AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಮಾಜಿ ಸಿಎಂಗಳಿಗೆ ಸೋಲುಣಿಸಿದ ಕಾಶ್ಮೀರಿಗರು; ಜೈಲಿಂದಲೇ ಗೆದ್ದ ‘ಉಗ್ರ’ ಆರೋಪಿ; ಪ್ರಚಾರಕ್ಕೆ ಕೇವಲ 27,000 ರೂ ವೆಚ್ಚ ಎಂದ ಮಗ

Jammu and Kashmir Lok Sabha Election Updates: ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವ ಐದು ಲೋಕಸಭಾ ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆದ್ದಿದೆ. ಎರಡು ಸ್ಥಾನಗಳು ನ್ಯಾಷನಲ್ ಕಾನ್ಫರೆನ್ಸ್ ಪಾಲಾಗಿದೆ. ಇನ್ನೊಂದು ಸ್ಥಾನ ಪಕ್ಷೇತರ ಪಾಲಾಗಿದೆ. ಉಗ್ರಗಾಮಿಗಳಿಗೆ ಫಂಡಿಂಗ್ ವ್ಯವಸ್ಥೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿ ಕಳೆದ ಐದು ವರ್ಷಗಳಿಂದ ಜೈಲಿನಲ್ಲಿರುವ ಶೇಖ್ ಅಬ್ದುಲ್ ರಷೀದ್ ಅವರು ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಸಾಜದ್ ಗಾನಿ ಲೋನೆ ವಿರುದ್ಧ ರಷೀದ್ ಗೆದ್ದಿದ್ದಾರೆ.

ಇಬ್ಬರು ಮಾಜಿ ಸಿಎಂಗಳಿಗೆ ಸೋಲುಣಿಸಿದ ಕಾಶ್ಮೀರಿಗರು; ಜೈಲಿಂದಲೇ ಗೆದ್ದ ‘ಉಗ್ರ’ ಆರೋಪಿ; ಪ್ರಚಾರಕ್ಕೆ ಕೇವಲ 27,000 ರೂ ವೆಚ್ಚ ಎಂದ ಮಗ
ಶೇಖ್ ಅಬ್ದುಲ್ ರಷೀದ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 04, 2024 | 5:57 PM

Share

ಶ್ರೀನಗರ್, ಜೂನ್ 4: ಜಮ್ಮು ಮತ್ತು ಕಾಶ್ಮೀರದಲ್ಲೂ ಈ ಬಾರಿ ಅಚ್ಚರಿಯ ಫಲಿತಾಂಶ ಬಂದಿದೆ. ಐದು ಸ್ಥಾನಗಳ ಪೈಕಿ ಬಿಜೆಪಿ ಎರಡು, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್) ಪಕ್ಷಗಳಿಗೆ ತಲಾ ಎರಡು ಸ್ಥಾನ ಸಿಕ್ಕಿವೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಜಯಿಸಿದ್ದಾರೆ. ಈ ಪಕ್ಷೇತರ ಅಭ್ಯರ್ಥಿಯೇ ಶೇಖ್ ಅಬ್ದುಲ್ ರಷೀದ್. ಜೈಲಿನಲ್ಲಿದ್ದುಕೊಂಡೇ ಚುನಾವಣೆ ಎದುರಿಸಿ ಗೆದ್ದವರು. ಅದೂ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಅವರನ್ನೇ ಸೋಲಿಸಿದ್ದಾರೆ. ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ವಿರುದ್ಧ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಿಸಿದ್ದಾರೆ. ಜಮ್ಮು ಕಾಶ್ಮೀರ್ ಪೀಪಲ್ ಕಾನ್ಫರೆನ್ಸ್ ಪಕ್ಷದಿಂದ ಸಾಜದ್ ಗಾನಿ ಲೋನೆ ಕೂಡ ಕಣದಲ್ಲಿದ್ದರು. ಅವರು ಮೂರನೇ ಸ್ಥಾನ ಪಡೆದಿದ್ದಾರೆ.

ಎಂಜಿನಿಯರ್ ರಷೀದ್ ಎಂದು ಹೆಸರಾಗಿರುವ ಶೇಖ್ ಅಬ್ದುಲ್ ರಷೀದ್ ಕಳೆದ ಐದು ವರ್ಷದಿಂದಲೂ ತಿಹಾರ್ ಜೈಲಿನಲ್ಲಿದ್ದಾರೆ. ಭಯೋತ್ಪಾದನೆಗೆ ಫಂಡಿಂಗ್ ವ್ಯವಸ್ಥೆ ಮಾಡಿರುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರು ಜೈಲಿನಲ್ಲಿದ್ದರೂ ಬಾರಾಮುಲ್ಲಾ ಕ್ಷೇತ್ರದಿಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಇದನ್ನೂ ಓದಿ: ತಮಿಳುನಾಡಿನಲ್ಲಿ ಇಂಡಿಯಾ ಬಣಕ್ಕೆ ಬಲ ತುಂಬಿದ ದ್ರಾವಿಡ ಶಕ್ತಿ; ಖಾತೆ ತೆರೆಯದ ಬಿಜೆಪಿ

ಚುನಾವಣಾ ಪ್ರಚಾರಕ್ಕೆ ಆದ ವೆಚ್ಚ ಕೇವಲ 27,000 ರೂ?

ಶೇಖ್ ಅಬ್ದುಲ್ ರಷೀದ್ ಅವರ ಪರವಾಗಿ ಪ್ರಚಾರ ನಡೆಸಿದವರು ಅವರ 22 ವರ್ಷದ ಮಗ ಅಬ್ರಾರ್ ರಷೀದ್. ಅವರ ಪ್ರಕಾರ ಸಾವಿರಾರು ಜನರು ಕಾರ್ಯಕರ್ತರಾಗಿ ಬಂದು ತಮ್ಮ ತಂದೆಯ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ವಾಹನಕ್ಕೆ ಪೆಟ್ರೋಲ್ ತುಂಬಿಸಲು 27,000 ರೂ ಖರ್ಚಾಗಿದ್ದು ಬಿಟ್ಟರೆ ತಮ್ಮ ಕೈಯಿಂದ ಬೇರೆ ಯಾವ ವೆಚ್ಚವೂ ಆಗಿಲ್ಲ ಎನ್ನುತ್ತಾರೆ ಅಬ್ರಾರ್.

ತಮ್ಮ ತಂದೆ ಈ ಚುನಾವಣೆಯಲ್ಲಿ ಅಭೂತಪೂರ್ವ ರೀತಿಯಲ್ಲಿ ಗೆಲುವು ಸಾಧಿಸಿರುವುದು ಅವರು ನಿರ್ದೋಷಿ ಎಂಬುದನ್ನು ತೋರಿಸುತ್ತದೆ. ಸರ್ಕಾರ ಕೂಡಲೇ ತಮ್ಮ ತಂದೆಯನ್ನು ಬಿಡುಗಡೆ ಮಾಡಬೇಕು ಎಂದು ಅಬ್ರಾರ್ ರಷೀದ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣಾಮಲೈ ಸೋಲು ಖಚಿತ; ಮಟನ್ ಬಿರಿಯಾನಿ ಹಂಚಿ ಸಂಭ್ರಮಿಸಿದ ಡಿಎಂಕೆ

ಇದೇ ವೇಳೆ, ಜಮ್ಮು ಕಾಶ್ಮೀರದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಕೂಡ ಸೋಲನುಭವಿಸಿದ್ದಾರೆ. ಅನಂತನಾಗ್ ರಾಜೋರಿ ಲೋಕಸಭಾ ಕ್ಷೇತ್ರದಲ್ಲಿ ಅವರಿಗೆ ಸೋಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಉಧಮ್​ಪುರ್ ಮತ್ತು ಜಮ್ಮು ಕ್ಷೇತ್ರಗಳಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಿದೆ.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!