ಧಾರ್: INDIA ಒಕ್ಕೂಟವು ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಸಮುದಾಯದ ಮೀಸಲಾತಿ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ‘ಮುಸ್ಲಿಮರು ಮೀಸಲಾತಿ ಪಡೆಯಬೇಕು’ ಎಂಬ ಹೇಳಿಕೆಗೆ ಇಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
ಮಧ್ಯಪ್ರದೇಶದ ಧಾರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಮೀನಿನ ಮೇಲೆ ಹೊರಗಿರುವ “ಮೇವು ಹಗರಣದ ಆರೋಪಿ” ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬುದನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಮೌನವಾಗಿದೆ. ಆದರೆ, ಇಂದು ಅದರ ಮಿತ್ರಪಕ್ಷವೊಂದು INDIA ಮೈತ್ರಿಯ ಉದ್ದೇಶಗಳನ್ನು ದೃಢಪಡಿಸಿದೆ. ಮೇವು ಹಗರಣದಲ್ಲಿ ಜೈಲಿನಲ್ಲಿದ್ದು, ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ನಾಯಕರೊಬ್ಬರು ಈಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅವರು ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಎನ್ನುತ್ತಿದ್ದಾರೆ. ಇದರ ಅರ್ಥ ಏನು? ಈ ಜನರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಇರುವ ಎಲ್ಲಾ ಮೀಸಲಾತಿಯನ್ನು ಕಸಿದುಕೊಳ್ಳಲು ಮತ್ತು ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ನೀಡಲು ಬಯಸುತ್ತಾರೆ ಎಂದರ್ಥವಲ್ಲವೇ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ
ಇಂದು ಮುಂಜಾನೆ, ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮುಸ್ಲಿಂ ಕೋಟಾವನ್ನು ಬೆಂಬಲಿಸಿ, ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್, ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು ಎಂದಿದ್ದರು.
Shocking statement by Lalu Ji on snatching the reservation from SC, ST and OBC communities in favour of petty votebank politics. We will never let this to happen. pic.twitter.com/1G0tStLJHB
— Narendra Modi (@narendramodi) May 7, 2024
ಪ್ರಧಾನಿ ನರೇಂದ್ರ ಮೋದಿಯವರ ‘ಅಬ್ಕಿ ಬಾರ್, 400 ಪಾರ್’ ಘೋಷಣೆಯ ಬಗ್ಗೆಯೂ ವಾಗ್ದಾಳಿ ನಡೆಸಿದ ಲಾಲು ಪ್ರಸಾದ್ ಯಾದವ್, ಮತಗಳು ನಮ್ಮ ಕಡೆ ಇವೆ. ಅವರು ಹೆದರಿ ‘ಜಂಗಲ್ ರಾಜ್’ ಆಗಲಿದೆ ಎಂದು ಹೇಳುವ ಮೂಲಕ ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಬಯಸುತ್ತಿದ್ದಾರೆ ಎಂದಿದ್ದರು.
ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 400ಕ್ಕೂ ಹೆಚ್ಚು ಸೀಟುಗಳಿಸಬೇಕು ಎಂದು ಹೇಳುತ್ತಿರುವುದಕ್ಕೆ ಕಾರಣ ತಿಳಿಸಿದ ಮೋದಿ
ಲೋಕಸಭಾ ಚುನಾವಣೆಯಲ್ಲಿ ಬಿಹಾರದ 40 ಸ್ಥಾನಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆಯ 3ನೇ ಹಂತದ ಭಾಗವಾಗಿ ಇಂದು ಬಿಹಾರದ 5 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಆ ಸ್ಥಾನಗಳೆಂದರೆ ಝಂಜರ್‌ಪುರ, ಸುಪೌಲ್, ಅರಾರಿಯಾ, ಮಾಧೇಪುರ ಮತ್ತು ಖಗರಿಯಾ. ಎಲ್ಲಾ ಹಂತಗಳ ಮತ ಎಣಿಕೆಯನ್ನು ಜೂನ್ 4 ರಂದು ನಿಗದಿಪಡಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ