AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ಬಗ್ಗೆ ಕಾಂಗ್ರೆಸ್, ಎಸ್​ಪಿ ಸುಳ್ಳು ಸುದ್ದಿ ಹರಡುತ್ತಿದೆ; ಅಜಂಗಢದಲ್ಲಿ ಪ್ರಧಾನಿ ಮೋದಿ ಆರೋಪ

ಲೋಕಸಭೆ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗಿದೆ. ಇಂದು ಉತ್ತರ ಪ್ರದೇಶದ ಅಜಂಗಢದಲ್ಲಿ ಚುನಾವಣಾ ರ್ಯಾಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಸಿಎಎ ಬಗ್ಗೆ ವಿರೋಧ ಪಕ್ಷದವರು ಮಾಡುತ್ತಿರುವ ಆರೋಪಕ್ಕೆ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.

ಸಿಎಎ ಬಗ್ಗೆ ಕಾಂಗ್ರೆಸ್, ಎಸ್​ಪಿ ಸುಳ್ಳು ಸುದ್ದಿ ಹರಡುತ್ತಿದೆ; ಅಜಂಗಢದಲ್ಲಿ ಪ್ರಧಾನಿ ಮೋದಿ ಆರೋಪ
ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on:May 16, 2024 | 1:51 PM

Share

ನವದೆಹಲಿ: ಉತ್ತರ ಪ್ರದೇಶದ ಅಜಂಗಢದಲ್ಲಿ ಲೋಕಸಭೆ ಚುನಾವಣಾ (Lok Sabha Elections) ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi), ಎಸ್‌ಪಿ ಮತ್ತು ಕಾಂಗ್ರೆಸ್ ಸಿಎಎ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ. ದೇಶವನ್ನು ಗಲಭೆಯತ್ತ ತಳ್ಳಲು ಪ್ರಯತ್ನಿಸುತ್ತಿವೆ. ಆದರೆ, ಸಿಎಎ (CAA) ಮೋದಿಯವರ ಖಾತರಿಯ ಇತ್ತೀಚಿನ ಉದಾಹರಣೆಯಾಗಿದೆ. ನಿನ್ನೆ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡುವ ಕೆಲಸ ಪ್ರಾರಂಭವಾಗಿದೆ. ಇವರು ಧರ್ಮದ ಆಧಾರದ ಮೇಲೆ ಭಾರತದ ವಿಭಜನೆಗೆ ಬಲಿಯಾದ ಜನರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 16) ಉತ್ತರ ಪ್ರದೇಶದ ಅಜಂಗಢದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ‘ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದವರು ಸಿಎಎ ಬಗ್ಗೆ ಸುಳ್ಳುಗಳನ್ನು ಹರಡುತ್ತಿವೆ’ ಎಂದು ಅಜಂಗಢದಲ್ಲಿ ಪ್ರಧಾನಿ ಮೋದಿ ಅಜಂಗಢದಲ್ಲಿ ಆರೋಪಿಸಿದ್ದಾರೆ

ಇದನ್ನೂ ಓದಿ: ಹೇಡಿತನದ ಕೃತ್ಯ; ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೋ ಕೊಲೆ ಪ್ರಯತ್ನಕ್ಕೆ ಪಿಎಂ ನರೇಂದ್ರ ಮೋದಿ ಖಂಡನೆ

ಸಂಸತ್ತಿಗೆ ಗರಿಷ್ಠ ಸಂಖ್ಯೆಯ 80 ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶವು ಎಲ್ಲಾ 7 ಹಂತಗಳಲ್ಲಿ ಜೂನ್ 1ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಜೂನ್ 4ರಂದು ನಡೆಯಲಿದೆ.

ಅಜಂಗಢಕ್ಕೂ ಮುನ್ನ ಲಾಲ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾವು ನಿಮ್ಮ ಮುಖವಾಡವನ್ನು ಬಿಚ್ಚಿಟ್ಟಿದ್ದೇವೆ. ನೀವು ಕಪಟಿಗಳು, ಕೋಮುವಾದಿಗಳು ಎಂದು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ವಿರೋಧ ಪಕ್ಷದವರ ವಿರುದ್ಧ ಮೋದಿ ಕಿಡಿ ಕಾರಿದ್ದಾರೆ.

ಇದು ಮೋದಿಯವರ ಗ್ಯಾರಂಟಿ.. ನೀವು ಸಿಎಎ ಅಂತ್ಯಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್​ನವರು ಮಹಾತ್ಮ ಗಾಂಧಿಯವರ ಹೆಸರನ್ನು ಹಿಡಿದು ಅಧಿಕಾರದ ಮೆಟ್ಟಿಲುಗಳನ್ನು ಏರುತ್ತಾರೆ. ಆದರೆ ಅವರಿಗೆ ಮಹಾತ್ಮ ಗಾಂಧಿಯವರ ಮಾತುಗಳು ನೆನಪಿಲ್ಲ. ನಮ್ಮ ದೇಶದ ನೆರೆಹೊರೆಯ ದೇಶಗಳಲ್ಲಿ ವಾಸಿಸುವ ಅಲ್ಪಸಂಖ್ಯಾತರು ಭಾರತಕ್ಕೆ ಬರಬಹುದು ಎಂದು ಮಹಾತ್ಮ ಗಾಂಧಿ ಅವರೇ ಖಚಿತಪಡಿಸಿದ್ದರು. ಕಳೆದ 70 ವರ್ಷಗಳಲ್ಲಿ ಸಾವಿರಾರು ಕುಟುಂಬಗಳು ತಮ್ಮ ಸಂಸ್ಕೃತಿ ಮತ್ತು ಧರ್ಮವನ್ನು ಕಾಪಾಡಲು ಭಾರತದಲ್ಲಿ ಆಶ್ರಯ ಪಡೆದಿವೆ. ಆದರೆ ಕಾಂಗ್ರೆಸ್ ಅವರ ಮತಬ್ಯಾಂಕ್ ಅಲ್ಲದ ಕಾರಣ ಕಾಂಗ್ರೆಸ್ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ ಎಂದು ಮೋದಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಪ್ರಮುಖ ಉಲ್ಲೇಖಗಳು ಇಲ್ಲಿವೆ:

  1. ಎಸ್‌ಪಿ, ಕಾಂಗ್ರೆಸ್‌ ಎಂಬ ಎರಡು ಪಕ್ಷಗಳು ಸುಳ್ಳು, ‘ಪರಿವಾರ’, ಭ್ರಷ್ಟಾಚಾರವನ್ನು ಮಾರುತ್ತಾರೆ.
  2. ಕಾಂಗ್ರೆಸ್ ಮತ್ತು ಎಸ್‌ಪಿ ದೇಶದ ಬಜೆಟ್ ಅನ್ನು ವಿಭಜಿಸಿ ಅಲ್ಪಸಂಖ್ಯಾತರಿಗೆ ಶೇ.15ರಷ್ಟು ಮೀಸಲಿಡಲು ಬಯಸುತ್ತಿವೆ.
  3. ಯೋಗಿ ಆದಿತ್ಯನಾಥ್ ಅವರು ಮಾಫಿಯಾ, ಗಲಭೆಕೋರರು ಮತ್ತು ಸುಲಿಗೆಕೋರರ ವಿರುದ್ಧ ಕಾರ್ಯ ನಿರ್ವಹಿಸುವ ಮೂಲಕ ಉತ್ತರ ಪ್ರದೇಶದಲ್ಲಿ ನನ್ನ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದ್ದಾರೆ.
  4. ಚುನಾವಣೆಯಲ್ಲಿ ಶ್ರೀನಗರದ ಜನರು ತೋರಿದ ಉತ್ಸಾಹವು 370ನೇ ವಿಧಿಯನ್ನು ಮರಳಿ ತರಲು ಮತ್ತು ಮತ ಬ್ಯಾಂಕ್ ರಾಜಕಾರಣ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.
  5. ಎಸ್‌ಪಿ, ಕಾಂಗ್ರೆಸ್ ಸಿಎಎ ಬಗ್ಗೆ ಸುಳ್ಳುಗಳನ್ನು ಹರಡಿ ದೇಶವನ್ನು ಗಲಭೆಗಳತ್ತ ತಳ್ಳಲು ಪ್ರಯತ್ನಿಸಿದವು.
  6. ವಿಭಜನೆಯ ಸಂತ್ರಸ್ತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಸಿಎಎ ಅಡಿಯಲ್ಲಿ ಪ್ರಾರಂಭವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Thu, 16 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ