Amit Shah: ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು; ಅಮಿತ್ ಶಾ ಘೋಷಣೆ

|

Updated on: May 09, 2024 | 4:44 PM

ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಮುಸ್ಲಿಂ ಮೀಸಲಾತಿ ಕುರಿತು ಚುನಾವಣಾ ಭಾಷಣಗಳಲ್ಲಿ ಪ್ರಸ್ತಾಪವಾಗುತ್ತಲೇ ಇದೆ. ಈ ನಡುವೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಮೀಸಲಾತಿ ರದ್ದುಪಡಿಸಲಾಗುವುದು. ಶೇ.4ರಷ್ಟು ಮೀಸಲಾತಿಯನ್ನು ಎಸ್​ಸಿ, ಎಸ್​ಟಿ, ಒಬಿಸಿಗೆ ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.

Amit Shah: ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು; ಅಮಿತ್ ಶಾ ಘೋಷಣೆ
ಅಮಿತ್ ಶಾ
Follow us on

ನವದೆಹಲಿ: ತೆಲಂಗಾಣದ ಭೋಂಗಿರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸಲಾಗುವುದು ಮತ್ತು ಮುಸ್ಲಿಂ ಮೀಸಲಾತಿಯನ್ನು (Muslim Reservation) ರದ್ದುಪಡಿಸಲಾಗುವುದು ಎಂದು ಘೋಷಿಸಿದ್ದಾರೆ. ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಾಂಗ್ರೆಸ್ ಕೊಳ್ಳೆ ಹೊಡೆದಿದೆ. ಆ ಮೀಸಲಾತಿಯನ್ನು ಕಾಂಗ್ರೆಸ್ (Congress) ಮುಸ್ಲಿಮರಿಗೆ ನೀಡಿದೆ ಎಂದು ಆರೋಪಿಸಿದ್ದಾರೆ.

ಈ ವೇಳೆ ವಾಗ್ದಾಳಿ ನಡೆಸಿದ ಅಮಿತ್ ಶಾ, “ಕಾಂಗ್ರೆಸ್ ಸುಳ್ಳು ಹೇಳುವ ಮೂಲಕ ಚುನಾವಣೆ ಎದುರಿಸಲು ಬಯಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಮುಗಿಸುವುದಾಗಿ ಕಾಂಗ್ರೆಸ್ ಹೇಳಿದೆ. ಪ್ರಧಾನಿ ಮೋದಿಯವರು ಕಳೆದ 10 ವರ್ಷಗಳಿಂದ ಈ ದೇಶವನ್ನು ಒಮ್ಮತದಿಂದ ಮುನ್ನಡೆಸುತ್ತಿದ್ದಾರೆ. ಆದರೆ ಅವರು ಮೀಸಲಾತಿಯನ್ನು ಕೊನೆಗೊಳಿಸಲಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಮೂಲಕ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ದೋಚಿದೆ.” ಎಂದಿದ್ದಾರೆ.

ಇದನ್ನೂ ಓದಿ: Rahul Gandhi: ನಿಮಗೂ ಟೆಂಪೋದಲ್ಲಿ ಹಣ ಬರುತ್ತಿತ್ತಾ?; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

“2019ರಲ್ಲಿ ತೆಲಂಗಾಣದ ಸಾರ್ವಜನಿಕರು ನಮಗೆ ನಾಲ್ಕು ಸ್ಥಾನಗಳನ್ನು ನೀಡಿದ್ದಾರೆ. ಈ ಬಾರಿ ನಾವು ತೆಲಂಗಾಣದಲ್ಲಿ 10ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ. ತೆಲಂಗಾಣದಲ್ಲಿ ಈ ಎರಡಂಕಿಯ ಅಂಕವು ಪ್ರಧಾನಿ ಮೋದಿಯನ್ನು 400 ಸ್ಥಾನಗಳನ್ನು ದಾಟುವಂತೆ ಮಾಡುತ್ತದೆ ಎಂಬ ವಿಶ್ವಾಸವಗಿದೆ. 10ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತೇವೆ. ನಾವು ಮುಸ್ಲಿಂ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸುತ್ತೇವೆ.” ಎಂದು ಅಮಿತ್ ಶಾ ಹೇಳಿದ್ದಾರೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ ಕುರಿತು ವ್ಯಂಗ್ಯವಾಡಿದ ಅಮಿತ್ ಶಾ, “ನಮ್ಮ ಪ್ರಣಾಳಿಕೆಯಲ್ಲಿ ನಾವು ಮೋದಿಯವರ ಭರವಸೆಗಳನ್ನು ನೀಡಿದ್ದೇವೆ. ಮೋದಿ ಹೇಳಿದ್ದನ್ನು ಅವರು ಮಾಡಿಯೇ ಮಾಡುತ್ತಾರೆ. ಆದರೆ, ರಾಹುಲ್ ಗಾಂಧಿಯ ಭರವಸೆಗಳು ಸೂರ್ಯಾಸ್ತದವರೆಗೂ ಉಳಿಯುವುದಿಲ್ಲ. ರಾಹುಲ್ ಗಾಂಧಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಮಾಡಲಿಲ್ಲ, ರೈತರಿಗೆ 15 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು ಆದರೆ ಈಡೇರಿಸಿಲ್ಲ” ಎಂದು ಹೇಳಿದ್ದಾರೆ.

“ರಾಹುಲ್ ಗಾಂಧಿ ವಿದ್ಯಾರ್ಥಿಗಳಿಗೆ ಖಾತ್ರಿಯಿಲ್ಲದೆ 5 ಲಕ್ಷ ರೂ. ಸಾಲ ನೀಡುವುದಾಗಿ ಭರವಸೆ ನೀಡಿದರು, ಆದರೆ ಮಾಡಲಿಲ್ಲ. ಅವರು ಭರವಸೆ ನೀಡಿದಂತೆ ಅವರು ಹುಡುಗಿಯರಿಗೆ ಸ್ಕೂಟಿ ನೀಡಲಿಲ್ಲ ಮತ್ತು ಅವರು ಅಂತಾರಾಷ್ಟ್ರೀಯ ಶಾಲೆಗಳನ್ನು ತೆರೆಯಲಿಲ್ಲ. ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್ ತನ್ನ ಭರವಸೆಗಳನ್ನು ಈಡೇರಿಸುವುದಿಲ್ಲ. ಆದರೆ ಪ್ರಧಾನಿ ಮೋದಿ ಅವರು ಪ್ರತಿ ಭರವಸೆಯನ್ನು ಈಡೇರಿಸುತ್ತಾರೆ” ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯ ಅಜ್ಜಿ ಮರಳಿ ಬಂದರೂ ಸಿಎಎ ರದ್ದು ಮಾಡಲು ಸಾಧ್ಯವಾಗಲ್ಲ: ಅಮಿತ್ ಶಾ

“ಕಾಂಗ್ರೆಸ್ ಪಕ್ಷವು 70 ವರ್ಷಗಳ ಕಾಲ ರಾಮಮಂದಿರ ನಿರ್ಮಾಣವನ್ನು ಸ್ಥಗಿತಗೊಳಿಸಿತು. ಆದರೆ, ಕೇವಲ 5 ವರ್ಷಗಳಲ್ಲಿ, ಪಿಎಂ ಮೋದಿ ಕೇಸ್ ಗೆದ್ದರು, ‘ಭೂಮಿ ಪೂಜೆ’ ಮಾಡಿದರು ಮತ್ತು ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಮಾಡಿದರು. ಪಿಎಂ ಮೋದಿ ಅವರು 370 ನೇ ವಿಧಿಯನ್ನು ರದ್ದುಗೊಳಿಸಿದರು. ತ್ರಿವರ್ಣ ಧ್ವಜವು ಕಾಶ್ಮೀರದಲ್ಲಿ ಶಾಶ್ವತವಾಗಿ ಹಾರಾಡುತ್ತಲೇ ಇರುತ್ತದೆ’’ ಎಂದು ಶಾ ಹೇಳಿದ್ದಾರೆ.

ತೆಲಂಗಾಣದ ಎಲ್ಲಾ 17 ಸ್ಥಾನಗಳಿಗೆ ಮೇ 13ರಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ 4ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ