ಲಾಲು ಪ್ರಸಾದ್ ಯಾದವ್ ನೀಡಿದ ಮುಸ್ಲಿಂ ಮೀಸಲಾತಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ಇಂದು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮುಸ್ಲಿಂ ಕೋಟಾವನ್ನು ಬೆಂಬಲಿಸಿ ಮಾತನಾಡಿದ್ದರು. ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.

ಲಾಲು ಪ್ರಸಾದ್ ಯಾದವ್ ನೀಡಿದ ಮುಸ್ಲಿಂ ಮೀಸಲಾತಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು
ಮಧ್ಯಪ್ರದೇಶದ ಧಾರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: May 07, 2024 | 7:56 PM

ಧಾರ್: INDIA ಒಕ್ಕೂಟವು ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಸಮುದಾಯದ ಮೀಸಲಾತಿ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ‘ಮುಸ್ಲಿಮರು ಮೀಸಲಾತಿ ಪಡೆಯಬೇಕು’ ಎಂಬ ಹೇಳಿಕೆಗೆ ಇಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಮಧ್ಯಪ್ರದೇಶದ ಧಾರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಮೀನಿನ ಮೇಲೆ ಹೊರಗಿರುವ “ಮೇವು ಹಗರಣದ ಆರೋಪಿ” ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬುದನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮೌನವಾಗಿದೆ. ಆದರೆ, ಇಂದು ಅದರ ಮಿತ್ರಪಕ್ಷವೊಂದು INDIA ಮೈತ್ರಿಯ ಉದ್ದೇಶಗಳನ್ನು ದೃಢಪಡಿಸಿದೆ. ಮೇವು ಹಗರಣದಲ್ಲಿ ಜೈಲಿನಲ್ಲಿದ್ದು, ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ನಾಯಕರೊಬ್ಬರು ಈಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅವರು ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎನ್ನುತ್ತಿದ್ದಾರೆ. ಇದರ ಅರ್ಥ ಏನು? ಈ ಜನರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಇರುವ ಎಲ್ಲಾ ಮೀಸಲಾತಿಯನ್ನು ಕಸಿದುಕೊಳ್ಳಲು ಮತ್ತು ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ನೀಡಲು ಬಯಸುತ್ತಾರೆ ಎಂದರ್ಥವಲ್ಲವೇ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ಮುಂಜಾನೆ, ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮುಸ್ಲಿಂ ಕೋಟಾವನ್ನು ಬೆಂಬಲಿಸಿ, ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್, ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು ಎಂದಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ‘ಅಬ್ಕಿ ಬಾರ್, 400 ಪಾರ್’ ಘೋಷಣೆಯ ಬಗ್ಗೆಯೂ ವಾಗ್ದಾಳಿ ನಡೆಸಿದ ಲಾಲು ಪ್ರಸಾದ್ ಯಾದವ್, ಮತಗಳು ನಮ್ಮ ಕಡೆ ಇವೆ. ಅವರು ಹೆದರಿ ‘ಜಂಗಲ್ ರಾಜ್’ ಆಗಲಿದೆ ಎಂದು ಹೇಳುವ ಮೂಲಕ ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಬಯಸುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 400ಕ್ಕೂ ಹೆಚ್ಚು ಸೀಟುಗಳಿಸಬೇಕು ಎಂದು ಹೇಳುತ್ತಿರುವುದಕ್ಕೆ ಕಾರಣ ತಿಳಿಸಿದ ಮೋದಿ

ಲೋಕಸಭಾ ಚುನಾವಣೆಯಲ್ಲಿ ಬಿಹಾರದ 40 ಸ್ಥಾನಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆಯ 3ನೇ ಹಂತದ ಭಾಗವಾಗಿ ಇಂದು ಬಿಹಾರದ 5 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಆ ಸ್ಥಾನಗಳೆಂದರೆ ಝಂಜರ್‌ಪುರ, ಸುಪೌಲ್, ಅರಾರಿಯಾ, ಮಾಧೇಪುರ ಮತ್ತು ಖಗರಿಯಾ. ಎಲ್ಲಾ ಹಂತಗಳ ಮತ ಎಣಿಕೆಯನ್ನು ಜೂನ್ 4 ರಂದು ನಿಗದಿಪಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ