ಲೋಕಸಭಾ ಚುನಾವಣೆ ಫಲಿತಾಂಶ: ಬೆಳಗಾವಿಯಲ್ಲಿ ತಮ್ಮ ತಾಕತ್ತು ತೋರಿಸಿದ ಜಾರಕಿಹೊಳಿ ಬ್ರದರ್ಸ್
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅಂಬರೀಶ್ ಸೋಲು ಕಂಡಿದ್ದಾರೆ. ಮೃಣಾಲ್ ಸೋಲಿಸಲು ಜಾರಕಿಹೊಳಿ ಸಹೋದರರು ಸೈಲೆಂಟ್ ಆಗಿ ಸೂತ್ರ ಹೆಣೆದಿದ್ದರು. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಜಗದೀಶ್ ಶೆಟ್ಟರ್ ಗೆಲ್ಲಿಸುವಲ್ಲಿ ಜಾರಕಿಹೊಳಿ ಸಹೋದರರ ಯಶಸ್ವಿ ಆಗಿದ್ದಾರೆ.
ಬೆಳಗಾವಿ, ಜೂನ್ 04: ರಾಜ್ಯದ ಪ್ರಭಾವಿ ರಾಜಕೀಯ ಕುಟುಂಬಗಳಲ್ಲಿ ಬೆಳಗಾವಿಯ ಜಾರಕಿಹೊಳಿ ಕುಟುಂಬವೂ ಒಂದು. ಯಾವುದೇ ಸರ್ಕಾರ ಇರಲಿ ಅಲ್ಲಿ ಜಾರಕಿಹೊಳಿ ಕುಟುಂಬದ ಓರ್ವ ಸದಸ್ಯ ಸಚಿವರಾಗಿರುತ್ತಾರೆ. ಅಷ್ಟರ ಮಟ್ಟಿಗೆ ಜಾರಕಿಹೊಳಿ ಸಹೋದರರು ರಾಜ್ಯ ರಾಜಕಾರಣದಲ್ಲಿ ಪ್ರಭಾವ ಹೊಂದಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರತಿ ಚುನಾವಣೆಗಳಲ್ಲೂ ತಮ್ಮದೇಯಾದ ಹಿಡಿತ ಹೊಂದಿದ್ದಾರೆ. ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಲ್ಲಿದ್ದರೆ, ಸತೀಶ್ ಜಾರಕಿಹೊಳಿ ಕಾಂಗ್ರೆಸ್ನಲ್ಲಿದ್ದಾರೆ. ಇವರು ಬೇರೆ ಬೇರೆ ಕ್ಷೇತ್ರಗಳಲ್ಲಿ ಇದ್ದರೂ ಸಹ ಅವರದ್ದೇಯಾದ ರಾಜಕೀಯ ಹಿಡಿತ, ಪ್ರಭಾವ ಹೊಂದಿದ್ದಾರೆ. ಅದನ್ನೂ ಇದೀಗ ಲೋಕಸಸಭಾ ಚುನಾವಣೆಯಲ್ಲಿ ತೋರಿಸಿದ್ದಾರೆ. ಹೌದು.. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಳನ್ನು ಗೆಲ್ಲಿಸಿಕೊಂಡಿದ್ದರೆ, ಇತ್ತ ರಮೇಶ್ ಜಾಕಿಹೊಳಿ ಹಾಗೂ ಚಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಮೂಲಕ ಇವರಿಬ್ಬರು ತಮ್ಮ ರಾಜಕೀಯ ಬದ್ಧ ವರಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಕ್ ಕೊಟ್ಟಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರನ್ನು ಸೋಲಿಸಲು ರಮೇಶ್ ಜಾಕಿಹೊಳಿ ಕಾದು ಕುಳಿತುಕೊಂಡಿದ್ದರು. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡಿದ್ದರು. ಆದರೂ ಕೂಡ ಲಕ್ಷ್ಮಿ ಹೆಬ್ಬಾಳ್ಕರ್ರನ್ನು ಸೋಲಿಸಲು ಆಗಿರಲಿಲ್ಲ. ಆದರೆ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಮೇಶ್ ಜಾಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದರು. ಆದರೆ ಮತ್ತೊಂದು ಅವಕಾಶಕ್ಕಾಗಿ ಕಾದು ಕುಳಿತ್ತಿದ್ದ ರಮೇಶ್ ಜಾಕಿಹೊಳಿ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ರನ್ನು ಗೆಲ್ಲಿಸುವ ಮೂಲಕ ಇದೀಗ ಸೇಡು ತೀರಿಸಿಕೊಂಡಿದ್ದಾರೆ.
ಇದನ್ನೂ ಓದಿ: Belagavi Lok Sabha Election Result 2024: ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲುವು
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅಂಬರೀಶ್ ಸೋಲು ಕಂಡಿದ್ದಾರೆ. ಮೃಣಾಲ್ ಸೋಲಿಸಲು ಜಾರಕಿಹೊಳಿ ಸಹೋದರರು ಸೈಲೆಂಟ್ ಆಗಿ ಸೂತ್ರ ಹೆಣೆದಿದ್ದರು. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಜಗದೀಶ್ ಶೆಟ್ಟರ್ ಗೆಲ್ಲಿಸುವಲ್ಲಿ ಜಾರಕಿಹೊಳಿ ಸಹೋದರರ ಯಶಸ್ವಿ ಆಗಿದ್ದಾರೆ.
ಇದನ್ನೂ ಓದಿ: Chikkodi Lok Sabha Election Result 2024: ಚಿಕ್ಕೋಡಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು
ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಜಾರಕಿಹೊಳಿ ಸಹೋದರರು ಕೆಲಸ ಮಾಡಿದ್ದಾರೆ. ಗೋಕಾಕ್, ಅರಬಾವಿಯಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಆ ಮೂಲಕ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡಿದ್ದರು. ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 24,000 ಮತಗಳು ಮತ್ತು ಅರಬಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 21,000 ಮತಗಳ ಲೀಡ್ ತಂದು ಕೊಟ್ಟಿದ್ದಾರೆ.
ಕೇತ್ರವಾರು ಮತದಾನ ವಿವರ ಹೀಗಿದೆ
- ಗೋಕಾಕ: 24000 ಮತಗಳು
- ಅರಭಾವಿ: 21000 ಮತಗಳು
- ಬೆಳಗಾವಿ ಉತ್ತರ: 4000 ಮತಗಳು
- ಬೆಳಗಾವಿ ದಕ್ಷಿಣ: 71000 ಮತಗಳು
- ಬೆಳಗಾವಿ ರೂರಲ್: 46000 ಮತಗಳು
- ಬೈಲಹೊಂಗಲ: 9000 ಮತಗಳು
- ರಾಮದುರ್ಗ: 400 ಮತಗಳು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:06 pm, Tue, 4 June 24