Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ

Lok Sabha Election Results: ಲೋಕಸಭಾ ಚುನಾವಣೆಯ ಮತ ಎಣಿಕೆ ಮುಗಿದಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ 295 ಸ್ಥಾನಗಳನ್ನು ಗಳಿಸಿದೆ. ಇಂಡಿಯ ಬಣ 230 ಸ್ಥಾನಗಳನ್ನು ಗಳಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ.

Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ
ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ
Follow us
ಸುಷ್ಮಾ ಚಕ್ರೆ
|

Updated on:Jun 04, 2024 | 6:19 PM

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ (Lok Sabha Election Results) ಜನತೆಯ ಫಲಿತಾಂಶವಾಗಿದೆ. ಈ ಜನಾದೇಶ ಮೋದಿಯವರ (Narendra Modi) ವಿರುದ್ಧ ಎಂಬುದು ಸ್ಪಷ್ಟವಾಗಿದೆ. ಇದು ಅವರ ನೈತಿಕ ಮತ್ತು ರಾಜಕೀಯ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು ಎಂದು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆ ನೀಡಿದ್ದಾರೆ.

ಇದು ಮೋದಿ, ಜನರ ನಡುವಿನ ಯುದ್ಧ ಎಂದು ನಾವು ಚುನಾವಣೆಗೂ ಮೊದಲೇ ಹೇಳಿದ್ದೆವು. ಈ ಸಲ ಜನ ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಿದೆ. ಅದನ್ನು ಜನರು ಸೋಲಿಸಿದ್ದಾರೆ. ಇದು ಬಿಜೆಪಿಯ ನೈತಿಕ ಸೋಲು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ

ನಾವು ಬಹಳ ವಿನಮ್ರತೆಯಿಂದ ಜನರ ತೀರ್ಪನ್ನು ಗೌರವಿಸುತ್ತೇವೆ. ಮೋದಿ ನೇತೃತ್ವದ ಎನ್​ಡಿಎಗೆ ದೊಡ್ಡ ನಷ್ಟ ಆಗಿದೆ. ಚುನಾವಣೆ ಪ್ರಚಾರದ ವೇಳೆ ಮೋದಿ ಸುಳ್ಳುಗಳನ್ನ ಹೇಳಿದ್ದಾರೆ. ಆಡಳಿತರೂಢ ಸರ್ಕಾರ ಹೆಜ್ಜೆ ಹೆಜ್ಜೆಗೂ ನಮಗೆ ಅಡ್ಡಿ ಮಾಡುತ್ತಿದ್ದರು. ನಮ್ಮ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದರು. ನಮ್ಮ ಬಣದ ನಾಯಕರ ಮೇಲೆ ದಾಳಿ ಮಾಡಿಸಿದ್ದರು. ಆದರೆ ಕಾಂಗ್ರೆಸ್ ಪಾಸಿಟಿವ್ ದೃಷ್ಟಿಯಿಂದಲೇ ಕ್ಯಾಂಪೇನ್ ಮಾಡಿ ಜನರ ಮುಂದೆ ಹೋದೆವು. ಜನರು ನಮ್ಮೊಂದಿಗೆ ಸೇರಿದರು, ನಮ್ಮನ್ನು ಬೆಂಬಲಿಸಿದರು. ಮೋದಿ ಮಾಡಿದ ಕ್ಯಾಂಪೇನ್ ಹಾಗೂ ಮಾತುಗಳನ್ನು ಇತಿಹಾಸ ನೆನಪಿಡುತ್ತದೆ. ಕಾಂಗ್ರೆಸ್​ನ ಪ್ರಣಾಳಿಕೆ ವಿರುದ್ಧ ಕೂಡ ಪ್ರಧಾನಿ ಅಪಪ್ರಚಾರ ಮಾಡಿದರು ಎಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಇದನ್ನೂ ಓದಿ: Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ

ಭಾರತ್ ಜೋಡೋ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದು. 5 ನ್ಯಾಯ್ ಹಾಗೂ ನಮ್ಮ ಗ್ಯಾರಂಟಿಗಳು ಮನೆ ಮನೆಗೆ ತಲುಪಿದವು. ಬಿಜೆಪಿಯವರು ಅಹಂಕಾರದಿಂದ ಸಂವಿಧಾನ ದುರ್ಬಳಕೆ ಮಾಡಿಕೊಂಡರು. ಸರ್ಕಾರಿ ಸಂಸ್ಥೆಗಳನ್ನು ದಬ್ಬಾಳಿಕೆಯಿಂದ ತಮ್ಮ ಕಡೆ ಮಾಡಿಕೊಂಡರು. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಇದು ಮೋದಿ ಹಾಗೂ ಜನರ ನಡುವಿನ ಯುದ್ಧ ಅಂತ ನಾವು ಹೇಳಿದ್ದೆವು. ಈ ಸಲ ಜನರು ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಘಟ ಬಂಧನ್ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Tue, 4 June 24

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್