ಪಿಒಕೆ ಭಾರತಕ್ಕೆ ಸೇರಿದ್ದು, ಅದನ್ನು ವಶಕ್ಕೆ ಪಡೆದೇ ಪಡೆಯುತ್ತೇವೆ; ಅಮಿತ್ ಶಾ
ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತವು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಾಪಾಸ್ ಪಡೆದೇ ಪಡೆಯುತ್ತೇವೆ ಎಂದು ಅವರು ಪುನರುಚ್ಛರಿಸಿದ್ದಾರೆ.
ಕೊಲ್ಕತ್ತಾ: ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ (Lok Sabha Elections 2024) ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮೇಲೆ ಭಾರತದ ಸಾರ್ವಭೌಮತ್ವವನ್ನು ಒತ್ತಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತವು ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ಹಿಂಪಡೆಯಲಿದೆ ಎಂದು ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಅಮಿತ್ ಶಾ, ಬಿಜೆಪಿ ಸರ್ಕಾರವು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದಾಗಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮರಳಿದೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಆಜಾದಿ (ಸ್ವಾತಂತ್ರ್ಯ) ಘೋಷಣೆಗಳು ಪ್ರತಿಧ್ವನಿಸುತ್ತಿವೆ ಎಂದಿದ್ದಾರೆ.
ಇದನ್ನೂ ಓದಿ: PM Modi: ಕಾರೂ ಇಲ್ಲ, ಮನೆಯೂ ಇಲ್ಲ; ಪ್ರಧಾನಿ ನರೇಂದ್ರ ಮೋದಿ ಒಟ್ಟು ಆಸ್ತಿ 3 ಕೋಟಿ ರೂ.
ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಕುರಿತು ಮಾತನಾಡಿರುವ ಅಮಿತ್ ಶಾ, ಇಂಡಿಯಾ ಮೈತ್ರಿಕೂಟದ ಆಡಳಿತದ ಅವಧಿಯಲ್ಲಿ ಕಾಶ್ಮೀರ ಕಣಿವೆಯೊಳಗೆ ಸಂಭವಿಸಿದ ಮುಷ್ಕರಗಳು ಈಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಮುಷ್ಕರಗಳಿಗೆ ಸಾಕ್ಷಿಯಾಗುತ್ತಿದೆ. ಪಿಒಕೆ ಭಾರತಕ್ಕೆ ಸೇರಿದ್ದು. ಅದನ್ನು ನಾವು ವಶಕ್ಕೆ ಪಡೆಯುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
#WATCH | While Speaking at West Bengal’s Serampore public meeting, Union Home Minister Amit Shah says, “Mamata Banerjee came into power with the slogan of ‘Ma, Maati, Manush’ but this slogan has lost now and ‘Mulla, Maulavi, Madrasa’ is there at the ground… She denies the… pic.twitter.com/HPkQmUGZB9
— ANI (@ANI) May 15, 2024
ಭಾರತವು ಪರಮಾಣು ಶಕ್ತಿ ಪಾಕಿಸ್ತಾನವನ್ನು ಗೌರವಿಸಬೇಕು ಎಂಬ ಮಣಿಶಂಕರ್ ಅಯ್ಯರ್ ಅವರ ವೈರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ದೇಶದ ಬಾಂಬ್‌ಗಳ ಹೊರತಾಗಿಯೂ ಭಾರತವು ಪಿಒಕೆ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಮಣಿಶಂಕರ್ ಅಯ್ಯರ್ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ವಿರೋಧ ಪಕ್ಷದ ನಾಯಕರು ಬಳಸುತ್ತಿರುವ ಗೊಂದಲದ ತಂತ್ರಗಳ ಬಗ್ಗೆ ಆಕ್ರೋಶ ಹೊರಹಾಕಿರುವ ಅಮಿತ್ ಶಾ, ಅವರು ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವುದನ್ನು ಎತ್ತಿ ತೋರಿಸುವುದರ ಮೂಲಕ ರಾಷ್ಟ್ರದಲ್ಲಿ ಭಯವನ್ನು ಹುಟ್ಟುಹಾಕುವ ಗುರಿಯನ್ನು ಹೊಂದಿದ್ದಾರೆ. ಪಾಕಿಸ್ತಾನ-ಪಿಒಕೆ ಮೇಲಿನ ಚರ್ಚೆಗಳನ್ನು ನಿರ್ಲಕ್ಷಿಸಿದ್ದಾರೆ. 2.11 ಕೋಟಿ ಪ್ರವಾಸಿಗರು ಕಾಶ್ಮೀರಕ್ಕೆ ಹೋಗಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
#WATCH | While Speaking at West Bengal’s Serampore public meeting, Union Home Minister Amit Shah says, “When INDI alliance was ruling, strikes used to happen in our part of Kashmir, see the effect of PM Modi, now, strikes happen in PoK. Earlier slogans of Azadi, stone pelting… pic.twitter.com/kVM6pZAVzG
— ANI (@ANI) May 15, 2024
ಇದನ್ನೂ ಓದಿ: Amit Shah: ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು; ಅಮಿತ್ ಶಾ ಘೋಷಣೆ
ಈ ವೇಳೆ ಅಮಿತ್ ಶಾ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರವು ಪ್ರತಿಯೊಬ್ಬ ಬಡ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸುತ್ತಿದೆ. ಆದರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿತರಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿದ್ದಾರೆ ಎಂದು ಅಮಿತ್ ಶಾ ಟೀಕಿಸಿದ್ದಾರೆ. ಮೋದಿಯವರ ಸರ್ಕಾರವು ಅಕ್ಕಿಯನ್ನು ಕಳುಹಿಸುತ್ತಿದ್ದರೆ ಮಮತಾ ಬ್ಯಾನರ್ಜಿ ಅದರ ಮೇಲೆ ತನ್ನದೇ ಆದ ಫೋಟೋವನ್ನು ಅಂಟಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ