Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

2024ರ ಲೋಕಸಭೆ ಚುನಾವಣೆಗೆ 3ನೇ ಹಂತದ ಮತದಾನ ಆರಂಭವಾಗಿದೆ. 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಈ ನಿರ್ಣಾಯಕ ಹಂತದಲ್ಲಿ 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಗೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ. 40ರಷ್ಟು ಮತದಾನವಾಗಿದೆ.

Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿImage Credit source: ANI
Follow us
|

Updated on: May 07, 2024 | 3:28 PM

ನವದೆಹಲಿ: ಲೋಕಸಭೆಯ (Lok Sabha Elections 2024) 57 ಸ್ಥಾನಗಳಿಗೆ ಮತದಾನ ನಡೆಯಲಿರುವ 7ನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನವು ಜೂನ್ 1ರಂದು 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿದೆ. ಚುನಾವಣಾ ಆಯೋಗವು (Election Commission) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಅಧಿಸೂಚನೆ ಹೊರಡಿಸಿದೆ.

ಅಧಿಸೂಚನೆಯ ಪ್ರಕಾರ, ಮೇ 14ರಂದು ನಾಮಪತ್ರ ಸಲ್ಲಿಸಲು ಗಡುವು ಎಂದು ನಿಗದಿಪಡಿಸಲಾಗಿದ್ದು, ಮೇ 15ರಂದು ನಾಮಪತ್ರಗಳ ಪರಿಶೀಲನೆಗೆ ದಿನವನ್ನು ನಿಗದಿಪಡಿಸಲಾಗಿದೆ. ಚುನಾವಣೆಯ ಅಭ್ಯರ್ಥಿಗಳು ಮೇ 17ರವರೆಗೆ ಚುನಾವಣಾ ಕಣದಿಂದ ಹಿಂದೆ ಸರಿಯಲು ಅವಕಾಶವಿದೆ. ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ವಾರಾಣಸಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ.

ಪ್ರಸ್ತುತ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ನಿರ್ಣಾಯಕ ಕ್ಷೇತ್ರವಾದ ವಾರಾಣಸಿಯಲ್ಲೂ ಅಂತಿಮ ಹಂತದ ಮತದಾನ ನಡೆಯಲಿದೆ. ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಮೇ 14ರ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿಯವರು ಮೇ 13ರಂದು ತಮ್ಮ ಸಂಸದೀಯ ಕ್ಷೇತ್ರಕ್ಕೆ ಭೇಟಿ ನೀಡಿ ಬೃಹತ್ ರೋಡ್ ಶೋ ನಡೆಸಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ವಾರಾಣಸಿಯಿಂದ ಸ್ಪರ್ಧಿಸಿ, ನರೇಂದ್ರ ಮೋದಿಯವರು ಪ್ರಧಾನಿಯಾದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ನಟ ಶೇಖರ್ ಸುಮನ್, ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆ

ಇಂದು ನಡೆಯುತ್ತಿರುವ ಲೋಕಸಭಾ ಚುನಾವಣೆಯ 3ನೇ ಹಂತದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆಗೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ. 40ರಷ್ಟು ಮತದಾನವಾಗಿದೆ. ಗುಜರಾತ್‌ನಲ್ಲಿ 26, ಕರ್ನಾಟಕದಲ್ಲಿ 14, ಮಹಾರಾಷ್ಟ್ರದಲ್ಲಿ 11, ಉತ್ತರ ಪ್ರದೇಶದಲ್ಲಿ 10, ಮಧ್ಯಪ್ರದೇಶದಲ್ಲಿ 8, ಛತ್ತೀಸ್‌ಗಢದಲ್ಲಿ 7, ಬಿಹಾರದಲ್ಲಿ 5, ಅಸ್ಸಾಂನಲ್ಲಿ 4, ಪಶ್ಚಿಮ ಬಂಗಾಳದಲ್ಲಿ 4, ಗೋವಾದಲ್ಲಿ 2 ಸ್ಥಾನಗಳಲ್ಲಿ 3ನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಅರವಿಂದ್ ಕೇಜ್ರಿವಾಲ್ ವಿರುದ್ಧ ಮೊದಲ ಬಾರಿಗೆ ವಾರಾಣಸಿಯಿಂದ ಸ್ಪರ್ಧಿಸಿದರು. ಈ ಸ್ಪರ್ಧೆಯಲ್ಲಿ 3,71,784 ಮತಗಳ ಅಂತರದಿಂದ ಗೆದ್ದರು. 2019ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಸ್‌ಪಿಯ ಶಾಲಿನಿ ಯಾದವ್ ಮತ್ತು ಕಾಂಗ್ರೆಸ್‌ನ ಅಜಯ್ ರೈ ವಿರುದ್ಧ 4,79,505 ಮತಗಳ ಅಂತರದಿಂದ ಗೆದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಹಲವು ವಿಶೇಷಗಳಿಗೆ ಸಾಕ್ಷಿಯಾದ ರಾಜ್ಯದ 2ನೇ ಹಂತದ ಮತದಾನ

ಜೂನ್ 1ರಂದು ಮತದಾನ ನಡೆಯಲಿರುವ ಕ್ಷೇತ್ರಗಳು:

ಉತ್ತರ ಪ್ರದೇಶ:

ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿ ನಗರ, ಡಿಯೋರಿಯಾ, ಬನ್ಸ್‌ಗಾಂವ್, ಘೋಸಿ, ಸೇಲಂಪುರ್, ಬಲ್ಲಿಯಾ, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ರಾಬರ್ಟ್ಸ್‌ಗಂಜ್.

ಪಂಜಾಬ್:

ಗುರುದಾಸ್ಪುರ್, ಅಮೃತಸರ, ಖದೂರ್ ಸಾಹಿಬ್, ಜಲಂಧರ್, ಹೋಶಿಯಾರ್ಪುರ್, ಆನಂದ್ಪುರ್ ಸಾಹಿಬ್, ಲೂಧಿಯಾನ, ಫತೇಘರ್ ಸಾಹಿಬ್, ಫರೀದ್ಕೋಟ್, ಫಿರೋಜ್ಪುರ್, ಬಟಿಂಡಾ, ಸಂಗ್ರೂರ್, ಪಟಿಯಾಲ.

ಪಶ್ಚಿಮ ಬಂಗಾಳ:

ದಮ್ ದಮ್, ಬರಾಸತ್, ಬಸಿರ್ಹತ್, ಜಯನಗರ, ಮಥುರಾಪುರ, ಡೈಮಂಡ್ ಹಾರ್ಬರ್, ಜಾದವ್‌ಪುರ, ದಕ್ಷಿಣ ಕೋಲ್ಕತ್ತಾ, ಉತ್ತರ ಕೋಲ್ಕತ್ತಾ.

ಬಿಹಾರ:

ನಳಂದಾ, ಪಾಟ್ನಾ ಸಾಹಿಬ್, ಪಾಟಲಿಪುತ್ರ, ಅರ್ರಾ, ಬಕ್ಸರ್, ಸಸಾರಂ, ಕರಕತ್, ಜಹಾನಾಬಾದ್.

ಒಡಿಶಾ:

ಮಯೂರ್‌ಭಂಜ್, ಬಾಲಸೋರ್, ಭದ್ರಕ್, ಜಾಜ್‌ಪುರ್, ಕೇಂದ್ರಪಾರಾ, ಜಗತ್‌ಸಿಂಗ್‌ಪುರ.

ಹಿಮಾಚಲ ಪ್ರದೇಶ:

ಕಂಗ್ರಾ, ಮಂಡಿ, ಹಮೀರ್‌ಪುರ, ಶಿಮ್ಲಾ.

ಜಾರ್ಖಂಡ್:

ರಾಜಮಹಲ್, ದುಮ್ಕಾ, ಗೊಡ್ಡಾ.

ಚಂಡೀಗಢ:

ಚಂಡೀಗಢ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ