AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಇಂದು 4ನೇ ಹಂತದ ಮತದಾನ; ಚುನಾವಣಾ ಕಣದಲ್ಲಿರುವ ಪ್ರಮುಖ ನಾಯಕರಿವರು

Phase 4 Election Candidates: ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ಇಂದು (ಮೇ 13) ನಡೆಯಲಿದೆ. ಅಖಿಲೇಶ್ ಯಾದವ್‌ನಿಂದ ಯೂಸುಫ್ ಪಠಾಣ್‌ವರೆಗೆ ಮತ್ತು ಮಹುವಾ ಮೊಯಿತ್ರಾದಿಂದ ಅಸಾದುದ್ದೀನ್ ಓವೈಸಿಯವರೆಗೆ ಈ ನಾಲ್ಕನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

Lok Sabha Election: ಇಂದು 4ನೇ ಹಂತದ ಮತದಾನ; ಚುನಾವಣಾ ಕಣದಲ್ಲಿರುವ ಪ್ರಮುಖ ನಾಯಕರಿವರು
ಲೋಕಸಭೆ ಚುನಾವಣೆImage Credit source: istock
ಸುಷ್ಮಾ ಚಕ್ರೆ
|

Updated on: May 13, 2024 | 6:16 AM

Share

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Polls 2024) 4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ 4ನೇ ಹಂತದಲ್ಲಿ ಆಂಧ್ರಪ್ರದೇಶದ ಎಲ್ಲಾ 25 ಸ್ಥಾನಗಳು, ತೆಲಂಗಾಣದ 17 ಕ್ಷೇತ್ರಗಳು, ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಪಶ್ಚಿಮ ಬಂಗಾಳದ 8, ಮಧ್ಯಪ್ರದೇಶದ 8, ಬಿಹಾರದ ತಲಾ 5 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್, ಒಡಿಶಾದಲ್ಲಿ 4, ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಸ್ಥಾನಕ್ಕೆ ಮತದಾನ (Voting) ನಡೆಯಲಿದೆ.

ಕುತೂಹಲ ಮೂಡಿಸಿರುವ ಚುನಾವಣಾ ಕ್ಷೇತ್ರಗಳು:

ಬಹರಂಪುರ-ಪಶ್ಚಿಮ ಬಂಗಾಳ:

ಬಹರಂಪುರದಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ (ಬಿಜೆಪಿ), ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಮತ್ತು ಬಿಜೆಪಿ ಅಭ್ಯರ್ಥಿ ನಿರ್ಮಲ್ ಕುಮಾರ್ ಸಹಾ ಅವರನ್ನು ಎದುರಿಸಲಿದ್ದಾರೆ.

ಹೈದರಾಬಾದ್-ತೆಲಂಗಾಣ:

ಹೈದರಾಬಾದ್‌ನಲ್ಲಿ ಭಾರತೀಯ ಜನತಾ ಪಕ್ಷದ ಮಾಧವಿ ಲತಾ ಅವರು ಲೋಕಸಭೆ ಚುನಾವಣೆಗೆ ಮಹತ್ವದ ಹಣಾಹಣಿಯಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಸಂಸದ ಅಸಾದುದ್ದೀನ್ ಓವೈಸಿಗೆ ಸವಾಲು ಹಾಕಿದ್ದಾರೆ. ಈ ಕ್ಷೇತ್ರದಲ್ಲಿ ಜನಪ್ರಿಯರಾಗಿರುವ ಅಸಾದುದ್ದೀನ್ ಓವೈಸಿ ಅವರು 5ನೇ ಅವಧಿಗೆ ರಾಜಕೀಯ ಪ್ರಾತಿನಿಧ್ಯ ಮತ್ತು ಅಲ್ಪಸಂಖ್ಯಾತರ ಹಕ್ಕುಗಳಿಗೆ ಒತ್ತು ನೀಡುವ ಮೂಲಕ ತೀವ್ರ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lok Sabha Polls: ಚುನಾವಣೆ ಫಲಿತಾಂಶದ ನಂತರ ರಾಹುಲ್ ಗಾಂಧಿ ದೇಶ ಬಿಟ್ಟು ಓಡಿ ಹೋಗುತ್ತಾರೆ; ಯೋಗಿ ಆದಿತ್ಯನಾಥ್

ಕೃಷ್ಣನಗರ-ಪಶ್ಚಿಮ ಬಂಗಾಳ:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರಾದ ಮಹುವಾ ಮೊಯಿತ್ರಾ ಅವರು ಬಿಜೆಪಿಯ ಅಮೃತಾ ರಾಯ್ ಅವರನ್ನು ಎದುರಿಸುತ್ತಾರೆ. 2019ರ ಲೋಕಸಭಾ ಚುನಾವಣೆಯಲ್ಲಿ, ಟಿಎಂಸಿಯ ಮಹುವಾ ಮೊಯಿತ್ರಾ 614,872 ಮತಗಳನ್ನು ಗಳಿಸಿ, 551,654 ಮತಗಳನ್ನು ಗಳಿಸಿದ ಬಿಜೆಪಿಯ ಕಲ್ಯಾಣ್ ಚೌಬೆ ಅವರನ್ನು ಸೋಲಿಸಿದ್ದರು.

ಬೇಗುಸರಾಯ್-ಬಿಹಾರ:

ಲೋಕಸಭೆ ಚುನಾವಣೆಯಲ್ಲಿ ಸಿಪಿಐ ಅಭ್ಯರ್ಥಿ ಅವಧೇಶ್ ರೈ ವಿರುದ್ಧ ಬಿಜೆಪಿಯ ಗಿರಿರಾಜ್ ಸಿಂಗ್ ಸ್ಪರ್ಧಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಗಿರಿರಾಜ್ ಸಿಂಗ್ ಅವರು ಸಿಪಿಐನ ಕನ್ಹಯ್ಯಾ ಕುಮಾರ್ ಅವರನ್ನು ಸೋಲಿಸಿದ್ದರು.

ಕನೌಜ್-ಉತ್ತರ ಪ್ರದೇಶ:

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಹಾಲಿ ಸಂಸದ ಮತ್ತು ಬಿಜೆಪಿ ನಾಯಕ ಸುಬ್ರತ್ ಪಾಠಕ್ ಅವರಿಗೆ ಸವಾಲು ಹಾಕುತ್ತಿದ್ದಾರೆ. ಅಖಿಲೇಶ್ ಯಾದವ್ ಅವರು 2000-2012ರವರೆಗೆ ಲೋಕಸಭೆಯ ಸಂಸದರಾಗಿ ಸೇವೆ ಸಲ್ಲಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ 2012ರಲ್ಲಿ ಕನ್ನೌಜ್ ಸಂಸದೀಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕಡಪ-ಆಂಧ್ರಪ್ರದೇಶ:

ಆಂಧ್ರಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ತಮ್ಮ ಸೋದರ ಸಂಬಂಧಿ ಹಾಲಿ ಸಂಸದ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧಿಸಿದ್ದಾರೆ.

ಕುಂತಿ-ಜಾರ್ಖಂಡ್:

ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನ ಕಾಳಿ ಚರಣ್ ಮುಂಡಾ ವಿರುದ್ಧ ಬಿಜೆಪಿಯ ಅರ್ಜುನ್ ಮುಂಡಾ ಸ್ಪರ್ಧಿಸಿದ್ದಾರೆ. ಅರ್ಜುನ್ ಮುಂಡಾ ಈ ಕ್ಷೇತ್ರದಿಂದ ಹಾಲಿ ಸಂಸದರಾಗಿದ್ದಾರೆ.

ಶ್ರೀನಗರ-ಜಮ್ಮು ಮತ್ತು ಕಾಶ್ಮೀರ:

ಪಿಡಿಪಿಯ ವಹೀದ್ ಪರ್ರಾಗೆ ನ್ಯಾಷನಲ್ ಕಾನ್ಫರೆನ್ಸ್‌ನ ಅಗಾ ಸೈಯದ್ ರುಹುಲ್ಲಾ ಮೆಹದಿ ಸವಾಲು ಹಾಕಿದ್ದಾರೆ. ಅಪ್ನಿ ಪಕ್ಷವು ಮೊಹಮ್ಮದ್ ಅಶ್ರಫ್ ಮಿರ್ ಅವರನ್ನು ಕಣಕ್ಕಿಳಿಸಿದೆ. ಪ್ರಸ್ತುತ ಈ ಸ್ಥಾನವನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೊಂದಿದ್ದಾರೆ.

ಅಸನ್ಸೋಲ್-ಪಶ್ಚಿಮ ಬಂಗಾಳ:

ಬಿಜೆಪಿಯ ಸುರಿಂದರ್‌ಜೀತ್ ಸಿಂಗ್ ಅಹ್ಲುವಾಲಿಯಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶತ್ರುಘ್ನ ಸಿನ್ಹಾ ಅವರನ್ನು ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಆಗ ಬಿಜೆಪಿಯಲ್ಲಿದ್ದ ಬಾಬುಲ್ ಸುಪ್ರಿಯೊ ಅವರು ಈ ಕ್ಷೇತ್ರವನ್ನು ಗೆದ್ದಿದ್ದರು. ಆದರೆ, ಸುಪ್ರಿಯೊ ಟಿಎಂಸಿಗೆ ಸೇರ್ಪಡೆಗೊಂಡಾಗ ಆ ಸ್ಥಾನ ತೆರವಾಗಿತ್ತು.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ಪಶ್ಚಿಮ ಬಂಗಾಳ ಜನತೆಗೆ 5 ಭರವಸೆಗಳ ಕೊಟ್ಟ ಮೋದಿ

ಮುಂಗೇರ್-ಬಿಹಾರ:

ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್) ಆರ್‌ಜೆಡಿ ನಾಯಕಿ ಅನಿತಾ ದೇವಿ ಅವರನ್ನು ಎದುರಿಸುತ್ತಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಯುನ ಲಾಲನ್ ಸಿಂಗ್ ಅವರು ಆರ್‌ಜೆಡಿಯ ನೀಲಮ್ ದೇವಿ ಅವರನ್ನು ಸೋಲಿಸಿ 1.67 ಲಕ್ಷ ಮತಗಳ ಅಂತರದಿಂದ ಮುಂಗರ್ ಗೆದ್ದಿದ್ದರು.

ಲೋಕಸಭೆ ಚುನಾವಣೆ 4ನೇ ಹಂತದ ಪ್ರಮುಖ ಅಭ್ಯರ್ಥಿಗಳು:

ಅಖಿಲೇಶ್ ಯಾದವ್ – ಉತ್ತರ ಪ್ರದೇಶದ ಕನೌಜ್ ಕ್ಷೇತ್ರ.

ಮಹುವಾ ಮೊಯಿತ್ರಾ – ಪಶ್ಚಿಮ ಬಂಗಾಳದ ಕೃಷ್ಣನಗರ.

ಅಧೀರ್ ರಂಜನ್ ಚೌಧರಿ – ಬಹರಂಪುರ್, ಪಶ್ಚಿಮ ಬಂಗಾಳ.

ಗಿರಿರಾಜ್ ಸಿಂಗ್ – ಬಿಹಾರದ ಬೇಗುಸರಾಯ್.

ವೈಎಸ್ ಶರ್ಮಿಳಾ – ಆಂಧ್ರಪ್ರದೇಶದ ಕಡಪ.

ಅರ್ಜುನ್ ಮುಂಡಾ – ಜಾರ್ಖಂಡ್‌ನ ಖುಂಟಿ ಕ್ಷೇತ್ರ.

ಶತ್ರುಘ್ನ ಸಿನ್ಹಾ – ಪಶ್ಚಿಮ ಬಂಗಾಳದ ಅಸನ್ಸೋಲ್.

ಅಸಾದುದ್ದೀನ್ ಓವೈಸಿ – ತೆಲಂಗಾಣದ ಹೈದರಾಬಾದ್.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ