ಏಪ್ರಿಲ್​ 28, 29 ರಂದು ಪ್ರಧಾನಿ ರಾಜ್ಯಕ್ಕೆ, ಮೋದಿ ಸಮಾವೇಶಕ್ಕೆ ಉತ್ತರ ಕರ್ನಾಟಕದಲ್ಲಿ ವೇದಿಕೆ ಸಜ್ಜು

| Updated By: ವಿವೇಕ ಬಿರಾದಾರ

Updated on: Apr 23, 2024 | 10:29 AM

ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, 6 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಪ್ರಧಾನಿ ಮೋದಿ ಸಮಾವೇಶಕ್ಕೆ ಈಗಾಗಲೆ ವೇದಿಕೆಗಳು ಸಚ್ಚಾಗುತ್ತಿವೆ.

ಏಪ್ರಿಲ್​ 28, 29 ರಂದು ಪ್ರಧಾನಿ ರಾಜ್ಯಕ್ಕೆ, ಮೋದಿ ಸಮಾವೇಶಕ್ಕೆ ಉತ್ತರ ಕರ್ನಾಟಕದಲ್ಲಿ ವೇದಿಕೆ ಸಜ್ಜು
ನರೇಂದ್ರ ಮೋದಿ
Follow us on

ಬೆಳಗಾವಿ, ಏಪ್ರಿಲ್​ 23: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿ (BJP) 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ದೇಶ್ಯಾದ್ಯಂತ ಪ್ರಚಾರ ಸಭೆಗಳನ್ನು ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಉತ್ತರ ಕರ್ನಾಟಕಕ್ಕೂ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29 ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ. ಎರಡು ದಿನ, 12 ಕ್ಷೇತ್ರಗಳ ಟಾರ್ಗೆಟ್ ಮಾಡಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.

ಮೋದಿ ಕಾರ್ಯಕ್ರಮ ವೇಳಾಪಟ್ಟಿ

ಎಪ್ರಿಲ್ 28 ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್‌ಕಮ್, ಮೇರಿಯಟ್, ಯುಕೆ-27 ಯಾವುದಾರು ಒಂದು ಹೊಟೇಲ್​ನಲ್ಲಿ ತಂಗಲಿದ್ದಾರೆ. ಎಸ್‌ಪಿಜಿ ಪರಿಶೀಲನೆ ಬಳಿಕ ಹೊಟೇಲ್​ ನಿಗದಿಯಾಗಲಿದೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಇದನ್ನೂ ಓದಿ: ನೇರ ಚುನಾವಣೆ ಗೆಲ್ಲಲಾಗದವರಿಂದ ರಾಜ್ಯಸಭೆ ಹಾದಿ: ಸೋನಿಯಾ ಗಾಂಧಿಗೆ ನರೇಂದ್ರ ಮೋದಿ ಕುಟುಕು

ಮೋದಿ ರಣತಂತ್ರ

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಗೆಲವು ಸಾಧಿಸಿತ್ತು. ಇದನ್ನು ಹೀಗೆ ಮುಂದುವರೆಸಲು ಉತ್ತರ ಕರ್ನಾಟಕ ಭಾಗಕ್ಕೆ ನರೇಂದ್ರ ಮೋದಿ ಬರಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸುಭದ್ರಗೊಳಿಸಲು ಪ್ರಧಾನಿ ಮೋದಿ ಕಹಳೆ ಊದಲಿದ್ದಾರೆ.

ನರೇಂದ್ರ ಮೋದಿ

ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ. ಬೃಹತ್​ ಸಮಾವೇಶಗಳ ಮೂಲಕ ಕಿತ್ತೂರು ಕರ್ನಾಟಕದ ಆರು ಕ್ಷೇತ್ರಗಳನ್ನು ಮರಳಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್​ 26 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Tue, 23 April 24