India General Election Highlights Counting and Result Updates in Kannada: ಬಹುನಿರೀಕ್ಷಿತ, ಎಲ್ಲರೂ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಬಹು ಯಶಸ್ವಿಯೊಂದಿಗೆ 18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದು, ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಹೊರಬಿದ್ದಿದೆ. ಲೋಕಸಭಾ ಚುನಾವಣಾ 2024 ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09 ಮತ್ತಯ ಜೆಡಿಎಸ್ 02 ಸ್ಥಾನ ಪಡೆದುಕೊಂಡಿದೆ. ಸುಮಾರು 15 ಸ್ಥಾನಗಳಲ್ಲಿ ಗೆಲ್ಲುವುವ ವಿಶ್ವಾಸದಲ್ಲಿ ಕಾಂಗ್ರೆಸ್ ನಿರಾಸೆಯಾಗಿದೆ. ಇನ್ನು ಬಿಜೆಪಿ ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಬಾರಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸದಲ್ಲಿತ್ತು. ಆದ್ರೆ ಬಿಜೆಪಿ 25ರಿಂದ 17ಕ್ಕೆ ಕುಸಿದಿದೆ. ಇನ್ನು ಬಿಜೆಪಿಯ ಮಿತ್ರ ಪಕ್ಷ ಸ್ಪರ್ಧೆ ಮಾಡಿದ್ದ ಮೂರಲ್ಲಿ ಎರಡು ಸ್ಥಾನ ಗೆದ್ದು ಗಮನಾರ್ಹ ಸಾಧನೆ ಮಾಡಿದೆ.
ಕರ್ನಾಟಕ ಲೋಕಸಭೆ ಚುನಾವಣೆ ಫಲಿತಾಂಶ 2024ರ ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ.
ಲೋಕಸಭಾ ಚುನಾವಣಾ 2024 ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09 ಮತ್ತಯ ಜೆಡಿಎಸ್ 02 ಸ್ಥಾನ ಪಡೆದುಕೊಂಡಿದೆ. ಸುಮಾರು 15 ಸ್ಥಾನಗಳಲ್ಲಿ ಗೆಲ್ಲುವುವ ವಿಶ್ವಾಸದಲ್ಲಿ ಕಾಂಗ್ರೆಸ್ ನಿರಾಸೆಯಾಗಿದೆ. ಇನ್ನು ಬಿಜೆಪಿ ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಬಾರಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸದಲ್ಲಿತ್ತು. ಆದ್ರೆ ಬಿಜೆಪಿ 25ರಿಂದ 17ಕ್ಕೆ ಕುಸಿದಿದೆ. ಇನ್ನು ಬಿಜೆಪಿಯ ಮಿತ್ರ ಪಕ್ಷ ಸ್ಪರ್ಧೆ ಮಾಡಿದ್ದ ಮೂರಲ್ಲಿ ಎರಡು ಸ್ಥಾನ ಗೆದ್ದು ಗಮನಾರ್ಹ ಸಾಧನೆ ಮಾಡಿದೆ.
ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ರಾಷ್ಟ್ರಪತಿ ಏನು ಮಾಡ್ತಾರೋ ಗೊತ್ತಿಲ್ಲ. ಯಾರನ್ನೇ ಕರೆದ್ರು ವಿಶ್ವಾಸಮತ ಸಾಬೀತು ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸಕ್ಸಸ್ ಆಗಿಲ್ಲ. ಮೈತ್ರಿ ಸಕ್ಸಸ್ ಆಗಿದ್ರೆ ಕಾಂಗ್ರೆಸ್ ಇಷ್ಟು ಗೆಲ್ಲುತ್ತಿರಲಿಲ್ಲ. ರಾಜ್ಯದಲ್ಲಿ ಕಳೆದ ಬಾರಿಗಿಂತ ಹೆಚ್ಚು ಸೀಟ್ ಗೆದ್ದಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮತ ಪ್ರಮಾಣವೂ ಹೆಚ್ಚಾಗಿದೆ. ಮೇಲ್ನೋಟಕ್ಕೆ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ.
ಸಿಎಂಗಳನ್ನು ಜೈಲಿಗೆ ಕಳಿಸಿದರು, ಇಡಿ, ಸಿಬಿಐ ಬಳಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆ ಆಗಿದೆ. ರಾಹುಲ್ ಗಾಂಧಿ ನಾಯಕತ್ವಕ್ಕೆ ಬೆಂಬಲ ಸಿಕ್ಕಿದೆ. ಭಾರತ್ ಜೋಡೋ ಯಾತ್ರೆ, ನ್ಯಾಯ್ ಯಾತ್ರೆಗೆ ಮನ್ನಣೆ ಸಿಕ್ಕಿದೆ. ರಾಹುಲ್ ಯಾತ್ರೆಗಳಿಂದಲೇ ಮೈತ್ರಿ ಅಭ್ಯರ್ಥಿಗಳು ಹೆಚ್ಚು ಗೆದ್ದಿದ್ದಾರೆ. ಎರಡೂ ಕ್ಷೇತ್ರದಲ್ಲಿ ಗೆದ್ದಿರುವ ರಾಹುಲ್ ಗಾಂಧಿಗೆ ಅಭಿನಂದನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು ಜನ ಮತ ನೀಡಿದ್ದಾರೆ ಎಂದರು.
ಪ್ರಧಾನಿ ಮೋದಿಗೆ ಸೋಲುವ ಭೀತಿ ಇತ್ತು. ಹೀಗಾಗಿ ಧರ್ಮದ ಹೆಸರಿನಲ್ಲಿ ಪ್ರಧಾನಿ ಮೋದಿ ಮತ ಕೇಳಿದ್ದರು. ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಕೊಡುತ್ತಾರೆಂದು ಹೇಳಿದ್ದರು. ಆದರೆ ಚುನಾವಣೆಯಲ್ಲಿ ಇದ್ಯಾವುದೂ ವರ್ಕ್ಔಟ್ ಆಗಿಲ್ಲ. ಬಿಜೆಪಿಗೆ ಕಳೆದ ಬಾರಿಗಿಂತ ಸೀಟ್ ಕಡಿಮೆಯಾಗಿವೆ. ಪ್ರಧಾನಿ ಆಗಲು ನರೇಂದ್ರ ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಾರಿ ಯಾವುದೇ ಪಕ್ಷಕ್ಕೂ ಪೂರ್ಣ ಬಹುಮತ ಬಂದಿಲ್ಲ. ಈ ಬಾರಿ ಎಲ್ಲೂ ನರೇಂದ್ರ ಮೋದಿ ಅಲೆ ಇಲ್ಲ. ಮೋದಿಯವರ ಜನಪ್ರಿಯತೆ ಕುಗ್ಗಿದೆ. ಈ ಫಲಿತಾಂಶದಿಂದ ಅದು ಸ್ಪಷ್ಟವಾಗಿದೆ. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದು, ಕರ್ನಾಟಕ ಹಾಗೂ ದೇಶದ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯದಲ್ಲಿ ಮತದಾನ, ಮತ ಎಣಿಕೆ ವೇಳೆ ಅಹಿತಕರ ಘಟನೆ ನಡೆದಿಲ್ಲ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ನಿರೀಕ್ಷೆಯಂತೆ ರಾಜ್ಯದಲ್ಲಿ ಹೆಚ್ಚು ಸೀಟ್ ಗೆಲ್ಲಲು ಆಗಿಲ್ಲ ಎಂದಿದ್ದಾರೆ.
ಲೋಕಸಭಾ ಚುನಾವಣಾ 2024 ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09 ಮತ್ತಯ ಜೆಡಿಎಸ್ 02 ಸ್ಥಾನ ಪಡೆದುಕೊಂಡಿದೆ. ಸುಮಾರು 15 ಸ್ಥಾನಗಳಲ್ಲಿ ಗೆಲ್ಲುವುವ ವಿಶ್ವಾಸದಲ್ಲಿ ಕಾಂಗ್ರೆಸ್ ನಿರಾಸೆಯಾಗಿದೆ. ಇನ್ನು ಬಿಜೆಪಿ ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಬಾರಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸದಲ್ಲಿತ್ತು. ಆದ್ರೆ ಬಿಜೆಪಿ 25ರಿಂದ 17ಕ್ಕೆ ಕುಸಿದಿದೆ. ಇನ್ನು ಬಿಜೆಪಿಯ ಮಿತ್ರ ಪಕ್ಷ ಸ್ಪರ್ಧೆ ಮಾಡಿದ್ದ ಮೂರಲ್ಲಿ ಎರಡು ಸ್ಥಾನ ಗೆದ್ದು ಗಮನಾರ್ಹ ಸಾಧನೆ ಮಾಡಿದೆ.
ಜನರ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸುತ್ತೇವೆ ಎಂದು ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದ ಜನತೆ ಪ್ರಜ್ಞಾವಂತರು, ಅದನ್ನು ಪ್ರಶ್ನೆ ಮಾಡಲ್ಲ. ಕರ್ನಾಟಕದಲ್ಲಿ ನಮಗೆ ಇನ್ನೂ ಹೆಚ್ಚಿನ ಸೀಟ್ ಗೆಲ್ಲುವ ನಿರೀಕ್ಷೆ ಇತ್ತು. ಸೋತ ಕ್ಷೇತ್ರಗಳಲ್ಲಿನ ವರದಿ ತರಿಸಿಕೊಂಡು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಭದ್ರಕೋಟೆಯನ್ನ ಮತ್ತೆ ಕಾಂಗ್ರೆಸ್ ಕಬ್ಜ ಮಾಡಿದೆ. 27,205 ಮತಗಳ ಅಂತರದಿಂದ ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಜಯಭೇರಿ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ 625116 ಮತಗಳನ್ನು ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಅಂತಿಮ ಮತದಾನದ ವಿವರ ಹೀಗಿದೆ. ವಿಜೇತ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪಡೆದ ಒಟ್ಟು ಮತಗಳು: 6,71,039 (6,67,441 +3,598 ಅಂಚೆ ಮತಗಳು). ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪಡೆದ ಒಟ್ಟು ಮತಗಳು: 6,02,640 (6,00,741+ 1,899 ಅಂಚೆ ಮತಗಳು) ಬಿಜೆಪಿ ಪಡೆದ ಒಟ್ಟು ಲೀಡ್: 68,399 ಮತಗಳು.
ಎರಡನೇ ಬಾರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸಂಸತ್ನಲ್ಲಿ ಪ್ರತಿನಿಧಿಸುವ ಅವಕಾಶ ನೀಡಿದ್ದಾರೆ. 2.44 ಲಕ್ಷದ ಮತಗಳ ಅಂತರದಿಂದ ಗೆಲುವು ತಂದಿದ್ದಾರೆ. ಪ್ರಧಾನಿ ಮೋದಿಯವರು ಮತ್ತೆ ಆಡಳಿತ ಮಾಡಬೇಕು. ತೇಜಸ್ವಿಸೂರ್ಯ ಮತ್ತೆ ಸಂಸದರಾಗಬೇಕು ಅಂತಾ ಜನರು ಆರ್ಶಿವಾದ ಮಾಡಿದ್ದಾರೆ. ನನ್ನ ಕ್ಷೇತ್ರದ ಜನರಿಗೆ ಶಿರಬಾಗಿ ನಮಿಸುತ್ತೇನೆ ಎಂದು ತೇಜಸ್ವಿಸೂರ್ಯ ಹೇಳಿದ್ದಾರೆ.
ಕರ್ನಾಟಕ ಫಲಿತಾಂಶವನ್ನ ತುಂಬು ಹೃದಯದಿಂದ ಸ್ವಾಗತ ಮಾಡುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸರ್ಕಾರದಲ್ಲಿ 136 ಶಾಸಕರಿದ್ದಾರೆ. ದುರಹಂಕಾರದಿಂದ ಆಡಳಿತ ನಡೆಸುತ್ತಿದ್ದರು. ಗ್ಯಾರಂಟಿ ಕೈ ಹಿಡಿದಿಲ್ಲ, ಅವರ ಶಾಸಕರುಕೂಡ ಕೈ ಹಿಡಿದಿಲ್ಲ. ಕಾಂಗ್ರೆಸ್ ದುಡ್ಡು ಫಲ ನೀಡಿಲ್ಲ. ಡಿಕೆ ಸಹೋದರ ಸುರೇಶ್ ಅವರೇ ಸೋಲನ್ನಪ್ಪಿದ್ದಾರೆ ಎಂದಿದ್ದಾರೆ.
ಈ ಗೆಲುವು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಬಿಜೆಪಿ ಅಭ್ಯರ್ಥಿ ಕಾಗೇರಿ ಹೇಳಿದ್ದಾರೆ. ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಂಘಟಿತ ಪ್ರಯತ್ನದಿಂದ ಚುನಾವಣೆ ಯಶಸ್ಸಿಗೆ ಕಾರಣವಾಗಿದೆ. ವ್ಯಕ್ತಿ ಆಧಾರಿತ ಪಕ್ಷ ನಮ್ಮದಲ್ಲ ಎಂದು ಜನ ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಗೆಲುವು ಹಿನ್ನಲೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ. ಹಾವೇರಿ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ಮಾಡಿ ಬಣ್ಣ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮಂಡ್ಯದಲ್ಲಿ ಅಂತಿಮ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಹೆಚ್ಡಿ ಕುಮಾರಸ್ವಾಮಿ 8,47,482 ಮತಗಳನ್ನು ಪಡೆದುಕೊಂಡಿದ್ದು, ಸ್ಟಾರ್ ಚಂದ್ರು- 5,64,778 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು 2,82,704 ಮತಗಳಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಅಂಚೆ ಮತ್ತು ಸೇವಾ ಮತಗಳ ಫಲಿತಾಂಶ ಬಾಕಿ ಇದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದಿದ್ದು, ಬಿಜೆಪಿ ಅಭ್ಯರ್ಥಿ ಕಾರಜೋಳಗೆ 47958 ಮತಗಳಿಂದ ಜಯಶಾಲಿಯಾಗಿದ್ದಾರೆ. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಗೆ ಸೋಲಾಗಿದೆ. ಗೋವಿಂದ ಕಾರಜೋಳಗೆ 681217 ಮತ, ಬಿ.ಎನ್.ಚಂದ್ರಪ್ಪಗೆ 634152 ಮತ ಪಡೆದುಕೊಂಡಿದ್ದಾರೆ.
ಡಾ. ಸಿ ಎನ್ ಮಂಜುನಾಥ್ ಪ್ರಥಮ ಬಾರಿಗೆ ಸ್ಪರ್ಧಿಸಿ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ. ಮಂಜುನಾಥ್ ಅವರು 9,80,833 ಮತಗಳಿಸಿದ್ದು ಡಿಕೆ ಸುರೇಶ್ 7,50,886 ಮತ ಪಡೆದಿದ್ದಾರೆ. ಮೂಲಕ ಬಿಜೆಪಿ ಅಭ್ಯರ್ಥಿ 2,29,947 ಅಂತರದಲ್ಲಿ ಗೆದ್ದಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಿದ್ದಾರೆ.
ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಗೆ ಭರ್ಜರಿ ಗೆಲುವು. 1 ಲಕ್ಷ 25 ಸಾವಿರ ಅಧಿಕ ಮತಗಳಿಂದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಾಗರ್ ಖಂಡ್ರೆ ಗೆದ್ದು ಬೀಗಿದ್ದಾರೆ. 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಚಿಕ್ಕ ಸಂಸದನಾಗಿ ಆಯ್ಕೆ ಆಗಿದ್ದಾರೆ. 2 ವರ್ಷ ಸಂಸದರಾಗಿ ಕೇಂದ್ರ ಸಚಿವರಾಗಿದ್ದ ಖೂಬಾಗೆ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಮಾಜಿ ಸಚಿವ ಭೀಮಣ್ಣ ಖಂಡ್ರೆ ಮೊಮ್ಮಗ, ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಪ್ರಥಮ ಬಾರಿ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದಾರೆ.
ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ. ಇದುವರೆಗೆ ನಾಲ್ಕು ಬಾರಿ ಮಾತ್ರ ಸತತವಾಗಿ ಗೆದ್ದಿದ್ದ ಉದಾಹರಣೆ ಇತ್ತು. ಆದ್ರೆ ಈಗ ಹೊಸ ದಾಖಲೆ ಬರೆದಿದ್ದಾರೆ. 80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ NDAಗೆ ಕಡಿಮೆ ಸ್ಥಾನ ಹಿನ್ನೆಲೆ ಫಲಿತಾಂಶ ನೋಡಿ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ನಡೆದಿದೆ. ಶಿವಪ್ರಕಾಶ್ ಹಿರೇಮಠ ಎಂಬ ವ್ಯಕ್ತಿ ಮೃತ ದುರ್ದೈವಿ. ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದ ಶಿವಪ್ರಕಾಶ್, ಮನೆಯಲ್ಲಿ ಟಿವಿ ನೋಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಸಲ ಬಿಜೆಪಿ ಕಮಾಲ್ ಅರಳಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲವು ಸಾಧಿಸಿದ್ದಾರೆ. ವಲಸಿಗ ಎನ್ನುವ ಹಣೆಪಟ್ಟಿ ಇದ್ರು ಗೆದ್ದು ಬೀಗಿದ್ದಾರೆ. ಉತ್ತರ ಕರ್ನಾಟಕದ ಏಕೈಕ ಮಹಿಳಾ ಸಂಸದೆ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಿಸಿ ಜಗದೀಶ ಶೆಟ್ಟರ್ಗೆ ವರಿಷ್ಠರು ಮಣೆ ಹಾಕಿದ್ದರು. ಕಾಂಗ್ರೆಸ್ ಪಕ್ಷ ಶೆಟ್ಟರ್ ವಿರುದ್ಧ ಮನೆ ಮಗ, ವಲಸಿಗ ಎನ್ನು ಅಸ್ತ್ರ ಪ್ರಯೋಗಿಸಿತ್ತು. ಜಗದೀಶ್ ಶೆಟ್ಟರ್ ಅಡ್ರಸ್ ಕೇಳಿದ್ದ ಹೆಬ್ಬಾಳ್ಕರ್ ಗೆ ಮುಖಭಂಗವಾಗಿದೆ. ಲಿಂಗಾಯತ, ಮರಾಠ ಮತದಾರರು ಮತ್ತೊಮ್ಮೆ ಬಿಜೆಪಿ ಕೈ ಹಿಡಿದಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಭದ್ರಕೋಟೆ ಮತ್ತಷ್ಟು ಬೀಗಿಯಾಗಿದೆ.
ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಜಯಭೇರಿ ಭಾರಿಸಿದ್ದಾರೆ. 45,000 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಗೆಲುವಿನ ನಂತರ ಮಾತನಾಡಿದ ರಾಜಶೇಖರ್, ಎಲ್ಲಾ ಮುಖಂಡರು ಸೇರಿ ನನಗೆ ಟಿಕೆಟ್ ಕೊಡಿಸಿದ್ದರು. ನನ್ನ ಪರವಾಗಿ ಕೆಲಸ ಮಾಡಿ ಗೆಲ್ಲಿಸಿದ್ದಾರೆ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇನೆ. ಬಿಜೆಪಿ ಹವಾ ಇದೆ ಅಂತ ಎಲ್ಲಾರು ಹೇಳ್ತಿದ್ದರು. ಆದರೆ ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇನೆ ಎಂದು ತಿಳಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರಿಗೆ ಗೆಲುವಿನ ಮುನ್ಸೂಚನೆ ಸಿಗುತ್ತಿದ್ದಂತೆ ಟೆಂಪಲ್ ರನ್ ಶುರು ಮಾಡಿದ್ದಾರೆ. ಧಾರವಾಡದ ನುಗ್ಗಿಕೇರಿ ಹುನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪ್ರಹ್ಲಾದ್ ಜೋಶಿಗೆ ಶಾಸಕ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕ ಅಮೃತ ದೇಸಾಯಿ ಸೇರಿ ಹಲವರು ಸಾಥ್ ನೀಡಿದ್ದಾರೆ.
ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು ಹಿನ್ನೆಲೆ ಹೆಚ್ಡಿ ಕುಮಾರಸ್ವಾಮಿ ಅವರು ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಮಂಡ್ಯ ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸುವೆ. ಮೈತ್ರಿ ಅಭ್ಯರ್ಥಿಗಳನ್ನು ಆಶೀರ್ವದಿಸಿದ ಜನತೆಗೆ ಧನ್ಯವಾದ. ಎನ್ಡಿಎ ಸರ್ಕಾರದ ಬಗ್ಗೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಅಪಪ್ರಚಾರದ ನಡುವೆ ಎನ್ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಮೋದಿ ನೇತೃತ್ವದ ಸರ್ಕಾರ ರಚನೆಗೆ ಬಹುಮತ ಬರಲಿದೆ ಎಂದರು.
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಚಿಕ್ಕೋಡಿಯಲ್ಲಿ ಮಗಳ ಗೆಲುವಿಗೆ ಗ್ಯಾರಂಟಿ ಕೈ ಹಿಡಿದಿದೆ ಎಂದು ಟಿವಿ9ಗೆ ಸಚಿವ ಸತೀಶ್ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ಪುತ್ರಿ ಗೆಲ್ತಾರೆ ಅನ್ನೋ ನೀರಿಕ್ಷೆ ಇತ್ತು. ಇನ್ನೇನು ಘೋಷಣೆಯೊಂದೆ ಬಾಕಿ ಇದೆ. ಪುತ್ರಿ ಗೆಲುವಿಗೆ ಗ್ಯಾರಂಟಿಗಳು ಕಾರಣವಾಗಿದೆ. ಬೆಳಗಾವಿಯಲ್ಲಿ ಮತದಾರ ಬಿಜೆಪಿ ಪರ ಇದಾರೆ, ಜನರ ತೀರ್ಪು ಒಪ್ಪ ಬೇಕು. ಎಕ್ಸಿಟ್ ಪೋಲ್ ಕೂಡಾ ಸುಳ್ಳಾಗಿವೆ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ.
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು.
ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಎರಡು ದಶಕಗಳ ಬಳಿಕ ಕಾಂಗ್ರೆಸ್ ಸಂಸತ್ ಸ್ಥಾನ ಗೆದ್ದಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿಸುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಸೋಲಿಸಿದ ಪುಟ್ಟಸ್ವಾಮಿಗೌಡರ ಮೊಮ್ಮಗನಿಂದ ದೇವೇಗೌಡರ ಮೊಮ್ಮಗನಿಗೆ ಸೋಲು.
ಮಂಡ್ಯ ಕ್ಷೇತ್ರದಲ್ಲಿ ಹೆಚ್ಡಿ ಕುಮಾರಸ್ವಾಮಿಗೆ ಭಾರಿ ಮುನ್ನಡೆಯಾಗಿದೆ. ಹೆಚ್.ಡಿ.ಕುಮಾರಸ್ವಾಮಿ -6,026,85 ಮತ ಪಡೆದಿದ್ದಾರೆ. ಸ್ಟಾರ್ ಚಂದ್ರು 3,81,158 ಮತ ಪಡೆದಿದ್ದು ಹೆಚ್.ಡಿ.ಕುಮಾರಸ್ವಾಮಿ 2,21,527 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಗೇರಿ 2,33,205 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ 80,776 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ -4,19,118, ಕಾಂಗ್ರೆಸ್ ರಕ್ಷಾ ರಾಮಯ್ಯ -3,38,342 ಮತ.
ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿ ಬಳಿ ಸಂಭ್ರಮಾಚರಣೆ. ಸಿಹಿ ಹಂಚಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಪರ ಘೋಷಣೆ ಕೂಗಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. 45,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ 63,008 ಮತಗಳ ಅಂತರ ಕಾಯ್ದುಕೊಂಡಿದ್ದು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.
ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಮಣ್ಣಗೆ ಭರ್ಜರಿ ಮುನ್ನಡೆ. 16ನೇ ಸುತ್ತಿನಲ್ಲಿ 101476 ಮತಗಳ ಅಂತರ ಕಾಯ್ದುಕೊಂಡ ಸೋಮಣ್ಣ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯ.
13ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನೆಡೆ
ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ – 4,02,905
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ -2,78,929
ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ – 15,626
ಬಿಜೆಪಿ ಮುನ್ನಡೆ – 1,23,976
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ – 3,72,422. ಕಾಂಗ್ರೆಸ್ನ ರಾಜೀವ್ ಗೌಡ -2,65,915 ಮತಗಳನ್ನು ಪಡೆದಿದ್ದು ಬಿಜೆಪಿ 1,06,507 ಮತಗಳ ಮುನ್ನಡೆ ಸಾಧಿಸಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಭಾರೀ ಹಿನ್ನಡೆ. 10ನೇ ಸುತ್ತಿನಲ್ಲೂ ಶ್ರೀರಾಮುಲುಗೆ ಹಿನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ – 5,24,034, ಬಿಜೆಪಿ – 4,45,908
ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ -3,96,950 ಮತ. ಕೈ ಅಭ್ಯರ್ಥಿ ಎಂ.ಲಕ್ಷ್ಮಣ್ -3,10,311 ಮತ
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. 7ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 2,96,706 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ 2,28,310 ಮತ ಪಡೆದಿದ್ದಾರೆ.
ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ನಿಂತ ಹೆಚ್ಡಿ ದೇವೇಗೌಡ ಅಳಿಯ ಡಾ.ಸಿ ಎನ್ ಮಂಜುನಾಥ್ 1,17,879 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆ ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮನೆ ಮಾಡಿದೆ.
ದಕ್ಷಿಣ ಕ್ಷೇತ್ರದ ಜನರ ಆರ್ಶೀವಾದದಿಂದ ಈ ಬಾರಿ ಕೂಡ ಗೆಲುವಾಗ್ತಿದೆ. ತೇಜಸ್ವಿ ಸೂರ್ಯ ಮತ್ತೆ ಸಂಸದ ಆಗಬೇಕು ಅಂತಾ ಆರ್ಶೀವಾದ ಮಾಡಿದ್ದಾರೆ. ನನ್ನ ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸ್ತೀನೆ. ಮೊದಲಬಾರಿ ಗೆದ್ದಾಗ ಒಂದು ಲೆಟರ್ ಹೆಡ್ ಮಾಡೋದಕ್ಕೂ ಬರ್ತಿರಲಿಲ್ಲ. ಈ 5 ವರ್ಷ ಸಾಕಷ್ಟು ಕಲಿತಿದ್ದೇನೆ. ಇಡೀ ರಾಜ್ಯದ ಮತದಾರರು ಬಿಜೆಪಿ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ. 290 ಕ್ಷೇತ್ರದಲ್ಲಿ ಅಂತರದ ಡಿಫ್ರೆನ್ಸ್ ಇದೆ. ಇನ್ನೆರಡು ಗಂಟೆಯಲ್ಲಿ ಕ್ಲಿಯರ್ ಪಿಚ್ಚರ್ ಸಿಗುತ್ತೆ. ಪ್ರಧಾನಿ ಮೋದಿಯವರು ಮತ್ತೆ ಪ್ರಧಾನಿಯಾಗ್ತಾರೆ. ಹತ್ತು ವರ್ಷ ಹೇಗಿದ್ರೋ ಹಾಗೇ ಮುಂದುವರಿಸುತ್ತಾರೆ. ಒಂದು ವರ್ಷದ ಹಿಂದೆ ಸರ್ಕಾರ ಅಧಿಕಾರಕ್ಕೆ ಬಂದ್ರು ಕಾಂಗ್ರೆಸ್ ಕುಗ್ಗಿದೆ. ಒಂದೇ ವರ್ಷದಲ್ಲಿ ಜನಪ್ರಿಯತೆ ಕುಗ್ಗಿರೋದು ಅವರ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ತೇಜಸ್ವಿ ಸೂರ್ಯ ತಿಳಿಸಿದರು.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ BJP 19, ಕಾಂಗ್ರೆಸ್ 9, ಜೆಡಿಎಸ್ 2 ಸ್ಥಾನಗಳ ಮುನ್ನಡೆಯಲ್ಲಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂಗೆ ಮುನ್ನಡೆ
ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆ
ಕನಕಪುರದಲ್ಲಿ 6ನೇ ಸುತ್ತಿಗೆ ಕೇವಲ 4,390 ಲೀಡ್ ಪಡೆದ ಡಿ.ಕೆ. ಸುರೇಶ್. ಕನಕಪುರ ಹೊರತು ಪಡಿಸಿ ಬಹುತೇಕ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್ಗೆ ಹಿನ್ನಡೆಯಾಗಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂಲ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ಗೆ ಭಾರಿ ಮುನ್ನಡೆ ಹಿನ್ನೆಲೆ ಮಾಜಿ ಸಿಎಂ ಹೆಚ್ಡಿಕೆ ಕೆಲವೇ ಹೊತ್ತಿನಲ್ಲಿ ಮಂಡ್ಯಕ್ಕೆ ತೆರಳಲಿದ್ದಾರೆ. ತಂದೆ, ತಾಯಿ ಆಶೀರ್ವಾದ ಪಡೆದು ಮಂಡ್ಯಕ್ಕೆ ತೆರಳಲಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕೋಟ ಶ್ರೀನಿವಾಸ್ ಪೂಜಾರಿಗೆ ಒಂದು ಲಕ್ಷ ಮತಗಳ ಮುನ್ನಡೆ.
ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮತ ಕೇಂದ್ರದಿಂದ ಹೊರಗೆ ತೆರಳಿದ್ದಾರೆ. ನಿರಂತರ 6 ಸುತ್ತುಗಳಲ್ಲಿ ಜಗದೀಶ್ ಶೆಟ್ಟರ್ಗೆ ಮುನ್ನಡೆಯಾಗಿದೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ 4028 ಮತಗಳ ಮುನ್ನಡೆಯಾಗಿದೆ. ಕಾಂಗ್ರೆಸ್ನ ಶ್ರೇಯಸ್ ಪಟೇಲ್ಗೆ ಹಿನ್ನಡೆ.
ಚಿಕ್ಕೋಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 47880 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಪ್ರಿಯಾಂಕಾ ಜಾರಕಿಹೊಳಿ : 277513
ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ : 229633
ಒಟ್ಟು 22 ಸುತ್ತುಗಳು 14 ಸುತ್ತುಗಳ ಮತ ಎಣಿಕೆ ಬಾಕಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ. 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ. ಬ್ರಿಜೇಶ್ ಚೌಟಗೆ 22 ಸಾವಿರ ಮತಗಳ ಮುನ್ನಡೆ. ಕಾಂಗ್ರೆಸ್ನ ಪದ್ಮರಾಜ್ ಪೂಜಾರಿಗೆ ಹಿನ್ನಡೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಭಾರಿ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ -2,42,805 ಮತಗಳು
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತಗಳು
ಹೆಚ್ಡಿ ಕುಮಾರಸ್ವಾಮಿ 99,121 ಮತಗಳ ಮುನ್ನಡೆ
ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತೇಜಸ್ವಿ ಸೂರ್ಯ- 92,840
ಸೌಮ್ಯ ರೆಡ್ಡಿ- 38,914
ಬಿಜೆಪಿ ಮುನ್ನಡೆ- 53,926
ದಕ್ಷಿಣ ಕನ್ನಡದಲ್ಲಿ ಮೂರನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆಯಾಗಿದೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ – 1,33,896
ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ – 1,11,312
ಅಂತರ – 22,584
ನೋಟಾ – 4,549
ಬೆಂಗಳೂರು ಕೇಂದ್ರದಲ್ಲಿ ಪರಿಸ್ಥಿತಿ ಬದಲಾಗಿದ್ದು ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 90,699 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 92,807 ಮತಗಳನ್ನು ಪಡೆದಿದ್ದು 2,108 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-20, ಕಾಂಗ್ರೆಸ್-5 ಮತ್ತು ಜೆಡಿಎಸ್ -3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಚಿತ್ರದುರ್ಗದಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 18945 ಮತಗಳ ಮುನ್ನಡೆ
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ -2,05,643 ಮತ
ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 1,86,698 ಮತ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಒಂಭತ್ತನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಮುನ್ನಡೆ ಸಾಧಿಸಿದೆ. ಡಾ.ಸಿ.ಎನ್. ಮಂಜುನಾಥ್ 58,560 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿ-ಡಾ.ಸಿ.ಎನ್. ಮಂಜುನಾಥ್ -1,80,959. ಕಾಂಗ್ರೆಸ್-ಡಿ.ಕೆ. ಸುರೇಶ್ 1,22,399. ಬಿಜೆಪಿ ಮತಗಳ ಮುನ್ನಡೆ 58,560
ಮತ ಎಣಿಕೆ ವೇಳೆ ಮತ ಎಣಿಕಾ ಅಧಿಕಾರಿ ಅಸ್ವಸ್ಥಗೊಂಡಿದ್ದಾರೆ. ವಿಜಯಪುರದ ಆದಿಲ್ ಶಾಹಿ ಸದನದಲ್ಲಿ ಕೌಂಟಿಂಗ್ ಸುಪರ್ ವೈಸರ್ ಆಗಿ ನೇಮಕಗೊಂಡಿದ್ದ ಅಧಿಕಾರಿ ಸಿದ್ದರಾಜ ದೊಡ್ಡಮನಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಸದ್ಯ ಪ್ರಾಥಮಿಕ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿದೆ. ಸೈನಿಕ ಶಾಲೆಯ ಆವರಣದಲ್ಲೇ ಸ್ಥಾಪಿಸಲಾಗಿರುವ ಆಸ್ಪತ್ರೆಗೆ ರವಾನಿಸಲಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ಗೆ 1,64,337 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಡಿಕೆ ಸುರೇಶ್ ಭಾರಿ ಹಿನ್ನಡೆ ಹಿನ್ನೆಲೆ ಕನಕಪುರದಲ್ಲಿ ಖಾಕಿ ಕಟ್ಟೆಚ್ಚರ.
ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿ ಬಳಿ ಹೆಚ್ಚಿನ ಭದ್ರತೆಗಾಗಿ 2 KSRPF ತುಕಡಿ ನಿಯೋಜನೆ ಮಾಡಲಾಗಿದೆ. ಎರಡೂ ಕಡೆಯ ರಸ್ತೆ ಬಂದ್ ಮಾಡಿ ಪೊಲೀಸರು ಭದ್ರತೆ ನೀಡಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಬೆಂಗಳೂರು ಗ್ರಾ.ಕ್ಷೇತ್ರದಲ್ಲಿ ಡಾ.ಮಂಜುನಾಥ್ಗೆ ಮುನ್ನಡೆಯಾಗಿದೆ. 81,572 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ. ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ಗೆ ಹಿನ್ನಡೆಯಾಗಿದೆ. 52,363 ಮತ ಪಡೆದಿದ್ದಾರೆ.
ಕೊಪ್ಪಳ ಕ್ಷೇತ್ರದಲ್ಲಿ 2ನೇ ಹಂತದಲ್ಲಿ ಕಾಂಗ್ರೆಸ್ಗೆ ಮುನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಎರಡನೇ ಹಂತದಲ್ಲಿ 2 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಕೆ.ಬಸವರಾಜ್ಗೆ ಹಿನ್ನಡೆಯಾಗಿದೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ. ಯದುವೀರ ಒಡೆಯರ್ಗೆ 12072 ಮತಗಳ ಮುನ್ನಡೆ. ಯದುವೀರ 70855 ಮತ, ಎಂ.ಲಕ್ಷ್ಮಣ 58783 ಮತ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 27,993 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 25010 ಮತಗಳನ್ನು ಗಳಿಸಿದ್ದಾರೆ. 2,983 ಮತಗಳಿಂದ ಬಿಜೆಪಿ ಮುನ್ನಡೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ. ಬಿಜೆಪಿ ಅಭ್ಯರ್ಥಿ ಕಾಗೇರಿ 42,156 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ 34042 ಮತಗಳನ್ನು ಪಡೆದಿದ್ದಾರೆ.
50 ಸಾವಿರ ಮತ ಪಡೆದು ಬಿಜೆಪಿ ಅಭ್ಯರ್ಥಿ ಡಾ.ಸಿ ಎನ್ ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. 11,434 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ಗೆ ಹಿನ್ನಡೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಯದುವೀರ್ ಒಡೆಯರ್ಗೆ 7008 ಮತಗಳ ಮುನ್ನಡೆ. ಯದುವೀರ್ 58596 ಮತ, ಎಂ.ಲಕ್ಷ್ಮಣ 51588 ಮತ.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು 8,624 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೆಗೌಡ ಅವರು 7,474 ಮತಗಳನ್ನು ಪಡೆದಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಮುನ್ನಡೆ ಸಾಧಿಸಿದ್ದಾರೆ. ಶೋಭ ಕರಂದ್ಲಾಜೆ 13,538 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 6521 ಮತ ಪಡೆದಿದ್ದು ಶೋಭ ಕರಂದ್ಲಾಜೆ 7007 ಮತಗಳ ಅಂತರ ಕಾಯ್ದಿರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. ಡಿಕೆ ಸುರೇಶ್ ವಿರುದ್ಧ 26000 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್ಗೆ 1110 ಮತಗಳ ಮುನ್ನಡೆಯಾಗಿದೆ.
ಶಿವಮೊಗ್ಗದಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 15 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚಾಮರಾಜನಗರ ಲೋಕಸಭಾ ಅಖಾಡಕ್ಕೆ ಒಳಪಡುವ ವರುಣ ಕ್ಷೇತ್ರದಲ್ಲಿ ಕೈ- ಕಮಲ ನಡುವೆ ಬಿಗ್ ಫೈಟ್. NDAನ ಬಾಲರಾಜು- 2192 ಮತಗಳು ಪಡೆದಿದ್ದು ಕಾಂಗ್ರೆಸ್ನ ಸುನಿಲ್ ಬೋಸ್ 3528 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಇಬ್ಬರು ಅಭ್ಯರ್ಥಿಗಳ ನಡುವೆ ಸಿಎಂ ಕ್ಷೇತ್ರದಲ್ಲಿ ತಿಕ್ಕಾಟ ಜೋರಾಗಿದೆ.
ಚಿತ್ರದುರ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 13029 ಮತ ಬಂದಿದೆ. ಹಾಗೂ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 11474 ಮತ ಸಿಕ್ಕಿದ್ದು 1555 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಆಗಮಿಸಿದ್ದು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಈ ಬಾರಿ ನಾನು ಗೆಲ್ಲುವ ವಿಶ್ವಾಸವಿದೆ. ಮೂರು ಬಾರಿ ಗೆದ್ದು ನಾಲ್ಕನೇ ಬಾರಿ ಕೂಡ ಗೆಲ್ಲುವ ಭರವಸೆ ಇದೆ. ಪ್ರಚಾರಕ್ಕೆ ತೆರಳಿದ್ದಾಗ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ದೇಶಕ್ಕೆ ಮೋದಿ ಭರವಸೆ, ಬೆಂಗಳೂರು ಸೆಂಟ್ರಲ್ ಗೆ ನಾನು. ಕಾಂಗ್ರೆಸ್ ಗ್ಯಾರಂಟಿ ಭರವಸೆ ಮುಂದೆ ಮೋದಿ ಅಲೆ ಹೆಚ್ಚಾಗಿದೆ. ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಅಂತರದ ಗೆಲುವಿನ ಬಗ್ಗೆ ಕಾದು ನೋಡಿ ಎಂದಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಹೆಚ್ಚಿದ ಸಂಭ್ರಮ. ಅಂಚೆ ಮತ್ತು ಇವಿಎಮ್ ಮತ ಏಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಸಂಭ್ರಮ ಹೆಚ್ಚಾಗಿದೆ. ಕಾರ್ಯಕರ್ತರ ಚಪ್ಪಾಳೆ ಹಾಕಿ ಸಂಭ್ರಮಿಸಿದ್ದಾರೆ. ಅದ್ರಲ್ಲೂ ಡಾ ಮಂಜುನಾಥ್ ಮುನ್ನಡೆ ಬರ್ತಿದ್ದಂತೆ ಹರ್ಷೋದ್ಘಾರ ಜೋರಾಗಿದೆ.
ಇಂದು ಲೋಕಸಭಾ ಕ್ಷೇತ್ರದ ಫಲಿತಾಂಶ ಹಿನ್ನೆಲೆ ಮಂಡ್ಯ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ ಅವರು ಆದಿ ಚುಂಚನಗಿರಿ ಮಠದಲ್ಲಿ ಗಂಗಾದೇಶ್ವರನಿಗೆ ಪೂಜೆ ಸಲ್ಲಿಸಿ ನಿರ್ಮಾಲನಂದ ಸ್ವಾಮಿಜಿ ಬಳಿ ಆಶೀರ್ವಾದ ಪಡೆದರು.
#WATCH | Karnataka: JD(S) leader HD Kumaraswamy offers prayers at Gangadhareshwara Swamy Temple in Bengaluru pic.twitter.com/rqoHkvzCs4
— ANI (@ANI) June 4, 2024
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಡಿಕೆ ಸುರೇಶ್ ಮುನ್ನಡೆಗಳಿಸಿದ್ದಾರೆ. ಡಾ.ಮಂಜುನಾಥ್ ಅವರಿಗೆ ಹಿನ್ನಡೆಯಾಗಿದೆ.
ದಕ್ಷಿಣ ಕನ್ನಡದಲ್ಲಿ 1ನೇ ಸುತ್ತು ಪೂರ್ಣಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದು 2,836 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 1,379 ಮತ ಪಡೆದಿದ್ದು 1,457 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಇದ್ದಾರೆ.
ತಮಿಳುನಾಡಿನ ಶಿವಗಂಗೈ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಅವರು ಶಿವಗಂಗೈ ಜಿಲ್ಲೆಯ ಕಾರೈಕುಡಿಯ ಕಾಳಿ ಅಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
#WATCH तमिलनाडु: शिवगंगा लोकसभा सीट से कांग्रेस उम्मीदवार कार्ति चिदंबरम ने शिवगंगा जिले के कराईकुडी में काली अम्मन मंदिर में पूजा की। pic.twitter.com/zGYb9Plv5S
— ANI_HindiNews (@AHindinews) June 4, 2024
ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ಮಂಡ್ಯ ಲೋಕಸಭಾ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಗೆ ಆರಂಭಿಕ ಮುನ್ನಡೆ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಹಿನ್ನಡೆಯಾಗಿದೆ.
ಮೊದಲನೆಯದಾಗಿ ಅಂಚೆ ಮತ ಎಣಿಕೆ ಮಾಡಲಾಗುತ್ತಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರು ಅಂಚೆ ಮತದಾನದಲ್ಲಿ ಮುನ್ನಡೆಯಲ್ಲಿದ್ದಾರೆ. ಪ್ರಾರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ.
ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬ ಚಿತ್ರಣ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗಿದೆ. ಕ್ಷೇತ್ರದ ADO ಹರೀಶ್ ಕುಮಾರ್ ರಿಂದ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಯಿತು.
ರಾಮನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಮತ ಎಣಿಕಾ ಕೇಂದ್ರದಲ್ಲಿ ಟಿವಿ9 ವೀಕ್ಷಣೆ.
ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ತುಮಕೂರಿನಲ್ಲಿ ಅಂಚೆ ಮತ ಎಣಿಕೆ ಆರಂಭವಾಗಿದೆ. ತುಮಕೂರು ವಿವಿ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಮಾಡಲಾಗುತ್ತಿದೆ.
ವಿಜಯಪುರದಲ್ಲಿ ಸ್ಟ್ರಾಂಗ್ ರೂಮ್ ಕೀಯನ್ನು ಮನೆಯಲ್ಲೇ ಬಿಟ್ಟು ಅಧಿಕಾರಿ ಯಡವಟ್ಟು ಮಾಡಿದ ಘಟನೆ ನಡೆದಿದೆ. ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಸ್ಟ್ರಾಂಗ್ ರೂಮ್ ಕೀಯನ್ನು ಮನೆಯಲ್ಲೇ ಬಿಟ್ಟಿದ್ದು ಮತ್ತೆ ಕೀರಲು ಮನೆಗೆ ಓಡಿದ್ದಾರೆ.
Published On - 6:20 am, Tue, 4 June 24