಸ್ ನಾಯಕರುಗಳ ಅತಿಯಾದ ಆತ್ಮವಿಶ್ವಾಸ. ಪ್ರಮುಖವಾಗಿ ಕ್ಷೇತ್ರಕ್ಕೆ ಪರಿಚಯವೇ ಇಲ್ಲದ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಿದ್ದು. ಗ್ಯಾರಂಟಿ ಯೋಜನೆಗಳ ಮೇಲೆ ಮಹಿಳಾ ಮತಗಳು ಕಾಂಗ್ರೆಸ್​ಗೆ ವಾಲದೆ ಇದ್ದದ್ದು. ಆರಂಭದಲ್ಲಿ ಇದ್ದ ಉತ್ಸಹ ಕೊನೆಯಲ್ಲಿ ಇಲ್ಲದೆ ಇದ್ದದ್ದು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ. ಅಲ್ಲದೆ ಪ್ರಮುಖದಲ್ಲಿ ಜಿಲ್ಲೆಯಲ್ಲಿ ಭೀಕರ ಬರ ಇದ್ದರು, ನಾಲೆಗಳಿಗೆ ನೀರು ಹರಿಸದೆ ಇದ್ದದ್ದು ಕೂಡ ಸೋಲಿಗೆ ಪ್ರಮುಖ ಕಾರಣವಾಗಿದೆ.

ಮೈತ್ರಿ ಅಭ್ಯರ್ಥಿ ಹೆಚ್​ಡಿ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿ, ಪುತ್ರ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್​ಗೆ ತೀವ್ರ ಮುಖಭಂಗವಾಗಿದ್ದು ಸೋಲಿನ ಪರಾಮರ್ಶೆಗೆ ಕಾಂಗ್ರೆಸ್ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ