ಭ್ರಷ್ಟಾಚಾರದ ಅನಭಿಷಿಕ್ತ ದೊರೆ; ಬಿಜೆಪಿಯಿಂದ ಕೇಜ್ರಿವಾಲ್ ಫಿಲ್ಮಿ ಪೋಸ್ಟರ್ ರಿಲೀಸ್
ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಾಲು ಸಾಲಾಗಿ ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ಬಿಜೆಪಿ ನಾಯಕರು ಅರವಿಂದ್ ಕೇಜ್ರಿವಾಲ್ ಕುರಿತು ಫಿಲ್ಮಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ.
ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ (Supreme Court) ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಶನಿವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯಕ್ಕೆ ತಮ್ಮ ಪತ್ನಿ ಸುನೀತಾ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಸಂಸದ ಸಂಜಯ್ ಸಿಂಗ್ ಅವರೊಂದಿಗೆ ಭೇಟಿ ನೀಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಇದೇ ದಿನ ತಮ್ಮ ಪ್ರಚಾರ ಚಟುವಟಿಕೆಗಳನ್ನು ಪುನರಾರಂಭಿಸಲು ಆರಂಭಿಸಿದ್ದಾರೆ. ಆದರೆ, ಅವರು ಮತ್ತೆ ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಎನ್ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು “ಭ್ರಷ್ಟಾಚಾರ್ ಕಾ ಬೇತಾಜ್ ಬಾದಶಾ” (ಭ್ರಷ್ಟಾಚಾರದ ಅನಭಿಷಿಕ್ತ ರಾಜ) ಎಂದು ಪೋಸ್ಟರ್ ಹಾಕುವ ಮೂಲಕ ದೆಹಲಿ ಬಿಜೆಪಿಯ ಅಧಿಕೃತ ಎಕ್ಸ್ ಪೇಜ್ನಲ್ಲಿ ಈ ಬಗ್ಗೆ ಬರೆಯಲಾಗಿದೆ. ಅಲ್ಲದೆ, ಭ್ರಷ್ಟ ವ್ಯಕ್ತಿ ಜೈಲಿನಲ್ಲಿರಲಿ ಅಥವಾ ಹೊರಗಿರಲಿ ಆ ಭ್ರಷ್ಟ ವ್ಯಕ್ತಿ ಭ್ರಷ್ಟನಾಗಿಯೇ ಉಳಿಯುತ್ತಾನೆ! ಎಂದು ಬರೆದಿದ್ದಾರೆ.
ಜಾಮೀನಿನ ಮೇಲೆ ಅರವಿಂದ್ ಕೇಜ್ರಿವಾಲ್ ತಮ್ಮ ಶೈಲಿಯಿಂದಾಗಿ ಚುನಾವಣಾ ಪ್ರಚಾರದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಾರೆ ಎಂದು ಬಿಜೆಪಿಗೆ ಭಯ ಇರುವುದರಿಂದ ಭ್ರಷ್ಟಾಚಾರದ ವಿಷಯದಲ್ಲಿ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಎದುರಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.
ಇದಲ್ಲದೆ, ಆಮ್ ಆದ್ಮಿ ಪಕ್ಷದ ‘ಖಲಿಸ್ತಾನಿ ನಿಧಿ’ಯ ವಿಷಯವನ್ನು ಹೈಲೈಟ್ ಮಾಡಲು ಬಿಜೆಪಿ ಉದ್ದೇಶಿಸಿದೆ. ದೆಹಲಿಯ ಜೊತೆಗೆ, ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ರಾಷ್ಟ್ರೀಯ ಭದ್ರತೆಯ ಕಾಳಜಿಗಳ ಬಗ್ಗೆ ಪಂಜಾಬ್‌ಗೆ ರಾಜಕೀಯ ಸಂದೇಶವನ್ನು ಕಳುಹಿಸಲು ಬಿಜೆಪಿ ಪ್ರಯತ್ನಿಸುತ್ತದೆ.
ಇದನ್ನೂ ಓದಿ: ಕೇಜ್ರಿವಾಲ್ ಖುಷಿಪಡಬೇಕಾಗಿಲ್ಲ, ಮೋದಿಜೀ ಅವರ ಅವಧಿ ಪೂರ್ಣಗೊಳಿಸುತ್ತಾರೆ: ಅಮಿತ್ ಶಾ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು “ಕಳೆದ 75 ವರ್ಷಗಳಲ್ಲಿ ಬೇರೆ ಯಾವುದೇ ಪಕ್ಷಗಳು ಈ ಪ್ರಮಾಣದಲ್ಲಿ ಕಿರುಕುಳ ನೀಡಿಲ್ಲ” ಎಂದು ಶನಿವಾರ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಎಂಕೆ ಸ್ಟಾಲಿನ್ ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ