Lok Sabha Election 2024 Result date:ಲೋಕಸಭೆ ಚುನಾವಣೆ 2024: ಮತ ಎಣಿಕೆ, ಫಲಿತಾಂಶ ಯಾವಾಗ?

India General Election Vote Counting Date: 543 ಲೋಕಸಭಾ ಸ್ಥಾನಗಳಲ್ಲಿ ನಡೆದ ಚುನಾವಣೆಯಲ್ಲಿ ಯಾರು ಗೆದ್ದು ಗದ್ದುಗೆಯೇರುತ್ತಾರೆ ಎಂದು ದೇಶದ ಜನರು ಕಾತರದಿಂದ ಕಾಯುತ್ತಿದ್ದಾರೆ. ಲೋಕಸಭಾ ಚುನಾವಣೆಯ ಮತ ಎಣಿಕೆ ಯಾವಾಗ? ಫಲಿತಾಂಶ ಯಾವಾಗ? ಚುನಾವಣೆಯಲ್ಲಿನ ಗೆಲುವು/ ಸೋಲುಗಳ ಸ್ಪಷ್ಟ ಚಿತ್ರಣ ಯಾವಾಗ ಸಿಗುತ್ತದೆ? ಇಲ್ಲಿದೆ ಮಾಹಿತಿ

Lok Sabha Election 2024 Result date:ಲೋಕಸಭೆ ಚುನಾವಣೆ 2024: ಮತ ಎಣಿಕೆ, ಫಲಿತಾಂಶ ಯಾವಾಗ?
ಪ್ರಾತಿನಿಧಿಕ ಚಿತ್ರ
Follow us
|

Updated on:May 28, 2024 | 4:04 PM

ದೆಹಲಿ ಮೇ 28: ಏಳನೇ ಮತ್ತು ಅಂತಿಮ ಹಂತದ ಮತದಾನವು (Polling) ಜೂನ್ 1 ರಂದು (ಶನಿವಾರ) ನಡೆಯಲಿದ್ದು, ಲೋಕಸಭೆ ಚುನಾವಣೆ 2024 (Lok Sabha Election) ಮುಕ್ತಾಯದ ಹಂತದಲ್ಲಿದೆ. ಜೂನ್ 25 ರಂದು ನಡೆದ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಭಾರತದಲ್ಲಿ ಒಟ್ಟಾರೆ 63.4 ರಷ್ಟು ಮತದಾನವಾಗಿದೆ. ಆದಾಗ್ಯೂ, 6 ನೇ ಹಂತದ ಮತದಾನವು ಮೊದಲ ನಾಲ್ಕು ಹಂತಗಳಲ್ಲಿನ ಮತದಾನಕ್ಕಿಂತ ಇನ್ನೂ ಕಡಿಮೆಯಾಗಿದೆ. 543 ಲೋಕಸಭಾ ಸ್ಥಾನಗಳಲ್ಲಿ ನಡೆದ ಚುನಾವಣೆಯಲ್ಲಿ ಯಾರು ಗೆದ್ದು ಗದ್ದುಗೆಯೇರುತ್ತಾರೆ ಎಂದು ದೇಶದ ಜನರು ಕಾತರದಿಂದ ಕಾಯುತ್ತಿದ್ದಾರೆ.

ಲೋಕಸಭೆ ಚುನಾವಣೆ 2024: ಮತ ಎಣಿಕೆ ಯಾವಾಗ?

ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಜೂನ್ 4 ರಂದು (ಮಂಗಳವಾರ) ನಡೆಯಲಿದೆ.

ಮತ ಎಣಿಕೆ ಎಷ್ಟು ಗಂಟೆಗೆ ಆರಂಭವಾಗಲಿದೆ?

ಜೂನ್ 4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಟ್ರೆಂಡ್‌ಗಳು ಮಧ್ಯಾಹ್ನದ ವೇಳೆಗೆ ಹೊರಹೊಮ್ಮಲು ಪ್ರಾರಂಭಿಸಿದರೆ, ಮಧ್ಯಾಹ್ನ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.

ಅಂತಿಮ ಫಲಿತಾಂಶವನ್ನು ಘೋಷಣೆ ಯಾವಾಗ?

ಅಂತಿಮವಾಹಿ ಅಧಿಕೃತ ಫಲಿತಾಂಶವನ್ನು ಚುನಾವಣಾ ಆಯೋಗವು ತಡರಾತ್ರಿ ಅಥವಾ ಜೂನ್ 5 ರಂದು ಬೆಳಿಗ್ಗೆ ಪ್ರಕಟಿಸುತ್ತದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಜತೆಗೆ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಜೂನ್ 2 ರಂದು ಪ್ರಕಟಿಸಲಾಗುವುದು. ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಜೂನ್ 4 ರಂದು ಲೋಕಸಭೆ ಚುನಾವಣೆಯೊಂದಿಗೆ ಮತ ಎಣಿಕೆ ನಡೆಯಲಿದೆ.

ಲೋಕಸಭೆ ಚುನಾವಣೆ 2024ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

ಲೋಕಸಭೆ ಚುನಾವಣೆ 2024 ರ ಫಲಿತಾಂಶಗಳು ಮತ್ತು ವಿಶ್ಲೇಷಣೆ ಟಿವಿ9ನಲ್ಲಿ ನಲ್ಲಿ ಲಭ್ಯವಿರುತ್ತದೆ ಮತ್ತು ಭಾರತದ ಚುನಾವಣಾ ಆಯೋಗವು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ (https://www.eci.gov.in/) ಫಲಿತಾಂಶಗಳನ್ನು ಪ್ರಕಟಿಸಲಿದೆ.

ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳ ಮತಗಳ ಎಣಿಕೆಗೆ ರಾಜ್ಯ ರಾಜಧಾನಿ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಮತ ಎಣಿಕೆ ದಿನದಂದು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಹೊರಡಿಸಿ ಆದೇಶ ಪ್ರಕಟವಾಗಿದೆ. ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಈ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೂ ಸಹ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಮತಯಂತ್ರಗಳನ್ನು ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಇರಿಸಲಾಗಿದೆ. ಇನ್ನು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ.4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ​ ಮಾಡಲಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಯಾರು ಗೆದ್ದರೆ ಮಾರುಕಟ್ಟೆ ವರ್ತನೆ ಹೇಗಿರುತ್ತೆ? ನೊಮುರಾ ಸಂಸ್ಥೆಯಿಂದ ಇಂಟರೆಸ್ಟಿಂಗ್ ಲೆಕ್ಕಾಚಾರ

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಸೇರಿದಂತೆ ಒಟ್ಟು ಹನ್ನೆರಡು ಷರತ್ತುಗಳನ್ನು ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 28 May 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು