Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ

2014ರ ಲೋಕಸಭೆ ಚುನಾವಣೆಯಿಂದೀಚೆಗೆ ಕರ್ನಾಟಕದಲ್ಲಿ ಮಹಿಳಾ ಮತದಾರರ ಮತದಾನ ಪ್ರಮಾಣ ಹೆಚ್ಚುತ್ತಲೇ ಇತ್ತು. ಇದೀಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಮಹಿಳೆಯರು ಪುರುಷರನ್ನು ಓವರ್​ಟೇಕ್ ಮಾಡಿದ್ದಾರೆ! ಅಂದರೆ, ಪುರುಷರಿಗಿಂತಲೂ ಹೆಚ್ಚು ಸಂಖ್ಯೆಯ ಮಹಿಳೆಯರು ಮತದಾನ ಮಾಡಿದ್ದಾರೆ. ಆಯೋಗದ ಅಂಕಿಅಂಶಗಳು ಇಲ್ಲಿವೆ.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ
Follow us
Ganapathi Sharma
|

Updated on: May 02, 2024 | 9:08 AM

ಬೆಂಗಳೂರು, ಮೇ 2: ಏಪ್ರಿಲ್ 26 ರಂದು ಕರ್ನಾಟಕದ (Karnataka) 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ (Lok Sabha Elections) ಪುರುಷರಿಗಿಂತ ಮಹಿಳೆಯರೇ (Woman Voters) ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಪ್ರಮಾಣದಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದಿದ್ದರೂ, ಮಹಿಳಾ ಮತದಾರರು ಹೆಚ್ಚಾಗುವ ಪ್ರವೃತ್ತಿ ಮುಂದುವರೆದಿರುವುದನ್ನು ಇದು ಸೂಚಿಸಿದೆ. ಕೇಂದ್ರ ಚುನಾವಣಾ ಆಯೋಗವು (Election Commission of India) ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪುರುಷರ ಮತದಾನ ಪ್ರಮಾಣ ಶೇಕಡಾ 69.48 ಆಗಿದ್ದರೆ, ಮಹಿಳೆಯರ ಮತದಾನ ಪ್ರಮಾಣ 69.65 ಆಗಿದೆ. ಒಟ್ಟು 1,00,16,921 ಪುರುಷರು ಮತ ಚಲಾಯಿಸಿದರೆ 1,00,20,796 ಮಹಿಳೆಯರು ಮತ ಚಲಾಯಿಸಿದ್ದಾರೆ. ಅಂದರೆ, ಪುರುಷ ಮತದಾರರಿಗಿಂತ ಮಹಿಳಾ ಮತದಾರರು 3,875 ಹೆಚ್ಚಿರುವುದನ್ನು ಇದು ತೋರಿಸಿದೆ.

ಬೆಂಗಳೂರು ಉತ್ತರ, ಸೆಂಟ್ರಲ್, ದಕ್ಷಿಣ, ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ ಚಲಾಯಿಸಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗಿಂತ ಪುರುಷ ಮತದಾರರ ಸಂಖ್ಯೆ ಹೆಚ್ಚಿತ್ತು. ಆಗ ಪುರುಷರ ಮತದಾನ ಪ್ರಮಾಣ ಶೇ 69.55 ಆಗಿದ್ದರೆ, ಮಹಿಳೆಯರದ್ದು ಶೇ 67.65 ಆಗಿತ್ತು. 2014 ರಲ್ಲಿ ಪುರುಷ ಮತದಾರರು ಶೇ 68.59 ಆಗಿದ್ದರೆ ಮಹಿಳಾ ಮತದಾರರ ಪ್ರಮಾಣ ಶೇ 65.79 ಆಗಿತ್ತು.

ಮಹಿಳಾ ಸಬಲೀಕರಣ, ಸುಧಾರಿತ ಶಿಕ್ಷಣ ಮತ್ತು ಹೆಚ್ಚಿದ ಜಾಗೃತಿಯು ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಏಳು ರಾಜ್ಯಗಳಲ್ಲಿ ಮಹಿಳಾ ಮತದಾನದ ಪ್ರಮಾಣ ಹೆಚ್ಚಾಗಿತ್ತು ಎಂದು ವರದಿಯೊಂದು ಉಲ್ಲೇಖಿಸಿದೆ.

ಯಾವೆಲ್ಲ ರಾಜ್ಯಗಳಲ್ಲಿ ಮಹಿಳಾ ಮತದಾನ ಹೆಚ್ಚಳ?

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಮಣಿಪುರ, ಮೇಘಾಲಯ, ಪುದುಚೇರಿ, ನಾಗಾಲ್ಯಾಂಡ್, ತಮಿಳುನಾಡು, ಉತ್ತರಾಖಂಡ, ಪಶ್ಚಿಮ ಬಂಗಾಳ, ಬಿಹಾರ, ಕೇರಳ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಹಂತ-1 ಮತ್ತು ಹಂತ-2 ರಲ್ಲಿ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಮೆಡಿಯನ್ ಶ್ಯಾಮ್ ರಂಗೀಲಾ

ಮತದಾರರಲ್ಲಿ ಜಾಗೃತಿಯನ್ನು ಮೂಡಿಸಲು ಆಯೋಜಿಸಿದ್ದ ಸಂವಾದ ಕಾರ್ಯಕ್ರಮಗಳಲ್ಲಿ ಪುರುಷರಿಗೆ ಹೋಲಿಸಿದರೆ ಮಹಿಳೆಯರು ವಿವರಗಳನ್ನು ತಿಳಿದುಕೊಳ್ಳಲು ಮತ್ತು ಮತ ಚಲಾಯಿಸಲು ಹೆಚ್ಚು ಉತ್ಸುಕರಾಗಿದ್ದುದು ಕಂಡುಬಂದಿತ್ತು ಎಂದು ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿಯೂ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು. ಇಲ್ಲಿಯೂ ಪುರುಷರಿಗಿಂತ ಮಹಿಳೆಯರ ಮತದಾನ ಹೆಚ್ಚುತ್ತದೆಯೇ ಎಂದು ಕಾದು ನೋಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ಹೆಚ್ಚು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಪಾಪಿ ಪತಿಯ ಬೆಚ್ಚಿಬೀಳಿಸೋ ಕೃತ್ಯ!
ಬೆಂಗಳೂರಿನಲ್ಲಿ ಪಾಪಿ ಪತಿಯ ಬೆಚ್ಚಿಬೀಳಿಸೋ ಕೃತ್ಯ!
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ