Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections: ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತೀರಾ? ಹಾಗಾದರೆ ಗಮನಿಸಿ

ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಡಿದ್ದಂತೆಯೇ ಈ ವರ್ಷ ಕೂಡ ಲೋಕಸಭೆ ಚುನಾವಣೆ ವೇಳೆ ಮತದಾನ ಮಾಡಲು ತೆರಳುವಾಗ ಮತಗಟ್ಟೆಗೆ ಮೊಬೈಲ್ ಫೋನ್ ಕೊಂಡೊಯ್ಯುವುದಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾದರೆ ವೋಟಿಂಗ್​ಗೆ ಹೋಗುವಾಗ ಮೊಬೈಲ್​ ಕೊಂಡೊಯ್ಯಲೇಬಾರದೇ? ತೆಗೆದುಕೊಂಡು ಹೋದರೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ.

Lok Sabha Elections: ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತೀರಾ? ಹಾಗಾದರೆ ಗಮನಿಸಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 24, 2024 | 9:41 AM

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದ (Karnataka) 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ (Voting) ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವಾಗ ಎಚ್ಚರದಿಂದಿರಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜನರು ನಿಯಮಗಳನ್ನು ಪಾಲಿಸದ ನಿದರ್ಶನಗಳಿವೆ. ಮತದಾನ ಮಾಡುವಾಗ ಛಾಯಾಚಿತ್ರ ತೆಗೆಯುವ ಅಥವಾ ವೀಡಿಯೋ ಮಾಡಿ ಸಿಕ್ಕಿಬಿದ್ದ ನಿದರ್ಶನಗಳೂ ಇವೆ. ಹಾಗಾಗಿ ಮೊಬೈಲ್ ಫೋನ್​ಗಳನ್ನು ಇಡಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇ ಇಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಏಪ್ರಿಲ್ 26ಕ್ಕೆ 2ನೇ ಹಂತದ ಮತದಾನ, ಕರ್ನಾಟಕದ ಯಾವ ಕ್ಷೇತ್ರಗಳಿಗೆ ವೋಟಿಂಗ್? ಇಲ್ಲಿದೆ ವಿವರ

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಮಾಡಲಾಗಿತ್ತು. ಆದಾಗ್ಯೂ ಜನರು ವಿವಿಧ ಕಾರಣಗಳಿಗಾಗಿ ಫೋನ್‌ಗಳನ್ನು ಬಳಸಲು ಪ್ರಯತ್ನಿಸಿದ್ದರು ಎಂಬ ದೂರುಗಳು ಕೇಳಿಬಂದಿದ್ದವು. ಬೂತ್‌ಗಳಿಗೆ ಫೋನ್ ತೆಗೆದುಕೊಂಡು ಹೋಗಬೇಡಿ ಎಂದು ನಾವು ಹೇಳುತ್ತಿಲ್ಲ. ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ