Lok Sabha Elections 2024: ಲೋಕಸಭೆ ಚುನಾವಣೆ; ಹೆಚ್ಚಿನ ಸಂಖ್ಯೆಯ ಮತದಾನಕ್ಕೆ ಪ್ರಧಾನಿ ಮೋದಿ ಕರೆ

ನಿಮ್ಮ ಮತ ನಿಮ್ಮ ಧ್ವನಿ ಎಂದು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಮತದಾನ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿದಂತೆ 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

Lok Sabha Elections 2024: ಲೋಕಸಭೆ ಚುನಾವಣೆ; ಹೆಚ್ಚಿನ ಸಂಖ್ಯೆಯ ಮತದಾನಕ್ಕೆ ಪ್ರಧಾನಿ ಮೋದಿ ಕರೆ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on:Apr 26, 2024 | 9:16 AM

ಬೆಂಗಳೂರು, ಏಪ್ರಿಲ್ 26: ಕರ್ನಾಟಕ ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ (Lok Sabha Voting) ಆರಂಭಗೊಂಡಿದ್ದು, ಜನರು ಮತ ಚಲಾಯಿಸುತ್ತಿದ್ದಾರೆ. ಇದೇ ವೇಳೆ, ಸಾಮಾಜಿಕ ಮಾಧ್ಯಮ ಎಕ್​​ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ.

‘ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಮೋದಿ ಎಕ್ಸ್​ ಸಂದೇಶ

ಕರ್ನಾಟಕದ ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ ಚಿಕ್ಕಮಗಳೂರುಗಳಲ್ಲಿ ಮತದಾನ ಆರಂಭವಾಗಿದೆ.

ಮತದಾನದ ಲೈವ್ ಅಪ್​ಡೇಟ್​ಗೆ ಓದಿ: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಉಳಿದಂತೆ ಅಸ್ಸಾಂನ 5, ಬಿಹಾರದ 5, ಛತ್ತೀಸ್‌ಗಢದ 3, ಕರ್ನಾಟಕದ 14, ಕೇರಳದ 20, ಮಧ್ಯಪ್ರದೇಶದ 7, ಮಹಾರಾಷ್ಟ್ರದ 8, ಮಣಿಪುರದ 1, ರಾಜಸ್ಥಾನದ 13, ತ್ರಿಪುರಾದ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 am, Fri, 26 April 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ