Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 7ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್

May 7th election day holidays: 2024ರ ಮೇ 7, ಮಂಗಳವಾರದಂದು ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಇದೆ. ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮತದಾನವಾಗಿತ್ತು. ಮೇ 7ರಂದು ಉಳಿದ 14 ಕ್ಷೇತ್ರಗಳಿಗೆ ಮತದಾನವಾಗಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೂ ಮತದಾನಕ್ಕೆ ಅವಕಾಶ ಇರುತ್ತದೆ. ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಶಾಲಾ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಿಗೂ ರಜೆ ಇದೆ. ಬಸ್, ರೈಲು ಇತ್ಯಾದಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಖಾಸಗಿ ಕಂಪನಿಗಳಿಗೆ ಕಡ್ಡಾಯ ರಜೆ ಇಲ್ಲ. ಆದರೆ, ಮತದಾನಕ್ಕೆ ಅರ್ಹ ಇರುವ ಉದ್ಯೋಗಿಗೆ ಮತದಾನಕ್ಕೆ ಅನುಕೂಲ ಮಾಡಿಕೊಡಬೇಕಾಗುತ್ತದೆ. ಹಲವು ಕಂಪನಿಗಳು ಅಂದು ರಜೆ ಘೋಷಿಸಿರುವುದು ಇದೆ.

ಮೇ 7ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್
ಮತದಾನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 06, 2024 | 11:46 AM

ಬೆಂಗಳೂರು, ಮೇ 6: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ (Lok Sabha elections Phase 3 polling) ಮೇ 7ರಂದು ನಡೆಯಲಿದೆ. ಕರ್ನಾಟಕವೂ ಸೇರಿದಂತೆ 12 ರಾಜ್ಯಗಳಲ್ಲಿ ಶುಕ್ರವಾರ ಮತದಾರರು ಮತ ಚಲಾಯಿಸಲಿದ್ದಾರೆ. 94 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ. ಈ 94 ಕ್ಷೇತ್ರಗಳಲ್ಲಿ ಕರ್ನಾಟಕದ 14 ಕ್ಷೇತ್ರಗಳಿವೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಚುನಾವಣೆ ಆಗಿತ್ತು. ಈಗ ಇನ್ನುಳಿದ 14 ಕ್ಷೇತ್ರಗಳಿಗೆ ಚುನಾವಣೆ ಇದೆ. ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಕಲಬುರ್ಗಿ, ಹಾವೇರಿ, ಶಿವಮೊಗ್ಗ ಮೊದಲಾದ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನವಾಗಲಿದೆ.

ಮೇ 7ರಂದು ಕರ್ನಾಟಕದಲ್ಲಿ ಯಾವುದಕ್ಕೆ ರಜೆ?

ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮೇ 7, ಮಂಗಳವಾರ ರಜೆ ಇರುತ್ತದೆ.

  • ಬ್ಯಾಂಕುಗಳಿಗೆ ರಜೆ
  • ಶಾಲೆ, ಕಾಲೇಜುಗಳಿಗೆ ರಜೆ
  • ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಮೇ 7ರಂದು ಯಾವುವೆಲ್ಲಾ ಇರುತ್ತೆ?

  • ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ
  • ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಿರುದ್ಧ ಷಡ್ಯಂತ್ರ, ಸದ್ಯದಲ್ಲೇ ಕಾಂಗ್ರೆಸ್​ ಇಬ್ಭಾಗ; ಪ್ರಮೋದ್ ಕೃಷ್ಣಂ

ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ

ಏಪ್ರಿಲ್ 26ರಂದು ನಡೆದ ಚುನಾವಣೆಯ ದಿನದಂದು ಬೆಂಗಳೂರಿನ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವೋಟ್ ಹಾಕಲು ಅನುಕೂಲವಾಗುವಂತೆ ರಜೆ ನೀಡಿದ್ದವು. ಬೆಳಗಾವಿ, ಧಾರವಾಡ ಮೊದಲಾದ ಕಡೆ ಖಾಸಗಿ ಕಂಪನಿಗಳು ರಜೆ ನೀಡಬಹುದು.

ಮದ್ಯ ಮಾರಾಟ ನಿಷೇಧ

ನಿನ್ನೆ ಮೇ 5 ಸಂಜೆ 5 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12ರವರೆಗೂ ಮದ್ಯ ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಕೆಲ ಸೂಕ್ಷ್ಮ ಮತಗಟ್ಟೆಗಳ ಬಳಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಏಪ್ರಿಲ್ 26ರಂದು ರಾಜ್ಯದ ಯಾವೆಲ್ಲಾ ಕ್ಷೇತ್ರಗಳಿಗೆ ಚುನಾವಣೆ?

  1. ಚಿಕ್ಕೋಡಿ
  2. ಬೆಳಗಾವಿ
  3. ಬಾಗಲಕೋಟೆ
  4. ವಿಜಯಪುರ
  5. ಕಲಬುರ್ಗಿ
  6. ರಾಯಚೂರು
  7. ಬೀದರ್
  8. ಕೊಪ್ಪಳ
  9. ಬಳ್ಳಾರಿ
  10. ಹಾವೇರಿ
  11. ಧಾರವಾಡ
  12. ಉತ್ತರ ಕನ್ನಡ
  13. ದಾವಣಗೆರೆ
  14. ಶಿವಮೊಗ್ಗ

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ

ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮೇ 7ರ ಬಳಿಕ ಇನ್ನೂ ನಾಲ್ಕು ಹಂತಗಳ ಚುನಾವಣೆ ಬಾಕಿ ಇರುತ್ತದೆ. ಜೂನ್ 4ಕ್ಕೆ ಮತ ಎಣಿಕೆ ಇದೆ.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ