Mallikarjun Kharge: ಶಿವ ವರ್ಸಸ್ ರಾಮ; ಚುನಾವಣೆ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ 

ಎಲ್ಲ ಪಕ್ಷಗಳಿಂದಲೂ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಮಂಗಳವಾರ ಛತ್ತೀಸ್‌ಗಢದಲ್ಲಿ ಶಿವ ಮತ್ತು ರಾಮನ ಕುರಿತು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಷ್ಟಕ್ಕೂ ಅವರು ಹೇಳಿದ್ದೇನು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

Mallikarjun Kharge: ಶಿವ ವರ್ಸಸ್ ರಾಮ; ಚುನಾವಣೆ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ 
ಮಲ್ಲಿಕಾರ್ಜುನ ಖರ್ಗೆ
Follow us
|

Updated on:May 01, 2024 | 7:21 PM

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Elections) ಹಿನ್ನೆಲೆಯಲ್ಲಿ ಛತ್ತೀಸ್​ಗಢದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಮ ಮತ್ತು ಶಿವನ ಕುರಿತಾದ ತಮ್ಮ ಹೇಳಿಕೆಯಿಂದ ವಿವಾದವನ್ನು ಹುಟ್ಟುಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಿವಕುಮಾರ್ ದಹರಿಯಾ ಅವರನ್ನು ಬೆಂಬಲಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಅವರ ಹೆಸರನ್ನೇ ಮರೆತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಿವಕುಮಾರ್ ತಮ್ಮ ಹೆಸರನ್ನು ಎರಡೆರಡು ಬಾರಿ ನೆನಪಿಸಿದರು. ಈ ವೇಳೆ ಶಿವಕುಮಾರ್ ದಹರಿಯಾ ಅವರನ್ನು ಶಿವನಿಗೆ ಹೋಲಿಸಿದ ಖರ್ಗೆ ಶಿವನು ರಾಮನ ಸಮಾನವಾಗಿ ಸ್ಪರ್ಧಿಸಬಹುದು, ಅವರಿಗೆ ಕಠಿಣ ಸ್ಪರ್ಧೆಯೊಡ್ಡಬಹುದು ಎಂದಿದ್ದಾರೆ.

ಶಿವಕುಮಾರ್ ಅವರ ಹೆಸರಿನಲ್ಲೇ ಶಿವ ಇದ್ದಾನೆ. ನನ್ನ ಹೆಸರು ಮಲ್ಲಿಕಾರ್ಜುನ ಎಂದರೂ ಶಿವ ಎಂದೇ ಅರ್ಥ. ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಲ್ಲಿಕಾರ್ಜುನ ಎಂಬ ಜ್ಯೋತಿರ್ಲಿಂಗವೂ ಇದೆ. ಶಿವನು ರಾಮ (ಬಿಜೆಪಿ)ನ ಸಮಾನವಾಗಿ ಸ್ಪರ್ಧೆ ಮಾಡಬಹುದು ಎನ್ನುವ ಮೂಲಕ ರಾಮ ಹಾಗೂ ಶಿವನ ನಡುವೆ ಸಂಬಂಧ ಸೃಷ್ಟಿಸಿ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೆ ಕಾರಣರಾಗಿದ್ದಾರೆ.

ಇದನ್ನೂ ಓದಿ: Lok Sabha Polls: ಲೋಕಸಭಾ ಚುನಾವಣೆ; ಕಾಂಗ್ರೆಸ್​ನಿಂದ ಹೊಸ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕರಿಗೆ ಆದ್ಯತೆ

ಈ ಹೇಳಿಕೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಛತ್ತೀಸ್‌ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಮಾತನಾಡಿ, ರಾಮನನ್ನು ಕಾಂಗ್ರೆಸ್ ತನ್ನ ಶತ್ರು ಎಂದು ಪರಿಗಣಿಸುತ್ತದೆ ಎಂದು ಖರ್ಗೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ನವರು ತಾವು ಶಿವನೆಂದು ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಶಿವನು ಶ್ರೀರಾಮನನ್ನು ತನ್ನ ಆರಾಧ್ಯ ದೈವವೆಂದು ಪರಿಗಣಿಸುತ್ತಾನೆ ಎಂಬುದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು ಶ್ರೀರಾಮನ ಅಸ್ತಿತ್ವವನ್ನು ಆಗಾಗ ನಿರಾಕರಿಸುತ್ತಲೇ ಇದೆ ಎಂದು ಶರ್ಮಾ ಆರೋಪಿಸಿದ್ದಾರೆ. ರಾಮಮಂದಿರದ ಆಹ್ವಾನವನ್ನು ತಿರಸ್ಕರಿಸಿದ ಅದೇ ಮಲ್ಲಿಕಾರ್ಜುನ ಖರ್ಗೆಯವರ ಮಗ ಸನಾತನ ಸಂಸ್ಥೆಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದನ್ನು ಬೆಂಬಲಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ್​ ಖರ್ಗೆ ಅಳಿಯ ಕೂಡ ಕೋಟ್ಯಾಧೀಶ; ಆಸ್ತಿವಿವರ ಇಲ್ಲಿದೆ

ಛತ್ತೀಸ್‌ಗಢದ 7 ಲೋಕಸಭಾ ಕ್ಷೇತ್ರಗಳಾದ ಸರ್ಗುಜಾ, ರಾಯ್‌ಗಢ, ಜಾಂಜ್‌ಗೀರ್-ಚಂಪಾ, ಕೊರ್ಬಾ, ಬಿಲಾಸ್‌ಪುರ್, ದುರ್ಗ್ ಮತ್ತು ರಾಯ್‌ಪುರ ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ 3ನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ.

7 ಹಂತಗಳ ಲೋಕಸಭೆ ಚುನಾವಣೆ ಏಪ್ರಿಲ್ 19ರಂದು ಪ್ರಾರಂಭವಾಯಿತು. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. 44 ದಿನಗಳ ಕಾಲ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ 10.5 ಲಕ್ಷ ಮತಗಟ್ಟೆಗಳಲ್ಲಿ 97 ಕೋಟಿಗೂ ಹೆಚ್ಚು ಮತದಾರರು ಅದರಲ್ಲಿ 49.7 ಕೋಟಿ ಪುರುಷರು ಮತ್ತು 47.1 ಕೋಟಿ ಮಹಿಳೆಯರು ಮತದಾನ ಮಾಡಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ನಂತರದ ಹಂತಗಳು ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Wed, 1 May 24

ತಾಜಾ ಸುದ್ದಿ