Lok Sabha Election 2024: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ಲೋಕಸಭೆ ಚುನಾವಣೆಯ ಮತದಾನ ಈಗಾಗಲೇ 5 ಹಂತಗಳಲ್ಲಿ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13 ಮತ್ತು ಮೇ 20ರಂದು ಪೂರ್ಣಗೊಂಡಿದೆ. ಇಂದು (ಮೇ 25) 6ನೇ ಹಂತದ ಮತದಾನ ನಡೆಯಲಿದೆ. ಈ ಹಂತವು 58 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ.

Lok Sabha Election 2024: ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ
6ನೇ ಹಂತದ ಲೋಕಸಭೆ ಚುನಾವಣೆ
Follow us
ಸುಷ್ಮಾ ಚಕ್ರೆ
|

Updated on: May 25, 2024 | 6:44 AM

ನವದೆಹಲಿ: ಇಂದು 6ನೇ ಹಂತದ ಲೋಕಸಭಾ ಚುನಾವಣೆ (Lok Sabha Election) ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ (ECI) ತಿಳಿಸಿದೆ. 7 ಸಂಸದೀಯ ಸ್ಥಾನಗಳನ್ನು ಹೊಂದಿರುವ ರಾಷ್ಟ್ರ ರಾಜಧಾನಿ ದೆಹಲಿ (Delhi Lok Sabha Polls) ಕೂಡ ಮತದಾನಕ್ಕೆ ಸಜ್ಜಾಗಿದೆ. ಜೂನ್ 4ರಂದು ಎಲ್ಲ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ.

ಇಂದು ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ತೀವ್ರ ಕುತೂಹಲ ಮೂಡಿಸಿರುವ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 4 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಉಳಿದ 3 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ವಿರುದ್ಧ ಎಎಪಿ ಮತ್ತು ಕಾಂಗ್ರೆಸ್ ಜಂಟಿಯಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಮೊದಲ ಲೋಕಸಭೆ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.

899 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 1.52 ಕೋಟಿ ಮತದಾರರು ಇಂದು ಮತ ಚಲಾಯಿಸಲಿದ್ದಾರೆ. 82 ಲಕ್ಷ ಪುರುಷ ಮತ್ತು 69 ಲಕ್ಷ ಮಹಿಳಾ ಮತದಾರರು ಹಾಗೂ 1,228 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 1.52 ಕೋಟಿ ಮತದಾರರು 13,000ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ