Rahul Gandhi: ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆಯಿಟ್ಟಿದ್ದೇವೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ

Lok Sabha Polls Results: ಇಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಯಾವ ಪಕ್ಷಕ್ಕೂ ಪೂರ್ಣ ಬಹುಮತ ನೀಡದ ಮತದಾರರು ತಮ್ಮ ಆದೇಶವನ್ನು ನೀಡಿದ್ದಾರೆ. ಈ ಜನಾದೇಶ ಪ್ರಧಾನಿ ಮೋದಿ ವಿರುದ್ಧ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರೆ, ಸಂವಿಧಾನ ಉಳಿಸುವ ಹೋರಾಟವಿದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ.

Rahul Gandhi: ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆಯಿಟ್ಟಿದ್ದೇವೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ರಾಹುಲ್ ಗಾಂಧಿ ಸುದ್ದಿಗೋಷ್ಠಿ
Follow us
|

Updated on: Jun 04, 2024 | 6:53 PM

Lok Sabha Election Results 2024: ನವದೆಹಲಿ: ಈ ಚುನಾವಣೆ ರಾಜಕೀಯ ಪಕ್ಷದ ವಿರುದ್ಧ ಅಲ್ಲ. ಇದು ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಮೊದಲ ಹೆಜ್ಜೆಯಾಗಿದೆ. ಮೋದಿ ಸರ್ಕಾರ (NDA Government) ಎಲ್ಲಾ ಸಂಸ್ಥೆಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಂಡಿದೆ. ಈ ಲೋಕಸಭಾ ಚುನಾವಣೆಯು (Lok Sabha Elections) ಅದರ ವಿರುದ್ಧ ಹೋರಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಂಡಿಯ ಬ್ಲಾಕ್ 231 ಸ್ಥಾನಗಳಲ್ಲಿ ಮತ್ತು ಎನ್‌ಡಿಎ ಮೈತ್ರಿಕೂಟ 294 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಂಡಿಯ ಬ್ಲಾಕ್‌ನ ಭಾಗವಾಗಿರುವ ಕಾಂಗ್ರೆಸ್ 98 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ಕಾಂಗ್ರೆಸ್ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಕೇವಲ ರಾಜಕೀಯ ಕಾರಣಕ್ಕೆ ನಾವು ಹೋರಾಟ ಮಾಡಲಿಲ್ಲ. ಹಿಂದೂಸ್ತಾನದ ಇಡೀ ಆಡಳಿತ ವ್ಯವಸ್ಥೆಯ ವಿರುದ್ಧ ನಾವು ಹೋರಾಡಿದೆವು. ಮೋದಿ, ಅಮಿತ್ ಶಾ ಇದೆಲ್ಲವನ್ನೂ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದರು. ನಮ್ಮನ್ನು ಹೆದರಿಸಿದರು, ದಬ್ಬಾಳಿಕೆ ಮಾಡಿದರು, ದೌರ್ಜನ್ಯ ಮಾಡಿದರು. ನಾವು ಸಂವಿಧಾನ ಉಳಿಸಲು ಹೋರಾಡಬೇಕಿತ್ತು ಎಂದು ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದು ತೋರಿಸಿದ್ದಾರೆ.

ಇದನ್ನೂ ಓದಿ: Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ

ನಿತೀಶ್ ಕುಮಾರ್ ಕುರಿತಾದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ನಮ್ಮ ಮೈತ್ರಿ ಪಕ್ಷಗಳನ್ನು ನಾವು ಗೌರವಿಸುತ್ತೇವೆ. ಅವರೊಂದಿಗೆ ಮಾತನಾಡದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾಳೆ ಇಂಡಿಯ ಬ್ಲಾಕ್ ನಾಯಕರ ಸಭೆ ನಡೆಯಲಿದ್ದು, ಎಲ್ಲರೊಂದಿಗೆ ಮಾತನಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ: ಹೊರಗಿನವ ಅಂತ ಟೀಕಿಸಿದ ಕಾಂಗ್ರೆಸ್ ನಾಯಕರಿಗೆ ಜನರೇ ತಕ್ಕ ಉತ್ತರ ನೀಡಿದ್ದಾರೆ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿಗೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ. ಇದು ಅವರ ನೈತಿಕ ಮತ್ತು ರಾಜಕೀಯ ಸೋಲು. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಿದೆ. ಅದನ್ನು ಜನರು ಸೋಲಿಸಿದ್ದಾರೆ. ಇದು ಬಿಜೆಪಿಯ ನೈತಿಕ ಸೋಲು. ನಾವು ಬಹಳ ವಿನಮ್ರತೆಯಿಂದ ಜನರ ತೀರ್ಪನ್ನು ಗೌರವಿಸುತ್ತೇವೆ. ಮೋದಿ ನೇತೃತ್ವದ ಎನ್​ಡಿಎಗೆ ದೊಡ್ಡ ನಷ್ಟ ಆಗಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್