AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಹೆಚ್ಚಿದ ಹೊಸ ಮುಖಗಳು: ಮೊದಲ ಬಾರಿ ಸಂಸತ್​ ಕೆಳಮನೆ ಪ್ರವೇಶಿಸಲಿದ್ದಾರೆ 280 ಮಂದಿ

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ 267 ಮಂದಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಆ ಸಂಖ್ಯೆ ಹೆಚ್ಚಾಗಿದೆ. ಒಟ್ಟು 280 ಮಂದಿ ಮೊದಲ ಬಾರಿಗೆ ಈ ಸಲ ಸಂಸತ್​ನ ಕೆಳಮನೆ ಪ್ರವೇಶಿಸಲಿದ್ದಾರೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ, ಚಲನಚಿತ್ರ ತಾರೆಯರು, ಹೈಕೋರ್ಟ್​​ನ ಮಾಜಿ ನ್ಯಾಯಾಧೀಶರು ಮತ್ತು ರಾಜಕೀಯ ಕಾರ್ಯಕರ್ತರು ಸೇರಿದ್ದಾರೆ.

ಲೋಕಸಭೆಯಲ್ಲಿ ಹೆಚ್ಚಿದ ಹೊಸ ಮುಖಗಳು: ಮೊದಲ ಬಾರಿ ಸಂಸತ್​ ಕೆಳಮನೆ ಪ್ರವೇಶಿಸಲಿದ್ದಾರೆ 280 ಮಂದಿ
ಲೋಕಸಭೆಯಲ್ಲಿ ಹೆಚ್ಚಿದ ಹೊಸ ಮುಖಗಳು: ಮೊದಲ ಬಾರಿ ಸಂಸತ್​ ಕೆಳಮನೆ ಪ್ರವೇಶಿಸಲಿದ್ದಾರೆ 280 ಮಂದಿ
Ganapathi Sharma
|

Updated on: Jun 06, 2024 | 2:57 PM

Share

ನವದೆಹಲಿ, ಜೂನ್ 6: ಲೋಕಸಭೆ ಚುನಾವಣೆಯಲ್ಲಿ (Lok Sabha Election) 240 ಸ್ಥಾನಗಳೊಂದಿಗೆ ಬಿಜೆಪಿ (BJP) ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 18ನೇ ಲೋಕಸಭೆಯಲ್ಲಿ 280 ಸಂಸದರು (New MPs) ಮೊದಲ ಬಾರಿಗೆ ಸಂಸತ್ತಿನ ಕೆಳಮನೆ ಸದಸ್ಯರಾಗಲಿದ್ದಾರೆ. ಇವರಲ್ಲಿ ಮಾಜಿ ಮುಖ್ಯಮಂತ್ರಿ, ಚಲನಚಿತ್ರ ತಾರೆಯರು, ಹೈಕೋರ್ಟ್​​ನ ಮಾಜಿ ನ್ಯಾಯಾಧೀಶರು ಮತ್ತು ರಾಜಕೀಯ ಕಾರ್ಯಕರ್ತರು ಸೇರಿದ್ದಾರೆ. ಉತ್ತರ ಪ್ರದೇಶದಿಂದ ಮೊದಲ ಬಾರಿಗೆ 45 ಸದಸ್ಯರು ಆಯ್ಕೆಯಾಗಿದ್ದಾರೆ. ಜನಪ್ರಿಯ ಧಾರಾವಾಹಿ ರಾಮಾಯಣದಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ (ಮೀರತ್), ಅಮೇಥಿ ಕ್ಷೇತ್ರದಿಂದ ಗೆದ್ದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ, ಸಮಾಜವಾದಿ ಪಕ್ಷದ ನಾಯಕ ಚಂದ್ರಶೇಖರ್ ಆಜಾದ್ ಸೇರಿದಂತೆ ಅನೇಕ ಸಂಸದರು ಇವರಲ್ಲಿ ಸೇರಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ 267 ಮಂದಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು.

ಕಣಕ್ಕಿಳಿದಿದ್ದ 53 ಸಚಿವರಲ್ಲಿ 35 ಮಂದಿಗೆ ಗೆಲುವು

ಪುನರಾಯ್ಕೆಯಾದ ಸಂಸದರಲ್ಲಿ ಎಂಟು ಮಂದಿ ತಮ್ಮ ಕ್ಷೇತ್ರಗಳನ್ನು ಬದಲಾಯಿಸಿದ್ದರು ಮತ್ತು ಒಬ್ಬರು ಎರಡು ಕ್ಷೇತ್ರಗಳಿಂದ ಗೆದ್ದಿದ್ದಾರೆ. 17ನೇ ಲೋಕಸಭೆಯಲ್ಲಿ ಒಂಬತ್ತು ಮರು ಚುನಾಯಿತ ಸಂಸದರು ಬೇರೆ ಪಕ್ಷವನ್ನು ಪ್ರತಿನಿಧಿಸಿದರೆ, ಎಂಟು ಮಂದಿ ತಮ್ಮ ಹಿಂದಿನ ಪಕ್ಷದಿಂದ ಬೇರ್ಪಟ್ಟ ಬಣವನ್ನು ಪ್ರತಿನಿಧಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ 53 ಸಚಿವರ ಪೈಕಿ 35 ಮಂದಿ ಗೆದ್ದಿದ್ದಾರೆ.

ಹೊಸ ಲೋಕಸಭೆಯಲ್ಲಿ 240 ಸ್ಥಾನಗಳೊಂದಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿಯ ನಂತರದ ದೊಡ್ಡ ಪಕ್ಷವೆಂದರೆ ಕಾಂಗ್ರೆಸ್. ಇದು 99 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಸಮಾಜವಾದಿ ಪಕ್ಷವು 37 ಸ್ಥಾನಗಳೊಂದಿಗೆ ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ 16 ಕ್ಷೇತ್ರಗಳಲ್ಲಿ ಬಿಜೆಪಿ ದಡ ಸೇರಲು ನೆರವಾದ ಬಿಎಸ್‌ಪಿ ಅಭ್ಯರ್ಥಿಗಳು! ಹೇಗೆಂಬ ಮಾಹಿತಿ ಇಲ್ಲಿದೆ

ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಟಿಡಿಪಿ, ಜೆಡಿಎಯು, ಜೆಡಿಎಸ್ ಹಾಗೂ ಇತರ ಮಿತ್ರಪಕ್ಷಗಳ ಜತೆಗೂಡಿ ಸರ್ಕಾರ ರಚನೆ ಮಾಡುವುದು ಖಚಿತವಾಗಿದೆ. ಜೂನ್ 8 ಅಥವಾ 9ರಂದು ಮತ್ತೊಮ್ಮೆ, ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು