ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್

April 26th election day holidays: ಏಪ್ರಿಲ್ 26, ಶುಕ್ರವಾರದಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಿಗೂ ರಜೆ ಇದೆ. ಬಸ್, ರೈಲು ಇತ್ಯಾದಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಖಾಸಗಿ ಕಂಪನಿಗಳಿಗೆ ಕಡ್ಡಾಯ ರಜೆ ಇಲ್ಲ. ಆದರೆ, ಮತದಾನಕ್ಕೆ ಅರ್ಹ ಇರುವ ಉದ್ಯೋಗಿಗೆ ಮತದಾನಕ್ಕೆ ಅನುಕೂಲ ಮಾಡಿಕೊಡಬೇಕಾಗುತ್ತದೆ.

ಏಪ್ರಿಲ್ 26ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್
ಮತದಾನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2024 | 12:30 PM

ಬೆಂಗಳೂರು, ಏಪ್ರಿಲ್ 24: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ (Lok Sabha elections Phase 2 polling) ಏಪ್ರಿಲ್ 26ರಂದು ನಡೆಯಲಿದೆ. ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಲ್ಲಿ ಶುಕ್ರವಾರ ಮತದಾರರು ಮತ ಚಲಾಯಿಸಲಿದ್ದಾರೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಒಳಗೊಂಡಿವೆ. ಮತದಾನದ ದಿನದಂದು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂಬ ಅಲಿಖಿತ ನಿಯಮ ಇದೆ. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ರಜೆ ಇರುತ್ತದೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಯಾವುದಕ್ಕೆ ರಜೆ?

  • ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.
  • ಬ್ಯಾಂಕುಗಳಿಗೆ ರಜೆ
  • ಶಾಲೆ, ಕಾಲೇಜುಗಳಿಗೆ ರಜೆ
  • ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಇದನ್ನೂ ಓದಿ: ಬಾಬರ್​ನ ಮಕ್ಳು ಕೂಡ ಜೈ ಶ್ರೀರಾಮ್ ಹೇಳ್ಬೇಕು: ಬಿಜೆಪಿ ನಾಯಕ ಸಿಪಿ ಜೋಶಿ ವಿವಾದಾತ್ಮಕ ಹೇಳಿಕೆ

ಏಪ್ರಿಲ್ 26ರಂದು ಯಾವುವೆಲ್ಲಾ ಇರುತ್ತೆ?

  • ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ
  • ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ
  • ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ

ಇಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ವೋಟಿಂಗ್ ಮಾಡಲು ಅನುಕೂಲ ಮಾಡಿಕೊಡಬೇಕಾಗುತ್ತದೆ. ಉದ್ಯೋಗಿಗಳು ವೋಟ್ ಹಾಕಿ ಕಚೇರಿ ಹೋಗಬಹುದು. ಮೊದಲ ಪಾಳಿ ಇದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ವೋಟ್ ಹಾಕಬಹುದು.

ಮದ್ಯ ಮಾರಾಟ ನಿಷೇಧ

ಇವತ್ತು ಏಪ್ರಿಲ್ 24, ಸಂಜೆ 5 ಗಂಟೆಯಿಂದ ಏಪ್ರಿಲ್ 26 ಮಧ್ಯರಾತ್ರಿ 12ರವರೆಗೆ ಮದ್ಯದ ತಯಾರಿಕೆ, ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ವೈಯಕ್ತಿಕ ಆಸ್ತಿಯಲ್ಲಿ ಸರ್ಕಾರಕ್ಕೆ ಶೇ. 55 ಪಾಲು: ಅಮೆರಿಕದ ಟ್ಯಾಕ್ಸ್ ವ್ಯವಸ್ಥೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ

ಏಪ್ರಿಲ್ 26ರಂದು ರಾಜ್ಯದ ಯಾವೆಲ್ಲಾ ಕ್ಷೇತ್ರಗಳಿಗೆ ಚುನಾವಣೆ?

  1. ಬೆಂಗಳೂರು ಉತ್ತರ
  2. ಬೆಂಗಳೂರು ಕೇಂದ್ರ
  3. ಬೆಂಗಳೂರು ದಕ್ಷಿಣ
  4. ಬೆಂಗಳೂರು ಗ್ರಾಮಾಂತರ
  5. ಕೋಲಾರ
  6. ಚಿಕ್ಕಬಳ್ಳಾಪುರ
  7. ತುಮಕೂರು
  8. ಮಂಡ್ಯ
  9. ಮೈಸೂರು
  10. ಹಾಸನ
  11. ತುಮಕೂರು
  12. ಚಿತ್ರದುರ್ಗ
  13. ಉಡುಪಿ ಚಿಕ್ಕಮಗಳೂರು
  14. ದಕ್ಷಿಣ ಕನ್ನಡ

ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ಕ್ಕೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ