Arvind Kejriwal: ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ; ಮತದಾರರಿಗೆ ಕೇಜ್ರಿವಾಲ್ ಮನವಿ

Lok Sabha Polls 2024: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮನ್ನು ಮತ್ತೆ ಜೈಲಿಗೆ ಹೋಗದಂತೆ ರಕ್ಷಿಸಲು ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಗೆಲ್ಲಿಸುವಂತೆ ಜನರ ಬಳಿ ಮನವಿ ಮಾಡಿದ್ದಾರೆ.

Arvind Kejriwal: ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ; ಮತದಾರರಿಗೆ ಕೇಜ್ರಿವಾಲ್ ಮನವಿ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: May 12, 2024 | 7:56 PM

ನವದೆಹಲಿ: ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಭಾನುವಾರ ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ ರ್ಯಾಲಿ ನಡೆಸಿದರು. ಈ ವೇಳೆ ಮತದಾರರ ಬಳಿ ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರಕ್ಕೆ ಬರಲು ಮತ ಚಲಾಯಿಸಬೇಕೆಂದು ಮನವಿ ಮಾಡಿದ ಅವರು, ತಾವು ವಾಪಾಸ್ ತಿಹಾರ್ ಜೈಲಿಗೆ ಹೋಗದಂತೆ ರಕ್ಷಿಸಲು ಲೋಕಸಭೆ ಚುನಾವಣೆಯಲ್ಲಿ ತಮ್ಮ ಆಮ್ ಆದ್ಮಿ ಪಕ್ಷಕ್ಕೆ (AAP) ಮತ ನೀಡುವಂತೆ ಜನರನ್ನು ಒತ್ತಾಯಿಸಿದ್ದಾರೆ.

“20 ದಿನಗಳ ನಂತರ ನಾನು ಮತ್ತೆ ಜೈಲಿಗೆ ಹೋಗಬೇಕಾಗಿದೆ. ನೀವು ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ” ಎಂದಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ರೋಡ್ ಶೋ ಸಂದರ್ಭದಲ್ಲಿ ಈ ರೀತಿ ಹೇಳಿದ್ದಾರೆ.

ಇದನ್ನೂ ಓದಿ: ಅಮ್ಮಂದಿರ ದಿನಕ್ಕೆ ಮೋದಿಗೆ ವಿಶೇಷ ಉಡುಗೊರೆ; ತಾಯಿಯ ನೆನೆದು ಭಾವುಕರಾದ ಪ್ರಧಾನಿ

ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಜೂನ್ 2ರಂದು ಅವರ ಜಾಮೀನು ಅವಧಿ ಮುಕ್ತಾಯವಾಗಲಿದೆ.

ಇಂದಿನ ರೋಡ್ ಶೋದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ ಮುಖ್ಯಸ್ಥ ಕೇಜ್ರಿವಾಲ್, ದೆಹಲಿಯ ಜನರಿಗಾಗಿ ಕೆಲಸ ಮಾಡಿದ ಕಾರಣ ನನ್ನನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು. “ನನ್ನ ತಪ್ಪು ನಾನು ದೆಹಲಿ-ಎನ್‌ಸಿಆರ್‌ಗಾಗಿ ಶಾಲೆಗಳನ್ನು ನಿರ್ಮಿಸಿದ್ದೇನೆ. ನಾನು ನಿಮಗಾಗಿ ಕೆಲಸ ಮಾಡಿದ್ದರಿಂದ ಅವರು ನನ್ನನ್ನು ಜೈಲಿಗೆ ಕಳುಹಿಸಿದ್ದಾರೆ. ದೆಹಲಿ ಜನರ ಕೆಲಸ ಮಾಡುವುದನ್ನು ಬಿಜೆಪಿ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಕಂಡು ಆನಂದಬಾಷ್ಪ ಸುರಿಸಿದ ಬೆಂಗಾಲಿಗರು

ತಿಹಾರ್ ಜೈಲಿನಲ್ಲಿ 15 ದಿನಗಳ ಕಾಲ ನನ್ನ ಇನ್ಸುಲಿನ್ ಚುಚ್ಚುಮದ್ದನ್ನು ನಿಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. “ನಾನು ಜನರಿಗೆ ಉಚಿತ ಔಷಧಿಗಾಗಿ ಸೌಲಭ್ಯಗಳನ್ನು ಏರ್ಪಡಿಸಿದ್ದೇನೆ. ಆದರೆ ನಾನು ಜೈಲಿನಲ್ಲಿದ್ದಾಗ 15 ದಿನಗಳ ಕಾಲ ಅವರು ನನಗೆ ಮಧುಮೇಹ ಔಷಧವನ್ನು ನೀಡಲಿಲ್ಲ, ನನಗೆ ಜೈಲಿನಲ್ಲಿ 15 ದಿನಗಳು ಇನ್ಸುಲಿನ್ ನೀಡಲಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನಾನು ಮತ್ತೆ ಜೈಲಿಗೆ ಹೋದರೆ ಬಿಜೆಪಿಯವರು ನಿಮ್ಮ ಕೆಲಸವನ್ನು ನಿಲ್ಲಿಸುತ್ತಾರೆ. ಉಚಿತ ವಿದ್ಯುತ್, ಶಾಲೆಗಳನ್ನು ಹಾಳು ಮಾಡುತ್ತಾರೆ. ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳನ್ನು ಮುಚ್ಚುತ್ತಾರೆ ಎಂದು ಅವರು ಆರೋಪಿಸಿದರು.

ದೆಹಲಿಯ ಎಲ್ಲಾ 7 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು 6ನೇ ಹಂತದಲ್ಲಿ ಮತದಾನ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ