Rahul Gandhi: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ದಲಿತರಿಗೆ, ಹಿಂದುಳಿದವರಿಗೆ ಮೀಸಲಾತಿ ಹೆಚ್ಚಳ; ರಾಹುಲ್ ಗಾಂಧಿ ಭರವಸೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಗೆದ್ದು ಅಧಿಕಾರಕ್ಕೆ ಬಂದರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ (ಎಂಜಿಎನ್‌ಆರ್‌ಇಜಿಎ) ಪಾವತಿಯನ್ನು 250 ರೂ.ನಿಂದ 400 ರೂ.ಗೆ ಹೆಚ್ಚಿಸುತ್ತೇವೆ. ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಬುಡಕಟ್ಟು ಜನಾಂಗದವರಿಗೆ ಎಷ್ಟು ಅಗತ್ಯವಿದೆಯೋ ಅಷ್ಟು ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

Rahul Gandhi: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ದಲಿತರಿಗೆ, ಹಿಂದುಳಿದವರಿಗೆ ಮೀಸಲಾತಿ ಹೆಚ್ಚಳ; ರಾಹುಲ್ ಗಾಂಧಿ ಭರವಸೆ
ರಾಹುಲ್ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on:May 06, 2024 | 5:15 PM

ರತ್ಲಾಮ್: ಜಾತಿ ಆಧಾರಿತ ಮೀಸಲಾತಿಗೆ ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದ ಶೇ. 50ರಷ್ಟು ಮಿತಿಯನ್ನು ಕಾಂಗ್ರೆಸ್ (Congress) ತೆಗೆದುಹಾಕುತ್ತದೆ. ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಮೀಸಲಾತಿ ಕೋಟಾ ಪ್ರಯೋಜನಗಳನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇಂದು ಭರವಸೆ ನೀಡಿದ್ದಾರೆ. ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆಯಲ್ಲಿ ಸಂವಿಧಾನವನ್ನು ಉಳಿಸಲು ಹೋರಾಡಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನವನ್ನು ಮುಗಿಸಲು ಬಯಸುತ್ತದೆ. ಇದನ್ನು ಬದಲಾಯಿಸಲು ಬಯಸುತ್ತದೆ. ಆದರೆ, ಕಾಂಗ್ರೆಸ್ ಮತ್ತು ಇಂಡಿಯಾ ಬಣವು ಸಂವಿಧಾನವನ್ನು ಉಳಿಸಲು ಪ್ರಯತ್ನಿಸುತ್ತಿದೆ. ಈ ಸಂವಿಧಾನವು ನಿಮಗೆ ಜಲ (ನೀರು), ಅರಣ್ಯ, ಜಮೀನಿನ ಮೇಲೆ ಹಕ್ಕುಗಳನ್ನು ನೀಡಿದೆ. ನರೇಂದ್ರ ಮೋದಿ ಆ ಹಕ್ಕುಗಳನ್ನು ತೆಗೆದುಹಾಕಲು ಬಯಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಹೇಳಿದ 10 ಸುಳ್ಳುಗಳು

ಚುನಾವಣೆಯಲ್ಲಿ ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಘೋಷಿಸಿದ್ದರು. ಅದಕ್ಕಾಗಿಯೇ ಅವರು ‘400 ಸೀಟು’ ಪಡೆಯುವುದಾಗಿ ಘೋಷಣೆ ಮಾಡಿದರು. ಆದರೆ 400 ಅನ್ನು ಮರೆತುಬಿಡಿ ಅವರಿಗೆ 150 ಸೀಟುಗಳು ಸಿಗುವುದೂ ಕಷ್ಟವಿದೆ. ಅವರು ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳುತ್ತಾರೆ. ನಾನು ಈ ಹಂತದಿಂದಲೇ ನಿಮಗೆ ಹೇಳಲು ಬಯಸುತ್ತೇನೆ, ನಾವು ಶೇ. 50ರ ಮಿತಿಯನ್ನು ಮೀರಿ ಮೀಸಲಾತಿಯನ್ನು ಹೆಚ್ಚಿಸುತ್ತೇವೆ. ಬಡವರು, ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ’’ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರ ಮತ್ತು ಎನ್‌ಡಿಎ ಮತ್ತು ಇಂಡಿಯಾ ಬಣದ ನಡುವೆ ಮೀಸಲಾತಿ ಕುರಿತು ಬಿಸಿಯಾದ ಚರ್ಚೆಯ ನಡುವೆ ರಾಹುಲ್ ಗಾಂಧಿ ಈ ಹೇಳಿಕೆಗಳನ್ನು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮುಸ್ಲಿಮರಿಗೆ ಅನುಕೂಲವಾಗುವಂತೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಆರೋಪಿಸಿದೆ. ಆದರೆ, ಆ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ. ಗುಜರಾತ್ ಬನಸ್ಕಾಂತದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಧರ್ಮದ ಹೆಸರಿನಲ್ಲಿ ಮೀಸಲಾತಿಯನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳುವುದಿಲ್ಲ ಮತ್ತು ಸಂವಿಧಾನದೊಂದಿಗೆ ಆಟವಾಡುವುದಿಲ್ಲ ಎಂದು ಘೋಷಿಸುವಂತೆ ನಾನು ಕಾಂಗ್ರೆಸ್ ಮತ್ತು ಅವರ ಪಕ್ಷ ಮತ್ತು ಅದರ ಬೆಂಬಲಿಗರಿಗೆ ಸವಾಲು ಹಾಕುತ್ತೇನೆ ಎಂದಿದ್ದರು.

ಇದನ್ನೂ ಓದಿ: Rahul Gandhi: ಅಮ್ಮನಿಂದಾಗಿ ನಮ್ಮ ಕುಟುಂಬದ ಕರ್ಮಭೂಮಿಗೆ ಸೇವೆ ಸಲ್ಲಿಸುವ ಪುಣ್ಯ ಸಿಕ್ಕಿದೆ; ರಾಹುಲ್ ಗಾಂಧಿ

ಆದಿವಾಸಿಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಮಾಧ್ಯಮಗಳು ತೋರಿಸುವುದಿಲ್ಲ ಎಂದು ರತ್ಲಾಮ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿದರು. “ನಿಮ್ಮ ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ, ನಿಮ್ಮ ಭೂಮಿ ಕಿತ್ತುಕೊಳ್ಳಲಾಗಿದೆ. ಆದರೆ ಮಾಧ್ಯಮಗಳು ಆ ಕುರಿತು ವರದಿ ಮಾಡುವುದಿಲ್ಲ. ಅದಕ್ಕೂ ಕಾರಣವಿದೆ. ಈ ಮಾಧ್ಯಮ ಕಂಪನಿಗಳಲ್ಲಿ ಆದಿವಾಸಿಗಳಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರತ್ಲಾಮ್ ಲೋಕಸಭೆಗೆ ಚುನಾವಣೆಯ 4ನೇ ಹಂತದಲ್ಲಿ ಮೇ 13ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಕಾಂತಿಲಾಲ್ ಭುರಿಯಾ ಅವರನ್ನು ಕಣಕ್ಕಿಳಿಸಿದೆ. ಅನಿತಾ ನಗರ್ ಸಿಂಗ್ ಚೌಹಾಣ್ ಅವರು 2019 ರ ಚುನಾವಣೆಯಲ್ಲಿ ಗೆದ್ದ ಸ್ಥಾನದಿಂದ ಬಿಜೆಪಿಯ ಆಯ್ಕೆಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 6 May 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ