Lok Sabha Polls: ಲೋಕಸಭಾ ಚುನಾವಣೆ; ಕಾಂಗ್ರೆಸ್​ನಿಂದ ಹೊಸ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕರಿಗೆ ಆದ್ಯತೆ

ಲೋಕಸಭಾ ಚುನಾವಣೆಯ ಕಣ ರಂಗೇರಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ ನಡೆದಿದ್ದು, ಇನ್ನೂ ಕೆಲವು ಕ್ಷೇತ್ರಗಳಲ್ಲಿ ಚುನಾವಣೆ ಬಾಕಿಯಿದೆ. ಬಾಕಿ ಇರುವ ಕ್ಷೇತ್ರಗಳ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಹೊಸ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Lok Sabha Polls: ಲೋಕಸಭಾ ಚುನಾವಣೆ; ಕಾಂಗ್ರೆಸ್​ನಿಂದ ಹೊಸ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕರಿಗೆ ಆದ್ಯತೆ
ರಾಜ್ ಬಬ್ಬರ್Image Credit source: hindustan times
Follow us
|

Updated on:Apr 30, 2024 | 9:11 PM

ಲೋಕಸಭಾ ಚುನಾವಣೆಗೆ (Lok Sabha Elections) ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ (Congress Candidates List) ಹಿರಿಯ ಕಾಂಗ್ರೆಸ್ ನಾಯಕರಾದ ಆನಂದ್ ಶರ್ಮಾ ಮತ್ತು ರಾಜ್ ಬಬ್ಬರ್ ಹೆಸರಿದೆ. ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಆನಂದ್ ಶರ್ಮಾ ಸ್ಪರ್ಧಿಸಲಿದ್ದು, ರಾಜ್ ಬಬ್ಬರ್ ಹರಿಯಾಣದ ಗುರುಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಸತ್ಪಾಲ್ ರೈಜಾದಾ ಮತ್ತು ಮುಂಬೈ ಉತ್ತರದಿಂದ ಭೂಷಣ್ ಪಾಟೀಲ್ ಅವರು ಸ್ಪರ್ಧಿಸಲಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆನಂದ್ ಶರ್ಮಾ ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಸುದ್ದಿಯಲ್ಲಿದ್ದರು. ರಾಷ್ಟ್ರವ್ಯಾಪಿ ಜಾತಿ ಗಣತಿಗಾಗಿ ಪಕ್ಷದ ಬೇಡಿಕೆಯನ್ನು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಪರಂಪರೆಯನ್ನು ಅಗೌರವಗೊಳಿಸಲಾಗಿದೆ ಎಂದು ತಪ್ಪಾಗಿ ಅರ್ಥೈಸಬಹುದು ಎಂದು ಪತ್ರದಲ್ಲಿ ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕ ಲೋಕಸಭಾ ಚುನಾವಣೆ: ಮೊದಲ ಬಾರಿಗೆ ಮತದಾನ ಮಾಡುವವರಿಗೆ ಕೆಲವು ಸಲಹೆಗಳು

ಕಾಂಗ್ರೆಸ್ ಈ ಹಿಂದೆ ಹರಿಯಾಣದ 8 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು. ಆದರೆ ಗುರುಗ್ರಾಮ್‌ನಿಂದ ಅಭ್ಯರ್ಥಿಯನ್ನು ಇನ್ನೂ ಘೋಷಿಸಿರಲಿಲ್ಲ. ಈಗ ಕಾಂಗ್ರೆಸ್ ಪಕ್ಷವು ಅಲ್ಲಿನ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಇಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ರಾಜ್ ಬಬ್ಬರ್ ಹೆಸರನ್ನು ಪ್ರಕಟಿಸಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಇದನ್ನೂ ಓದಿ: Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ

ಗುರುಗ್ರಾಮ್ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಬಹಳ ಹಿಂದೆಯೇ ಘೋಷಿಸಿತ್ತು. ಇಲ್ಲಿ ಭಾರತೀಯ ಜನತಾ ಪಕ್ಷದಿಂದ ರಾವ್ ಇಂದ್ರಜಿತ್ ಸಿಂಗ್ ಸ್ಪರ್ಧಿಸಿದ್ದಾರೆ. ಜನನಾಯಕ ಜನತಾ ಪಕ್ಷ ಅಂದರೆ ಜೆಜೆಪಿ ಕೂಡ ಈ ಕ್ಷೇತ್ರದಿಂದ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಫಜಿಲ್ ಪುರಿಯಾ ಎಂದೇ ಖ್ಯಾತರಾಗಿರುವ ಖ್ಯಾತ ಗಾಯಕ ರಾಹುಲ್ ಯಾದವ್ ಅವರಿಗೆ ಜೆಜೆಪಿ ಇಲ್ಲಿಂದ ಟಿಕೆಟ್ ನೀಡಿದೆ. ಇದೀಗ ಬ್ಬರ್ ಅವರನ್ನು ಈಗ ಕಾಂಗ್ರೆಸ್​ನಿಂದ ಕಣಕ್ಕಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Tue, 30 April 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ