ಕಲಬುರಗಿ, ಜೂನ್ 04: ತೊಗರಿ ಕಣಜ ಕಲಬುರಗಿ ಲೋಕಸಭಾ ಕ್ಷೇತ್ರ (Kalaburagi Lok Sabha Constituency) ತೀರ್ವ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ (Radhakrishna Doddamani) ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ (Umesh Jadav) ಸ್ಪರ್ಧಿಸಿದ್ದರು. ಕಾಂಗ್ರೆಸ್ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರೇವು ನಾಯಕ್ ಬೆಳಮಗಿ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋಲುಂಡರು. ಕಾಂಗ್ರೆಸ್ನ ಮಲ್ಲಿಕಾರ್ಜುನ್ ಖರ್ಗೆ ಅವರು 5,07,193 ಮತಗಳನ್ನು ಪಡೆದಿದ್ದರು. ಬಿಜೆಪಿಯ ರೇವು ನಾಯಕ್ ಬೆಳಮಗಿ ಅವರು 4,32,460 ಮಗಳನ್ನು ತಮ್ಮದಾಗಿಸಿಕೊಂಡಿದ್ದರು.
2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡರು. ಉಮೇಶ್ ಜಾಧವ್ ಅವರಿಗೆ 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್ ಖರ್ಗೆ ಅವರು 5,24,740 ಮತಗಳನ್ನು ಪಡೆದಿದ್ದರು.
ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:00 am, Tue, 4 June 24