Lok Sabha Election 2019 Result: 2019ರಲ್ಲಿ ಒಮ್ಮತದಿಂದ ಗೆದ್ದು ಮತ್ತೆ ಗದ್ದುಗೆ ಏರಿದ್ದ ಮೋದಿ, ಮರುಕಳಿಸುತ್ತಾ ಇತಿಹಾಸ?

India General Election 2019: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭಾರಿ ಮುಖಭಂಗವಾಗಿತ್ತು. 2014ರಿಂದ ದೇಶದ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸುತ್ತಿರುವ ನರೇಂದ್ರ ಮೋದಿಯವರು ಈ ವರ್ಷದ ಲೋಕಸಭಾ ಚುನಾವಣೆಯನ್ನೂ ಗೆದ್ದು ಮೂರನೇ ಬಾರಿಗೆ ಪ್ರಧಾನಿಯಾಗ್ತಾರಾ? 2019ರ ಫಲಿತಾಂಶ ಮರುಕಳಿಸುತ್ತಾ ಎಂಬ ಕುತೂಹಲ ಹೆಚ್ಚಾಗಿದೆ.

Lok Sabha Election 2019 Result: 2019ರಲ್ಲಿ ಒಮ್ಮತದಿಂದ ಗೆದ್ದು ಮತ್ತೆ ಗದ್ದುಗೆ ಏರಿದ್ದ ಮೋದಿ, ಮರುಕಳಿಸುತ್ತಾ ಇತಿಹಾಸ?
ನರೇಂದ್ರ ಮೋದಿ
Follow us
ಆಯೇಷಾ ಬಾನು
|

Updated on:Jun 03, 2024 | 6:52 AM

ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಹಾಗೂ ಕರ್ನಾಟಕದಲ್ಲಿ 2 ಹಂತಗಳಲ್ಲಿ 2024ರ ಲೋಕಸಭಾ ಚುನಾವಣೆ ಮತದಾನ ಮುಗಿದಿದೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಯಾವ ಪಕ್ಷ ದೇಶದ ಚುಕ್ಕಾಣಿ ಹಿಡಿಯಲಿದೆ ಎಂಬ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಒಮ್ಮತದಿಂದ ಗೆದ್ದು ಬೀಗಿತ್ತು. ಕಾಂಗ್ರೆಸ್​ಗೆ ಮುಖಭಂಗವಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ಗೆಲ್ಲುತ್ತಾ ಎಂಬ ಚರ್ಚೆ ಶುರುವಾಗಿದೆ. ಗೆದ್ದರೇ ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿ ಪಟ್ಟವನ್ನು ಮುಡಿಗೇರಿಸಿಕೊಳ್ಳುತ್ತಾರೆ. ಈ ಹೊತ್ತಿನಲ್ಲಿ ಕಳೆದ ಅಂದ್ರೆ 2019ರ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನಾವು ಇಲ್ಲಿ ಮೆಲುಕುಹಾಕೋಣ. ಕಳೆದ ವರ್ಷ ಯಾವ ಪಕ್ಷ ಹಿಡಿತ ಸಾಧಿಸಿತ್ತು ಎಂಬ ವಿವರ ಇಲ್ಲಿದೆ.

ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ 2019ರಲ್ಲಿ ಭಾರೀ ಒಮ್ಮತದಿಂದ ಗೆದ್ದು ಬೀಗಿತ್ತು. ಚುನಾವಣೆಗೂ ಮೊದಲು ಐದು ವರ್ಷಗಳ ಮೋದಿ ಆಡಳಿತದ ಬಗ್ಗೆ ಹಲವಾರು ಟೀಕೆಗಳು ಕೇಳಿಬಂದಿದ್ದವು. ನೋಟು ರದ್ದತಿ, ತನಿಖಾ ಸಂಸ್ಥೆಗಳ ದುರ್ಬಳಕೆ, ಸರ್ವಾಧಿಕಾರ ಆಡಳಿತ ಸೇರಿದಂತೆ ಅನೇಕ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳು ಮೋದಿ ಸರ್ಕಾರಕ್ಕೆ ಮುಳುವಾಗಬಹುದೇನೋ ಎಂದು ಅನೇಕ ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ 2019ರಲ್ಲಿ ಪ್ರಧಾನಿ ಮೋದಿಯವರ ಅಲೆ ಹೇಗಿತ್ತೆಂದರೆ ಇಷ್ಟೊಂದು ಆರೋಪಗಳ ನಡುವೆಯೂ ಎನ್​ಡಿಎ ಅಧಿಕಾರದ ಗದ್ದುಗೆ ಹಿಡಿದಿತ್ತು.

ರಾಜಕೀಯ ದಿಕ್ಕನ್ನೇ ಬದಲಿಸಿದ್ದ ಪುಲ್ವಾಮಾ ದಾಳಿ

ಸ್ವಚ್ಛಭಾರತ ಅಭಿಯಾನ, ಒಂದು ದೇಶ ಒಂದು ತೆರಿಗೆ, ಸಿಎಎ ಜಾರಿ ಭರವಸೆ, ಆಯುಷ್ಮಾನ್ ಭಾರತದಂತಹ ಕ್ರಮಗಳು ಬಿಜೆಪಿ ಕೈಹಿಡಿದವು. ಇದೆಲ್ಲದಕ್ಕಿಂತ ಮುಖ್ಯವಾಗಿ ಚುನಾವಣಾ ಹೊತ್ತಲ್ಲಿ ಆದ ಪುಲ್ವಾಮಾ ದಾಳಿ ದೇಶದ ರಾಜಕೀಯ ದಿಕ್ಕನ್ನೇ ಬದಲಿಸಿತು. 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಜಮ್ಮುವಿನ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿತ್ತು. ಸಿಆರ್‌ಪಿಎಫ್‌ನ 40 ಯೋಧರು ಮೃತಪಟ್ಟರು. ಪುಲ್ವಾಮಾ ದಾಳಿ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ತಾಣಗಳ ಮೇಲೆ ದಾಳಿ ನಡೆಸಿತು. ಬಾಲಾಕೋಟ್ ವೈಮಾನಿಕ ದಾಳಿ ಮತ್ತು ಸೇನಾ ಕಾರ್ಯಾಚರಣೆಗಳು ಹೆಚ್ಚು ಸದ್ದು ಮಾಡಿದವು. ನಂತರ ನಡೆದ ಚುನಾವಣೆಯಲ್ಲಿ ಮೋದಿ ಸರ್ಕಾರ ಅಭೂತಪೂರ್ವ ಜಯ ಸಾಧಿಸಿತು.

ಇದನ್ನೂ ಓದಿ: Lok Sabha Election 2024 Exit poll date: ಲೋಕಸಭಾ ಚುನಾವಣೆ, ಎಕ್ಸಿಟ್ ಪೋಲ್ ಜೂನ್ 1ಕ್ಕೆ; ಸಮಯ, ನೇರ ಪ್ರಸಾರ ಇತ್ಯಾದಿ ವಿವರ

2019ರ ಏ.11 ರಿಂದ ಮೇ 19 ರ ವರೆಗೆ ಚುನಾವಣೆ ನಡೆದಿತ್ತು. ಒಟ್ಟು 543 ಕ್ಷೇತ್ರಗಳಿಗೆ 39 ದಿನ ಮತದಾನ ನಡೆಯಿತು. 91.2 ಕೋಟಿ ಜನ ಮತದಾರರ ಪೈಕಿ 61,20,81,902 ಮಂದಿ ಮತ ಚಲಾಯಿಸಿದ್ದರು. ಮತ ಪ್ರಮಾಣ: 69.05%.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-303 ಸ್ಥಾನ, ಕಾಂಗ್ರೆಸ್-52, ಡಿಎಂಕೆ-23, ಎಐಟಿಸಿ-22, ವೈಎಸ್‌ಆರ್‌ಸಿಪಿ-22, ಪಕ್ಷೇತರ-4, ಇತರೆ-116 ಸ್ಥಾನ ಗೆದ್ದಿದ್ದವು. ಬಿಜೆಪಿ 37.36% ಮತಗಳನ್ನು ಪಡೆಯುವ ಮೂಲಕ 1989ರ ಸಾರ್ವತ್ರಿಕ ಚುನಾವಣೆಯ ನಂತರ ರಾಜಕೀಯ ಪಕ್ಷವೊಂದು ಪಡೆದ ಅತ್ಯಧಿಕ ಮತ ಪ್ರಮಾಣಕ್ಕೆ ಸಾಕ್ಷಿಯಾಯಿತು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 353 ಸ್ಥಾನಗಳನ್ನು ಗೆದ್ದು ದೇಶದ ಅಧಿಕಾರ ಪಡೆಯಿತು. ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತು. ವಿರೋಧ ಪಕ್ಷವಾಗಲು ಬೇಕಾದ ಸ್ಥಾನಗಳನ್ನು ಪಡೆಯುವಲ್ಲೂ ವಿಫಲವಾಯಿತು. ಇದರ ಜೊತೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಯನ್ಸ್ (ಯುಪಿಎ) 91 ಸ್ಥಾನಗಳನ್ನು ಗೆದ್ದಿತು.

ಇನ್ನು ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕವು ಹಲವು ಅಚ್ಚರಿಗಳಿಗೆ ಕಾರಣವಾಗಿತ್ತು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಜಯಗಳಿಸಿದ್ರೆ ಕಾಂಗ್ರೆಸ್ ಕೇವಲ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಇದನ್ನೂ ಓದಿ: ಲೋಕಸಭಾ ಚುನಾವಣೆ 6ನೇ ಹಂತ: ಶೇ.59.06ರಷ್ಟು ಮತದಾನ; ಪಶ್ಚಿಮ ಬಂಗಾಳದಲ್ಲಿ ಅತೀ ಹೆಚ್ಚು, ದೆಹಲಿಯಲ್ಲಿ ಕಡಿಮೆ

ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಬಿಜೆಪಿ ವಿರುದ್ಧ ಮೈತ್ರಿ ಪಕ್ಷಗಳು ಸ್ಪರ್ಧೆ ಮಾಡಿದ್ದವು. ಆದರೆ ಮೋದಿ ಅಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹೀನಾಯ ಸೋಲು ಕಾಣುವಂತಾಗಿತ್ತು. ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಮೈತ್ರಿ ಪಕ್ಷಗಳು ತಲಾ 1 ಸ್ಥಾನಗಳನ್ನು ಮಾತ್ರ ಗೆದ್ದವು.

ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಗೆಲುವು, ಪ್ರಧಾನಿ ಹೆಚ್​ಡಿಡಿಗೆ ಸೋಲು

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ 27 ಕ್ಷೇತ್ರ, ಕಾಂಗ್ರೆಸ್ 21 ಕ್ಷೇತ್ರ ಮತ್ತು ಜೆಡಿಎಸ್ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು. ಹಲವು ವರ್ಷಗಳ ಬಳಿಕ ಕಾರ್ಯಕರ್ತರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೋಲನುಭವಿಸುವಂತಾಯಿತು.

ಸದ್ಯ ಈಗ ವಿಧಾನಸಭೆಯಲ್ಲಿ ಗೆದ್ದುಬೀಗಿದ ಹಾಗೆ ಗೆಲ್ಲಲು ಕಾಂಗ್ರೆಸ್ ‘ಪಾಂಚ್‌ ನ್ಯಾಯ್‌, ಪಚ್ಚೀಸ್‌ ಗ್ಯಾರಂಟಿ’ಯ ಮೊರೆ ಹೋಗಿದೆ. ಬಲಿಷ್ಠ ನಾಯಕರ ಜೊತೆ ಸೇರಿ ಕಾಂಗ್ರೆಸ್ ಇಂಡಿಯಾ ಒಕ್ಕೂಟ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಜೆಡಿಎಸ್​ನೊಂದಿಗೆ ಮ್ರೈತ್ರಿ ಮಾಡಿಕೊಂಡಿದ್ದು ಈ ಬಾರಿಯೂ ಮೋದಿ ಅಲೆ ವರ್ಕ್ ಆಗುವ ನಿರೀಕ್ಷೆ ಹೆಚ್ಚಿದೆ. ಮಾಧ್ಯಮಗಳಿಂದ ದೂರ ಉಳಿದಿದ್ದ ಮೋದಿ, ಮಾಧ್ಯಮಗಳಿಗೆ ಎಕ್ಸ್ಕ್ಲೋಸಿವ್ ಇಂಟರ್ವ್ಯೂವ್​ಗಳನ್ನು ನೀಡುತ್ತಿದ್ದಾರೆ. ಸಿವೋಟರ್ ಸಮೀಕ್ಷೆ ಕೂಡ ಎನ್​ಡಿಎ ಪಕ್ಷ ಗೆಲ್ಲುವ ಸೂಚನೆ ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:50 pm, Wed, 29 May 24

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ