Lok Sabha Election Results: ಅಮೇಥಿಯಲ್ಲಿ ನನ್ನ ಸೇವೆ ಮುಂದುವರೆಯುತ್ತೆ, ಸೋಲಿನ ಬಳಿಕ ಸ್ಮೃತಿ ಇರಾನಿ ಮಾತು

ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತ ಬಳಿಕ ಸ್ಮೃತಿ ಇರಾನಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಇದು ಗೆದ್ದವರನ್ನು ಅಭಿನಂದಿಸುವ ಸಮಯ, ನಾನು ಇನ್ನುಮುಂದೆ ಕೂಡ ಅಮೇಥಿಯಲ್ಲಿ ಸೇವೆ ಮುಂದುವರೆಸುತ್ತೇನೆ ಎಂದರು.

Lok Sabha Election Results: ಅಮೇಥಿಯಲ್ಲಿ ನನ್ನ ಸೇವೆ ಮುಂದುವರೆಯುತ್ತೆ, ಸೋಲಿನ ಬಳಿಕ ಸ್ಮೃತಿ ಇರಾನಿ ಮಾತು
ಸ್ಮೃತಿ ಇರಾನಿ
Follow us
|

Updated on: Jun 05, 2024 | 8:19 AM

ಉತ್ತರ ಪ್ರದೇಶದ ಅಮೇಥಿ(Amethi)ಯಿಂದ ಮರು ಆಯ್ಕೆ ಬಯಸಿದ್ದ ಕೇಂದ್ರ ಸಚಿವೆ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕಿ ಸ್ಮೃತಿ ಇರಾನಿ(Smriti Irani) ಅವರು ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ತಮ್ಮ ಸೋಲಿನ ಬಗ್ಗೆ ಮಾತನಾಡಿದ ಅವರು ಇದು ಗೆದ್ದವರನ್ನು ಅಭಿನಂದಿಸುವ ಸಮಯ, ನಾನು ಅಮೇಥಿಯಲ್ಲಿ ನನ್ನ ಸೇವೆಯನ್ನು ಮುಂದುವರೆಸುತ್ತೇನೆ ಎಂದರು.

ಕ್ಷೇತ್ರ ಮತ್ತು ಪಕ್ಷದ ಸೇವೆಯಲ್ಲಿ ಅತ್ಯಂತ ಸಮರ್ಪಣೆ ಮತ್ತು ನಿಷ್ಠೆಯಿಂದ ದುಡಿದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇಂದು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರಗಳು 30 ವರ್ಷಗಳ ಬಾಕಿ ಉಳಿದಿರುವ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರು ಉತ್ತರ ಪ್ರದೇಶದ ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಯಾದ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು 1.67 ಲಕ್ಷ ಮತಗಳ ಅಂತರದಿಂದ ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶದಲ್ಲಿ ಪಕ್ಷಾಂತರಿ ನಾಯಕರಿಂದ ಬಿಜೆಪಿಗೆ ನಷ್ಟವೇ ಹೆಚ್ಚು! ಎಡವಿದ್ದು ಎಲ್ಲೆಲ್ಲಿ? ಇಲ್ಲಿದೆ ನೋಡಿ

ಚುನಾವಣಾ ಆಯೋಗದ ಪ್ರಕಾರ, ಇರಾನಿ 3,72,032 ಮತಗಳನ್ನು ಪಡೆದರೆ, ಶರ್ಮಾ 5,39,228 ಮತಗಳನ್ನು ಪಡೆದರು. ಬಿಎಸ್ಪಿ ಅಭ್ಯರ್ಥಿ 34,534 ಮತಗಳನ್ನು ಪಡೆದಿದ್ದಾರೆ.

ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅಮೇಥಿಯ ವಿಜೇತ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರು ಅಮೇಥಿಯ ಜನರಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದರು, ಅಮೇಥಿಯಲ್ಲಿ 18 ನೇ ಲೋಕಸಭೆ ಚುನಾವಣೆ ಪ್ರಬಲ ಮತ್ತು ಸಶಕ್ತ ಪ್ರಜಾಪ್ರಭುತ್ವ ದೇಶಕ್ಕೆ ದೊಡ್ಡ ಉದಾಹರಣೆಯಾಗಿದೆ ಎಂದು ಹೇಳಿದರು.

ಒಬ್ಬ ಜನಪ್ರತಿನಿಧಿಯಾಗಿ, ರಾಜಕೀಯ ಕಾರ್ಯಕರ್ತೆಯಾಗಿ ಕ್ಷೇತ್ರದ ಪ್ರತಿ ಹಳ್ಳಿಗೂ ತೆರಳಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಸ್ಮೃತಿ ಇರಾನಿ 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು 55 ಸಾವಿರ ಮತಗಳಿಂದ ಸೋಲಿಸಿದ್ದರು. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದ್ದು, ಸತತ ಮೂರನೇ ಬಾರಿಗೆ ಗೆದ್ದು ಸಾಧನೆ ಮಾಡಿದೆ.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್