AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಲೋಕಸಭಾ ಕ್ಷೇತ್ರ ಫಲಿತಾಂಶ: 15 ವರ್ಷದ ನಂತರ ಕೊಪ್ಪಳವನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್, ಫಲ ನೀಡದ ಬಿಜೆಪಿ ತಂತ್ರ

Koppal Lok Sabha Election Results 2024: ಕೊಪ್ಪಳ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್​​ ಅವರನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಭರ್ಜರಿ ಜಯಗಳಿಸಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿ ಸತತ ಹದಿನೈದು ವರ್ಷಗಳ ಕಾಲ ಹಿಡಿತ ಸಾಧಿಸಿದ್ದ ಬಿಜೆಪಿ ಈ ಬಾರಿ ಸೋಲು ಅನುಭವಿಸಿದೆ.

ಕೊಪ್ಪಳ ಲೋಕಸಭಾ ಕ್ಷೇತ್ರ ಫಲಿತಾಂಶ: 15 ವರ್ಷದ ನಂತರ ಕೊಪ್ಪಳವನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್, ಫಲ ನೀಡದ ಬಿಜೆಪಿ ತಂತ್ರ
15 ವರ್ಷದ ನಂತರ ಕೊಪ್ಪಳವನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್, ಫಲ ನೀಡದ ಬಿಜೆಪಿ ತಂತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on:Jun 04, 2024 | 3:05 PM

Share

ಕೊಪ್ಪಳ, ಜೂನ್​​ 04: ಕೊಪ್ಪಳ ಲೋಕಸಭಾ ಕ್ಷೇತ್ರದ (Koppal Lok Sabha Election) ಚುನಾವಣೆ ಈ ಬಾರಿ ತೀರ್ವ ಕುತೂಹಲ ಮೂಡಿಸಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು. ಆದರೆ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ (K. Rajashekar Hitnal) ಗೆಲವು ಸಾಧಿಸಿದ್ದರೆ, ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್​ಗೆ ಸೋಲಾಗಿದೆ. ಕ್ಷೇತ್ರದಲ್ಲಿ ಸತತ ಹದಿನೈದು ವರ್ಷಗಳ ಕಾಲ ಹಿಡಿತ ಸಾಧಿಸಿದ್ದ ಬಿಜೆಪಿ ಈ ಬಾರಿ ಸೋಲು ಅನುಭವಿಸಿದೆ. ಆ ಮೂಲಕ ಹಾಲಿ ಬಿಜೆಪಿ ಸಂಸದ ಇದ್ದರು ಕೂಡ ಟಿಕೆಟ್ ಬದಲಾವಣೆ ಮಾಡಿ ಬಿಜೆಪಿ ಕೈ ಸುಟ್ಟುಕೊಂಡಿದೆ.

ಬಿಜೆಪಿಗೆ ಫಲ ನೀಡದ ಬದಲಾವಣೆ ತಂತ್ರ

ಕೊಪ್ಪಳ ಕ್ಷೇತ್ರದಲ್ಲಿ ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದು, ಕೊಪ್ಪಳವನ್ನು ಬಿಜೆಪಿ ಭದ್ರಕೋಟೆ ಮಾಡಿದ್ದರು. 2019 ರಲ್ಲಿ ನಡೆದ ಚುನಾವಣೆಯಲ್ಲಿ ಕರಡಿ ಸಂಗಣ್ಣ  ಎರಡನೇ ಬಾರಿ ಗೆಲವು ಸಾಧಿಸಿದ್ದರು. ಆದರೆ ಮೂರನೇ ಬಾರಿಗೆ ಟಿಕೆಟ್ ಸಿಗುವ ವಿಸ್ವಾಸದಲ್ಲಿದ್ದ ಕರಡಿ ಸಂಗಣ್ಣಗೆ ಬಿಜೆಪಿ ನಾಯಕರು ಶಾಕ್ ನೀಡಿದ್ದರು. ಜಿಲ್ಲೆಯ ಕೆಲ ಬಿಜೆಪಿ ನಾಯಕರು ಕರಡಿ ಸಂಗಣ್ಣಗೆ ಟಿಕೆಟ್ ನೀಡದಂತೆ ಒತ್ತಡ ಹಾಕಿದ್ದರು.

ಇದನ್ನೂ ಓದಿ: Koppal Lok Sabha Election Result 2024: ಕೊಪ್ಪಳದಲ್ಲಿ ಕಾಂಗ್ರೆಸ್​​ನ ರಾಜಶೇಖರ್ ಹಿಟ್ನಾಳ್​ಗೆ ಗೆಲುವು

ಯಾವುದೇ ಕಾರಣಕ್ಕೂ ಕೂಡ ಕರಡಿ ಸಂಗಣ್ಣಗೆ ಟಿಕೆಟ್ ನೀಡಬಾರದು ಅಂತ ಜಿಲ್ಲೆಯ ಮಾಜಿ ಶಾಸಕರು ಸೇರಿದಂತೆ ಕೆಲ ಬಿಜೆಪಿ ಮುಖಂಡರು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಹಾಲಿ ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ನಿರಾಕರಿಸಿದ್ದ ಬಿಜೆಪಿ ನಾಯಕರು, ಹೊಸ ಮುಖವಾಗಿದ್ದ ಡಾ. ಬಸವರಾಜ್ ಕ್ಯಾವಟರ್​ಗೆ ಟಿಕೆಟ್ ನೀಡಿದ್ದರು. ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಈ ಬಾರಿ ಕೂಡ ಗೆಲವು ಸಾಧಿಸಬಹುದು ಅನ್ನೋದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿತ್ತು. ಆದರೆ ಟಿಕೆಟ್ ಸಿಗದೇ ಇದ್ದಿದಕ್ಕೆ ಮುನಿಸಿಕೊಂಡಿದ್ದ ಕರಡಿ ಸಂಗಣ್ಣ, ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷ ಸೇರಿ, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದರು. ಕೊಪ್ಪಳದಲ್ಲಿ ಬಿಜೆಪಿ ಸೋಲು, ಕರಡಿ ಸಂಗಣ್ಣಗೆ ಟಿಕೆಟ್ ತಪ್ಪಿಸಲು ಕಾರಣವಾಗಿದ್ದ ಬಿಜೆಪಿ ನಾಯಕರಿಗೆ ಮುಖಭಂಗವನ್ನುಂಟು ಮಾಡಿದೆ.

ಬಿಜೆಪಿ ನಾಯಕರು, ವೈದ್ಯರಾಗಿರುವ ಡಾ.ಬಸವರಾಜ್ ಕ್ಯಾವಟರ್​ಗೆ ಟಿಕೆಟ್ ನೀಡೋದರಿಂದ ಬಿಜೆಪಿ ನಾಯಕರು ಸಕ್ರೀಯವಾಗಿ ಕೆಲಸ ಮಾಡುತ್ತಾರೆ. ಜೊತೆಗ ವೈದ್ಯ ಅನ್ನೋ ಕಾರಣದಿಂದ ಜನರು ಕೂಡ ಮತ ಹಾಕ್ತಾರೆ ಅಂತ ಲೆಕ್ಕಾಚಾರ ಹಾಕಿಕೊಂಡಿದ್ದರು. ಆದರೆ ಇಡೀ ಕ್ಷೇತ್ರಕ್ಕೆ ಅಷ್ಟಾಗಿ ಚಿರಪರಿಚಿತರಿದ ಡಾ. ಬಸವಾರಜ್ ಕ್ಯಾವಟರ್ ಟಿಕೆಟ್ ನೀಡಿದ್ದು, ಕರಡಿ ಸಂಗಣ್ಣ, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರಿಂದ, ಹೈಕಮಾಂಡ್ ನಾಯಕರ ಲೆಕ್ಕಾಚಾರ ತಲೆಕೆಳಗೆ ಮಾಡಿವೆ. ಜೊತೆಗೆ ಕ್ಷೇತ್ರದಲ್ಲಿರುವ ಎಂಟು ಕ್ಷೇತ್ರಗಳ ಪೈಕಿ, ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಇದ್ದಿದ್ದು, ಕಾಂಗ್ರೆಸ್​ಗೆ ಗೆಲವು ತಂದುಕೊಟ್ಟಿದೆ.

ಇದನ್ನೂ ಓದಿ: Ballari Lok Sabha Election Result 2024: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಸೋಲು, ಇ ತುಕಾರಾಂಗೆ ಗೆಲುವು

ಇನ್ನು 2008, 2013, 2019 ರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಿದ್ದರು. ಈ ಬಾರಿ ಕೂಡ ಗೆಲುವಿನ ವಿಶ್ವಾಸದಲ್ಲಿಯೇ ಬಿಜೆಪಿ ನಾಯಕರು ಇದ್ದರು. ಆದರೆ ಯಾವಾಗ ಟಿಕೆಟ್ ಬದಲಾವಣೆಯಾಯ್ತೋ, ಆಗ ಪುಟಿದೆದ್ದ ಕಾಂಗ್ರೆಸ್ ನಾಯಕರು, ಬಿಜೆಪಿಯ ಒಡಕಿನ ಲಾಭವನ್ನು ಪಡೆಯಲು ಮುಂದಾದ್ದರು. ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಜೊತೆಗೆ ಅಸಮಾಧಾನಗಳನ್ನು ಮರೆತು ಕೆಲಸ ಮಾಡಿದ್ದರಿಂದ ಬಿಜೆಪಿಗೆ ಸೋಲಾಗಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Tue, 4 June 24

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ