ಕರ್ನಾಟಕ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಫಲಿತಾಂಶ Karnataka Lok Sabha Candidates Election 2024 Result

ದೇಶದಲ್ಲಿ ಈಗಾಗಲೇ ಲೋಕಸಭಾ ಚುನಾವಣೆಯ ಗೌಜು ಆರಂಭವಾಗಿದೆ. ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಇನ್ನು ಕರ್ನಾಟಕದಲ್ಲಿ 28 ಕ್ಷೇತ್ರಗಳಿಗೆ 2024ರ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆಯಲಿರುವ ಎರಡು ಹಂತದ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಗೆಲ್ಲಲು ಕಸರತ್ತು ಶುರುಮಾಡಿವೆ. 
ಕರ್ನಾಟಕದಲ್ಲಿ, 2014 ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಕ್ಷೇತ್ರಗಳಲ್ಲಿ ಗೆದ್ದರೆ,  9ರಲ್ಲಿ ಕಾಂಗ್ರೆಸ್ ಮತ್ತು 2 ಕ್ಷೇತ್ರಗಳಲ್ಲಿ ಜೆಡಿಎಸ್ ಜಯಗಳಿಸಿತ್ತು. ಇದಾದ ಬಳಿಕ 2019ರಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂದಿದ್ದರೂ ಸಹ ಬಿಜೆಪಿ ಬರೋಬ್ಬರಿ 25 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದ್ದವು. ಇನ್ನು ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈಗ ಅಂದರೆ 2024 ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣ ತೀವ್ರ ಕುತೂಹಲ ಮೂಡಿಸಿದೆ

Karnataka 2024 ರ ಅಭ್ಯರ್ಥಿಗಳ ಪಟ್ಟಿ

ದೇಶದಲ್ಲಿ ಪ್ರಜಾಪ್ರಭುತ್ವ ರಚನೆಯಾದಾಗ ಒಟ್ಟು ಲೋಕಸಭೆ ಸ್ಥಾನಗಳ ಸಂಖ್ಯೆ 500. ಆದಾಗ್ಯೂ, ಜನಸಂಖ್ಯೆಯ ಹೆಚ್ಚಳದೊಂದಿಗೆ, ಕಾಲಕಾಲಕ್ಕೆ ಡಿಲಿಮಿಟೇಶನ್‌ಗಳು ನಡೆಯುತ್ತಲೇ ಇದ್ದವು ಮತ್ತು ಕೊನೆಯದಾಗಿ ಕ್ಷೇತ್ರ ಮರುವಿಂಗಡಣೆಯಾಗಿದ್ದು 2008ರಲ್ಲಿ. ಇದರಲ್ಲಿ ಒಟ್ಟು 573 ಸ್ಥಾನಗಳು ರಚನೆಯಾಗಿವೆ. ಈಗ ದೇಶದ ಮುಂದಿನ ಕ್ಷೇತ್ರ ಮರುವಿಂಗಡಣೆ 2026 ರಲ್ಲಿ ನಡೆಯಲಿದೆ. ಒಂದು ಅಂದಾಜಿನ ಪ್ರಕಾರ, ಆ ಕ್ಷೇತ್ರ ಮರುವಿಂಗಡಣೆ  ನಂತರ, ದೇಶದಲ್ಲಿ ಇನ್ನೂ 78 ಸ್ಥಾನಗಳು ಹೆಚ್ಚಾಗುತ್ತವೆ. ದಕ್ಷಿಣ ರಾಜ್ಯವಾದ ತಮಿಳುನಾಡಿನಲ್ಲಿ 9, ಕೇರಳದಲ್ಲಿ 6, ಕರ್ನಾಟಕದಲ್ಲಿ 2 ಮತ್ತು ಆಂಧ್ರಪ್ರದೇಶದಲ್ಲಿ 5 ಕ್ಷೇತ್ರಗಳು ಹೆಚ್ಚಾಗುವ ಸಾಧ್ಯತೆ ಇದೆ. ಅದೇ ರೀತಿ, ತೆಲಂಗಾಣದಲ್ಲಿ 2, ಒಡಿಶಾದಲ್ಲಿ 3, ಗುಜರಾತ್‌ನಲ್ಲಿ 6, ಉತ್ತರ ಪ್ರದೇಶದಲ್ಲಿ 14 ಮತ್ತು ಬಿಹಾರದಲ್ಲಿ 11 ಲೋಕಸಭಾ ಸ್ಥಾನಗಳು ಹೆಚ್ಚಾಗುವ ನಿರೀಕ್ಷೆಯಿದೆ. 
ಈ ಅನುಕ್ರಮದಲ್ಲಿ, ಛತ್ತೀಸ್‌ಗಢದಲ್ಲಿ 1, ಮಧ್ಯಪ್ರದೇಶದಲ್ಲಿ 5, ಜಾರ್ಖಂಡ್‌ನಲ್ಲಿ 1, ರಾಜಸ್ಥಾನದಲ್ಲಿ 7 ಮತ್ತು ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ತಲಾ 2 ಸ್ಥಾನಗಳು ಹೆಚ್ಚಾಗಬಹುದು. ಪ್ರಸ್ತುತ ಉತ್ತರ ಪ್ರದೇಶವು ಗರಿಷ್ಠ 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಈ ಪೈಕಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ವಾರಣಾಸಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. 
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಉತ್ತರ ಪ್ರದೇಶದ ಲಕ್ನೋದಿಂದ ಗೆದ್ದು ಸಂಸತ್ತಿಗೆ ಆಗಮಿಸಿದ್ದಾರೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 26 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಗುಜರಾತ್‌ನಿಂದ ಆಯ್ಕೆಯಾಗಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಒಟ್ಟು 48, ಪಶ್ಚಿಮ ಬಂಗಾಳದಲ್ಲಿ 42, ಬಿಹಾರದಲ್ಲಿ 40 ಮತ್ತು ತಮಿಳುನಾಡಿನಲ್ಲಿ 39 ಲೋಕಸಭಾ ಸ್ಥಾನಗಳಿವೆ.

ಪ್ರಶ್ನೆ: ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ ಯಾವ ಪಕ್ಷ ಎಷ್ಟು ಸೀಟು ಗೆದ್ದಿದ್ದವು?
ಉತ್ತರ: ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರ 1.

ಪ್ರಶ್ನೆ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆದ್ದ ಏಕೈಕ ಕಾಂಗ್ರೆಸ್ ಸಂಸದ ಯಾರು?
ಉತ್ತರ: ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ)

ಪ್ರಶ್ನೆ:  ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ ಕಿರಿಯ ಸಂಸದ ಯಾರು?
ಉತ್ತರ: ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ)

ಪ್ರಶ್ನೆ: 2019ರ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಯಾವೆಲ್ಲ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು?
ಉತ್ತರ: ಕಾಂಗ್ರೆಸ್ ಮತ್ತು ಜೆಡಿಎಸ್

ಪ್ರಶ್ನೆ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸಂಸತ್​ಗೆ ಪ್ರವೇಶಿಸಿದ್ದ ಮಹಿಳೆಯರ ಸಂಖ್ಯೆ ಎಷ್ಟು ಮತ್ತು ಅವರ ಹೆಸರು?
ಉತ್ತರ: ಇಬ್ಬರು ಮಹಿಳೆಯರು( ಶೋಭಾ ಕರಂದ್ಲಾಜೆ, ಸುಮಲತಾ ಅಂಬರೀಶ್)

ಪ್ರಶ್ನೆ: ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತ ಹಿರಿಯ ಮತ್ತು ಪ್ರಭಾವಿ ನಾಯಕ ಯಾರು?
ಉತ್ತರ: ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ(ತುಮಕೂರು ಕ್ಷೇತ್ರದಿಂದ ಸೋಲು)

ವಿಡಿಯೋ