ಲೋಕಸಭಾ ಚುನಾವಣೆ ಫಲಿತಾಂಶ: ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್ 

Lok Sabha Election 2024 Results: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ಜರಿ ಗೆಲುವು ಕಂಡಿತ್ತು. ಅದೇ ಟ್ರೆಂಡ್ ಲೋಕಸಭೆ ಚುನಾವಣೆಯಲ್ಲಿಯೂ ಮುಂದುವರಿದಿದೆ. ಬೀದರ್, ಗುಲಬರ್ಗಾ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭೆ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದೆ. ಇದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ನೀಡಿದೆ.

ಲೋಕಸಭಾ ಚುನಾವಣೆ ಫಲಿತಾಂಶ: ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್ 
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on: Jun 04, 2024 | 7:16 PM

ಬೆಂಗಳೂರು, (ಜೂನ್ 04): ತೀರ್ವ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ(Lok Sabha Election 2024 Results)  ಪ್ರಕಟವಾಗಿದೆ. ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ. ಇನ್ನು ರಾಜ್ಯದಲ್ಲಿ ಗೆದ್ದಿರೋ 9 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ಗೆದ್ದಿರೋದು ಕಲ್ಯಾಣ ಕರ್ನಾಟಕ ಭಾಗದ( kalyana Karnataka region )ಲೋಕಸಭಾ ಕ್ಷೇತ್ರಗಳಲ್ಲಿ ಅನ್ನೋದು ವಿಶೇಷ. ಹೌದು ಕಲ್ಯಾಣ ಕರ್ನಾಟಕ ಭಾಗದಲ್ಲಿರೋ ಐದಕ್ಕೂ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದೆ.ವಿಶೇಷ ಅಂದ್ರೆ 2019 ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಈ ಐದು ಸ್ಥಾನದಲ್ಲಿ ಗೆದ್ದಿತ್ತು. ಆದ್ರೆ 2024 ರ ಚುನಾವಣೆಯಲ್ಲಿ ಬಿಜೆಪಿ ಐದು ಕ್ಷೇತ್ರದಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ಈ ಬಾರಿ ಕಾಂಗ್ರೆಸ್​ ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಐಎಸಿಸಿ ಅಧ್ಯಕ್ಷ ಖರ್ಗೆ ತವರು ಭಾಗದಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್

ಹೌದು ಕಲ್ಯಾಣ ಕರ್ನಾಟಕ ಭಾಗದ, ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕೊಡಿಸಲು ಪ್ರಮುಖ ಪಾತ್ರ ವಹಿಸಿದ್ದ ಖರ್ಗೆ ,ಸ್ವತ 2019 ರಲ್ಲಿ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಆದ್ರೆ 2019 ರ ಸೋಲಿನ ಸೇಡನ್ನು ತೀರಿಸಿಕೊಳ್ಳುವಲ್ಲಿ ಖರ್ಗೆ ಸಫಲರಾಗಿದ್ದಾರೆ. ಕೇವಲ ಕಲಬುರಗಿ ಮಾತ್ರವಲ್ಲಾ, ಇಡೀ ಕಲ್ಯಾಣ ಕರ್ನಾಟಕ ಭಾಗದ ಜನರು ಖರ್ಗೆ ಕೈ ಹಿಡದಿದ್ದಾರೆ. ಬೀದರ್, ಕಲಬುರಗಿ,ರಾಯಚೂರು, ಬಳ್ಳಾರಿ, ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಜಯಗಳಿಸಿದ್ದು, ಐದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಬೀದರ್ ನಿಂದ ಸ್ಪರ್ಧಿಸಿ ಸೋತಿದ್ದರೆ, ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಕೂಡಾ ಹೀನಾಯವಾಗಿ ಸೋತಿದ್ದಾರೆ. ಬಿಜೆಪಿ ಘಟಾನುಗಟಿ ನಾಯಕರೇ ಕಲ್ಯಾಣ ಕರ್ನಾಟಕ ದಲ್ಲಿ ಸೋತಿದ್ದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ.

ನಾನು ಈ ಭಾಗಕ್ಕೆ ವಿಶೇಷ ಸ್ಥಾನಮಾವ ಸೇರಿದಂತೆ, ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿ ಗಾಗಿ ದುಡದಿದ್ದೇನೆ. ನೀವು ಮತಹಾಕಲು ಬರದೇ ಇದ್ರು ಪರವಾಗಿಲ್ಲ, ನಾನು ಸತ್ತಾಗಲಾದ್ರು ಬಂದು ಮಣ್ಣು ಹಾಕಿ ಅಂತ ಭಾವನಾತ್ಮಕ ಮಾತುಗಳನ್ನು ಹೇಳಿದ್ದರು. ತಮ್ಮ ತವರು ಭಾಗದಲ್ಲಿಯೇ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದರೆ ದೆಹಲಿ ಯಲ್ಲಿ ತನ್ನ ವರ್ಚಸ್ಸು ಇರುತ್ತದೆ ಅಂತ ಖರ್ಗೆ ಪ್ರಚಾರ ಮಾಡಿದ್ದರು. ಖರ್ಗೆ ಅವರ ಮಾತಿಗೆ ಮತದಾರರು ಮಣೆ ಹಾಕಿದ್ದಾರೆ. ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೂಡಾ ಕಲ್ಯಾಣ ಕರ್ನಾಟಕ ಭಾಗದ ಜನರು ಕಾಂಗ್ರೆಸ್ ಕೈ ಹಿಡಿದಿದ್ದರು. ಲೋಕಸಭಾ ಚುನಾವಣೆಯಲ್ಲಿ ಕೂಡಾ ಕಾಂಗ್ರೆಸ್ ಕೈ ಹಿಡದಿದ್ದಾರೆ.

ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹಾಕಲು ಯಡವಿದ್ದೆ ಸೋಲಿಗೆ ಪ್ರಮುಖ ಕಾರಣ ಅಂತ ಹೇಳಲಾಗುತ್ತಿದೆ. ಹೌದು ಬೀದರ್ ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಗೆ ಟಿಕೆಟ್ ನೀಡೋದಕ್ಕೆ ಅನೇಕ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಆದ್ರು ಸ್ಥಳೀಯ ಬಿಜೆಪಿ ನಾಯಕರ ಮಾತನ್ನು ಮೀರಿ ಬಿಜೆಪಿ ಹೈಕಮಾಂಡ್ ಖೂಬಾ ಗೆ ಟಿಕೆಟ್ ನೀಡಿತ್ತು. ಇನ್ನು ಬಳ್ಳಾರಿಯಲ್ಲಿ ಕೂಡಾ ರಾಮುಲು ಸೋಲುತ್ತಾರೆ ಅನ್ನೋ ವರದಿ ಇತ್ತು. ಆದ್ರು ರಾಮುಲುಗೆ ಟಿಕೆಟ್ ನೀಡಿದ್ದು, ಅಲ್ಲಿಯೂ ಬಿಜೆಪಿ ಗೆ ಹಿನ್ನಡೆಯಾಗಿದೆ. ಇನ್ನು ಕೊಪ್ಪಳದಲ್ಲಿ ಹಾಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಇದ್ರು, ಕರಡಿ ಸಂಗಣ್ಣಗೆ ಟಿಕೆಟ್ ನೀಡದೆ ಹೊಸ ಮುಖ ಡಾ. ಬಸವರಾಜ್ ಕ್ಯಾವಟರ್ ಗೆ ಟಿಕೆಟ್ ನೀಡಿದ್ದು, ಬಿಜೆಪಿಗೆ ಹಿನ್ನಡೆ ತಂದಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಕ್ಲೀನ್ ಸ್ವಿಪ್ ಮಾಡಿ, ಮತ್ತೊಮ್ಮೆ ಈ ಬಾಗ ಕಾಂಗ್ರೆಸ್ ಭದ್ರಕೋಟೆ ಅನ್ನೋದನ್ನು ಸಾಬೀತು ಮಾಡಿದೆ. ಆದ್ರೆ ಬಿಜೆಪಿ ತನ್ನ ಕಲ್ಲಮೇಲೆ ತಾನೇ ಕಲ್ಲು ಹಾಕಿಕೊಂಡು ಐದು ಸ್ಥಾನಗಳನ್ನು ಕಳೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ