ಮಹಾರಾಷ್ಟ್ರದಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ, 15 ಶಿವಸೇನೆ, ಅಜಿತ್ ಪವಾರ್ ಅವರ ಎನ್‌ಸಿಪಿ 4 ಸ್ಥಾನಗಳಲ್ಲಿ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವು ಎಲ್ಲಾ 48 ಸ್ಥಾನಗಳ ಹಂಚಿಕೆಯನ್ನು ಅಂತಿಮಗೊಳಿಸಿದೆ. ಬಿಜೆಪಿ 28 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಏಕನಾಥ್ ಶಿಂಧೆ ಅವರ ಶಿವಸೇನೆ 15 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಅಜಿತ್ ಪವಾರ್ ಅವರ ಎನ್‌ಸಿಪಿ 4 ಸ್ಥಾನ ಮತ್ತು ರಾಷ್ಟ್ರೀಯ ಸಮಾಜ ಪಕ್ಷ (ಆರ್‌ಎಸ್‌ಪಿ) 1 ಸ್ಥಾನದಲ್ಲಿ ಸ್ಪರ್ಧಿಸಲಿದೆ.

ಮಹಾರಾಷ್ಟ್ರದಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ, 15 ಶಿವಸೇನೆ, ಅಜಿತ್ ಪವಾರ್ ಅವರ ಎನ್‌ಸಿಪಿ 4 ಸ್ಥಾನಗಳಲ್ಲಿ ಸ್ಪರ್ಧೆ
ಏಕನಾಥ್ ಶಿಂಧೆ
Follow us
ಸುಷ್ಮಾ ಚಕ್ರೆ
|

Updated on: May 01, 2024 | 6:04 PM

ಮುಂಬೈ: ಲೋಕಸಭೆ ಚುನಾವಣೆಯಲ್ಲಿ (Lok Sabha Polls 2024) ಮಹಾರಾಷ್ಟ್ರದ (Maharashtra) ಎಲ್ಲಾ 48 ಸ್ಥಾನಗಳಿಗೆ ಮಹೌತಿ ಸರ್ಕಾರ ಇಂದು ಅಂತಿಮ ಒಮ್ಮತವನ್ನು ತಲುಪಿದೆ. ಮಾಹಿತಿಯ ಪ್ರಕಾರ, ಭಾರತೀಯ ಜನತಾ ಪಕ್ಷ (ಬಿಜೆಪಿ) 28 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 15 ಸ್ಥಾನಗಳಲ್ಲಿ, ಎನ್‌ಸಿಪಿ (ಅಜಿತ್ ಪವಾರ್) 4 ಸ್ಥಾನಗಳಲ್ಲಿ ಮತ್ತು ರಾಷ್ಟ್ರೀಯ ಸಮಾಜ ಪಕ್ಷ (ಆರ್‌ಎಸ್‌ಪಿ) 1 ಸ್ಥಾನದಲ್ಲಿ ಸ್ಪರ್ಧಿಸಲಿದೆ.

ಶಿವಸೇನೆಯ ಏಕನಾಥ್ ಶಿಂಧೆ ಬಣವು ಹಾಲಿ ಸಂಸದ ಹೇಮಂತ್ ಗೋಡ್ಸೆಗೆ ನಾಸಿಕ್ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಅಜಿತ್‌ ಪವಾರ್‌ ಗುಂಪಿನ ಛಗನ್‌ ಭುಜಬಲ್‌ ನಾಸಿಕ್‌ ಸೀಟಿನ ಮೇಲೆ ಬಹಳ ದಿನಗಳಿಂದ ಹಕ್ಕು ಚಲಾಯಿಸುತ್ತಿದ್ದರು. ಭುಜಬಲ್ ಅವರ ಹೇಳಿಕೆಯಿಂದಾಗಿ ಶಿಂಧೆ ಗುಂಪು ಮತ್ತು ಬಿಜೆಪಿಯ ತೊಂದರೆಗಳು ಹೆಚ್ಚಾದವು.

ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಕೇಜ್ರಿವಾಲ್​ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಪ್ರತಿಪಕ್ಷಗಳ ಸೀಟು ಹಂಚಿಕೆ:

ವಿರೋಧ ಪಕ್ಷದಲ್ಲಿ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಶಿವಸೇನೆ (ಯುಬಿಟಿ) 21, ಕಾಂಗ್ರೆಸ್ 17 ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಶರಶ್ಚಂದ್ರ ಪವಾರ್) 10ರಲ್ಲಿ ಸ್ಪರ್ಧಿಸುತ್ತಿದೆ. ಈ ಹಿಂದೆ 3 ಪಕ್ಷಗಳು ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೊಂಡವು. ವಿಕಾಸ್ ಅಘಾಡಿ (MVA) ಸರ್ಕಾರ ಶಿವಸೇನೆಯಲ್ಲಿನ ವಿಭಜನೆಯ ನಂತರ 2022ರ ಜೂನ್​ನಲ್ಲಿ ಪತನವಾಯಿತು.

ಮೊದಲ ಹಂತದ ಮತದಾನದಲ್ಲಿ ಏಪ್ರಿಲ್ 19ರಂದು ಪೂರ್ವ ವಿದರ್ಭದ 5 ಸ್ಥಾನಗಳಾದ ನಾಗ್ಪುರ, ರಾಮ್ಟೆಕ್, ಚಂದ್ರಾಪುರ್, ಭಂಡಾರಾ-ಗೊಂಡಿಯಾ ಮತ್ತು ಗಡ್ಚಿರೋಲಿ-ಚಿಮೂರ್​ನಲ್ಲಿ ಶೇ. 63.70ರಷ್ಟು ಮತದಾನವಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ ಶೇ. 59.63ರಷ್ಟು ಮತದಾನವಾಗಿದೆ. ಚುನಾವಣಾ ಆಯೋಗದ ಮತದಾರರ ಆ್ಯಪ್‌ನಲ್ಲಿ ಲಭ್ಯವಿರುವ ಅಧಿಕೃತ ಅಂಕಿಅಂಶಗಳ ಪ್ರಕಾರ, ವಾರ್ಧಾದಲ್ಲಿ ಶೇ.62.65, ಅಕೋಲಾದಲ್ಲಿ ಶೇ.58.09, ಅಮರಾವತಿಯಲ್ಲಿ ಶೇ.60.74, ಬುಲ್ಧಾನದಲ್ಲಿ ಶೇ.58.45, ಹಿಂಗೋಲಿಯಲ್ಲಿ 60.79, ನಾಂದೇಡ್‌ನಲ್ಲಿ ಶೇ.59.57, ಯವತ್ಮಾಲ್-ವಾಶಿಂನಲ್ಲಿ ಶೇ. 57ರಷ್ಟು ಮತದಾನವಾಗಿದೆ.

ಇದನ್ನೂ ಓದಿ: Lok Sabha Elections 2024: ಮಹಾರಾಷ್ಟ್ರದಲ್ಲಿ ಮತ ಚಲಾಯಿಸಿ ಗಮನ ಸೆಳೆದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ

ಭಾರತದಲ್ಲಿ 7 ಹಂತಗಳ ಲೋಕಸಭೆ ಚುನಾವಣೆ ಏಪ್ರಿಲ್ 19ರಂದು ಪ್ರಾರಂಭವಾಯಿತು. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸತತ 3ನೇ ಅವಧಿಗೆ ಅಧಿಕಾರಕ್ಕೆ ಪ್ರಯತ್ನಿಸುತ್ತಿದ್ದಾರೆ. 44 ದಿನಗಳ ಕಾಲ ನಡೆದ ಮತದಾನ ಪ್ರಕ್ರಿಯೆಯಲ್ಲಿ 10.5 ಲಕ್ಷ ಮತಗಟ್ಟೆಗಳಲ್ಲಿ 97 ಕೋಟಿಗೂ ಹೆಚ್ಚು ಮತದಾರರು ಅಂದರೆ, 49.7 ಕೋಟಿ ಪುರುಷರು ಮತ್ತು 47.1 ಕೋಟಿ ಮಹಿಳೆಯರು ಮತದಾನ ಮಾಡಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. 3ನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ನಂತರದ ಹಂತಗಳ ಮತದಾನ ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್