AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ; ಕ್ಷೇತ್ರಗಳು, ಸಮಯದ ವಿವರ ಇಲ್ಲಿದೆ

Lok Sabha Election 2024 News in Kannada: ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಏಪ್ರಿಲ್ 26, ಅಂದರೆ ನಾಳೆ ನಡೆಯಲಿದ್ದು ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ಯಾವೆಲ್ಲ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ? ಮತದಾನದ ಸಮಯ ಇತ್ಯಾದಿ ವಿವರ ಇಲ್ಲಿದೆ.

ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ; ಕ್ಷೇತ್ರಗಳು, ಸಮಯದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 25, 2024 | 12:06 PM

Share

ಬೆಂಗಳೂರು, ಏಪ್ರಿಲ್ 25: ಕರ್ನಾಟಕ ರಾಜಧಾನಿ ಬೆಂಗಳೂರಿನ (Bengaluru) ಲೋಕಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ (Lok Sabha Constituencies) ಶುಕ್ರವಾರ ಮತದಾನ ನಡೆಯಲಿದೆ. ಬೆಂಗಳೂರಿನ ಎಲ್ಲ ಲೋಕಸಭಾ ಕ್ಷೇತ್ರಗಳು ಒಳಗೊಂಡಂತೆ ದಕ್ಷಿಣದ 14 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಶುಕ್ರವಾರ ಮತಯಂತ್ರ ಸೇರಲಿದೆ. ಕರ್ನಾಟಕ (Karnataka) ಮಾತ್ರವಲ್ಲದೆ ಸೇರಿದಂತೆ 13 ರಾಜ್ಯಗಳ ವಿವಿಧ ಲೋಕಸಭಾ ಕ್ಷೇತ್ರಗಳಿಗೆ ಎರಡನೆಯ ಹಂತದಲ್ಲಿ ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಒಟ್ಟು 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯಲಿದೆ. ಕರ್ನಾಟಕದ ಜತೆಗೆ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರದ ಲೋಕಸಭಾ ಕ್ಷೇತ್ರಗಳಿಗೂ ಮತದಾನ ನಡೆಯಲಿದೆ.

ಕರ್ನಾಟಕದ ಯಾವೆಲ್ಲ ಕ್ಷೇತ್ರಗಳಿಗೆ ಮತದಾನ?

  • ಬೆಂಗಳೂರು ಕೇಂದ್ರ
  • ಬೆಂಗಳೂರು ಉತ್ತರ
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ದಕ್ಷಿಣ
  • ಚಾಮರಾಜನಗರ
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ಹಾಸನ
  • ಕೋಲಾರ
  • ಮಂಡ್ಯ
  • ಮೈಸೂರು
  • ತುಮಕೂರು
  • ಉಡುಪಿ ಚಿಕ್ಕಮಗಳೂರು

ಮತದಾನದ ಸಮಯ

ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಸರಿಯಾಗಿ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಸಂಜೆ 6 ಗಂಟೆಗೆ ಮತದಾನ ಕೊನೆಗೊಳ್ಳಲಿದೆ. ಅಂದರೆ, ಸಂಜೆ 6ರ ನಂತರ ಮತಗಟ್ಟೆಗೆ ಬರುವವರಿಗೆ ಮತದಾನಕ್ಕೆ ಅವಕಾಶ ದೊರೆಯುವುದಿಲ್ಲ. ಅದಕ್ಕೂ ಮೊದಲೇ ಬಂದು ಸರತಿಯಲ್ಲಿ ನಿಂತಿದ್ದರೆ ಅವಕಾಶ ನೀಡಲಾಗುತ್ತದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳೊಂದಿಗೆ ನೀವು ಮತದಾನ ಮಾಡ್ಬಹುದು

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆದಿದ್ದು, 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆದಿತ್ತು. ಕರ್ನಾಟಕದಲ್ಲಿ ಮೇ 7ರಂದು ಇನ್ನುಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜೂನ್ 1ರಂದು ದೇಶದಲ್ಲಿ ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ.

ನೀತಿ ಸಂಹಿತೆ ಉಲ್ಲಂಘನೆ: ದಾಖಲಾದ ಪ್ರಕರಣಗಳ ವಿವರ ಇಲ್ಲಿದೆ

ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಭರದಿಂದ ಸಿದ್ಧತೆ ಮಾಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ವಿಚಾರವಾಗಿ ಈ ವರೆಗೆ ರಾಜಕೀಯ ಪಕ್ಷಗಳ ವಿರುದ್ಧ ಒಟ್ಟು 23 ದ್ವೇಷ ಭಾಷಣದ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ 12 ಪ್ರಕರಣ ಬಿಜೆಪಿ ವಿರುದ್ಧ, 9 ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ 2 ಜೆಡಿಎಸ್ ವಿರುದ್ಧ ದಾಖಲಾಗಿವೆ. ಪ್ರಚಾರದಲ್ಲಿ ಮಕ್ಕಳ ಬಳಕೆ ಪ್ರಕರಣದಲ್ಲಿ ತಲಾ 7 ಕೇಸ್ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ದಾಖಲಾಗಿದ್ರೆ, ಒಂದು ಪಕ್ಷೇತರ ಅಭ್ಯರ್ಥಿ ವಿರುದ್ಧ ದಾಖಲಾಗಿದೆ. ಧಾರ್ಮಿಕ ಸ್ಥಳಗಳ ಬಳಕೆ ಸಂಬಂಧ 8 ಬಿಜೆಪಿ, 6 ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ 1 ಪ್ರಕರಣ ದಾಖಲಾಗಿದೆ. ಒಟ್ಟು 189 ಗಂಭೀರ ಸ್ವರೂಪದ ನೀತಿ ಸಂಹಿತೆ ಉಲ್ಲಂಘನೆ ಕೇಸ್ ಗಳು ಕೂಡಾ ದಾಖಲಿಸಲಾಗಿದೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು