Lok Sabha Elections: ಅಮೇಥಿ, ರಾಯ್‌ಬರೇಲಿಯಲ್ಲಿ ಕಾಂಗ್ರೆಸ್​ನಿಂದ ಕಣಕ್ಕಿಳಿಯಲು ರಾಹುಲ್ ಗಾಂಧಿ ನಕಾರ

ಮೇ 20ರಂದು ಅಮೇಥಿ ಮತ್ತು ರಾಯ್‌ಬರೇಲಿ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯ 5ನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಮೇ 3ರಂದು ಪುಣೆಯಲ್ಲಿ ರ್ಯಾಲಿ ನಡೆಸಲು ರಾಹುಲ್ ಗಾಂಧಿ ಈಗ ಪ್ಲಾನ್ ಮಾಡಿದ್ದಾರೆ. ಈ ನಡುವೆ ಅಮೇಥಿ ಮತ್ತು ರಾಯ್​ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಭುಗಿಲೆದ್ದಿದೆ.

Lok Sabha Elections: ಅಮೇಥಿ, ರಾಯ್‌ಬರೇಲಿಯಲ್ಲಿ ಕಾಂಗ್ರೆಸ್​ನಿಂದ ಕಣಕ್ಕಿಳಿಯಲು ರಾಹುಲ್ ಗಾಂಧಿ ನಕಾರ
ರಾಹುಲ್ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on: May 01, 2024 | 4:48 PM

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಉತ್ತರ ಪ್ರದೇಶದ ಅಮೇಥಿ ಅಥವಾ ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ (Lok Sabha Polls 2024) ಸ್ಪರ್ಧಿಸಲು ಇಚ್ಛಿಸುವುದಿಲ್ಲ. ಹಾಗೇ, ಈ ಕ್ಷೇತ್ರಗಳಲ್ಲಿ ತಮ್ಮ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಅವರು ಬಯಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ. ಮೇ 3ರಂದು ಪುಣೆಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಅವರು ಯೋಜನೆಯನ್ನು ನಿಗದಿಪಡಿಸಿದ್ದಾರೆ. ಇವೆರಡೂ ಗಾಂಧಿ ಕುಟುಂಬದೊಂದಿಗೆ ನಿಕಟ ಸಂಬಂಧ ಹೊಂದಿರುವ ಕ್ಷೇತ್ರಗಳಾಗಿವೆ.

“ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇನ್ನೂ ರಾಹುಲ್ ಗಾಂಧಿಯನ್ನು ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ಈಗಾಗಲೇ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಯ್ ಬರೇಲಿಯಿಂದ ಸ್ಪರ್ಧಿಸಲು ನಿನ್ನೆ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಬಹುತೇಕ ಒಪ್ಪಿಕೊಂಡಿದ್ದರು. ಆದರೆ ನಂತರ ಅದನ್ನು ವಿರೋಧಿಸಿದರು ಎನ್ನಲಾಗಿದೆ. ತಮ್ಮ ಕುಟುಂಬದ ಯಾವುದೇ ಸದಸ್ಯರು ಈ ಕ್ಷೇತ್ರಗಳಿಂದ ಸ್ಪರ್ಧಿಸುವುದು ರಾಹುಲ್‌ಗೆ ಇಷ್ಟವಿಲ್ಲ ಎಂದು ಎನ್ನಲಾಗಿದೆ.

ಇದನ್ನೂ ಓದಿ: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ವೋಟಿಂಗ್ ಅಂತ್ಯ: ಕ್ಷೇತ್ರವಾರು ಮತದಾನದ ವಿವರ ಇಲ್ಲಿದೆ

ಕಾಂಗ್ರೆಸ್ ಪಕ್ಷದ ವೇಳಾಪಟ್ಟಿ ಹೊರಬಿದ್ದಿದ್ದು, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಈ ಸ್ಪರ್ಧೆಯಿಂದ ಹೊರಗುಳಿಯುತ್ತಾರೆ ಎಂಬುದು ಈಗ ಸ್ಪಷ್ಟವಾಗುತ್ತಿದೆ. ರಾಹುಲ್ ಗಾಂಧಿ ವಯನಾಡ್‌ನಲ್ಲಿ ಉಳಿಯಲು ಆದ್ಯತೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜವಂಶದ ರಾಜಕೀಯ ಅಥವಾ ಕುಟುಂಬ ರಾಜಕಾರಣದ ವಿರುದ್ಧ ನಿರಂತರ ದಾಳಿಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಸಿದಾಗ ಅವರು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೇ ಅಭ್ಯರ್ಥಿಗಳನ್ನು ನಿರ್ಧರಿಸಲು ಅಧಿಕಾರ ನೀಡಿದರು. ಅಧ್ಯಕ್ಷರ ಸೂಚನೆಯಂತೆ ನಡೆದುಕೊಳ್ಳುವುದಾಗಿ ರಾಹುಲ್ ಗಾಂಧಿ ಸುದ್ದಿಗಾರರಿಗೆ ಹೇಳಿದ್ದರು. ಆದರೆ, ಅವರು ಈ ಬಗ್ಗೆ ಪಟ್ಟು ಹಿಡಿದಿದ್ದಾರೆ. ಕೊನೆಯ ಕ್ಷಣದಲ್ಲಿ ಅವರು ತಮ್ಮ ಮನಸ್ಸನ್ನು ಬದಲಾಯಿಸುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎನ್ನಲಾಗಿದೆ.

ಸದ್ಯಕ್ಕೆ ಈ 2 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಯ್ಕೆಗಳು ತೀರಾ ಕಡಿಮೆ. ಅಲ್ಲಿಂದ ಪ್ರಿಯಾಂಕಾ ಗಾಂಧಿ ಅಥವಾ ರಾಹುಲ್ ಗಾಂಧಿ ಕಣಕ್ಕಿಳಿದರೆ ರಾಜ್ಯ ತಂಡವನ್ನು ಪುನರ್ ನಿರ್ಮಾಣ ಮಾಡುವ ಪಕ್ಷದ ಪ್ರಯತ್ನಕ್ಕೆ ಪುಷ್ಟಿ ನೀಡಿದಂತಾಗುತ್ತದೆ ಎಂದು ಸ್ಥಳೀಯ ಕಾರ್ಯಕರ್ತರು ಪಕ್ಷದ ಮುಖ್ಯಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. 2019ರಲ್ಲಿ ಉತ್ತರ ಪ್ರದೇಶದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಕಾಂಗ್ರೆಸ್ ಸಂಸದೆಯಾಗಿದ್ದ ಸೋನಿಯಾ ಗಾಂಧಿ ಈಗ ರಾಜಸ್ಥಾನದಿಂದ ರಾಜ್ಯಸಭೆಯ ಹಾದಿ ಹಿಡಿದಿದ್ದಾರೆ.

ಇದನ್ನೂ ಓದಿ: Lok Sabha Polls: ಲೋಕಸಭಾ ಚುನಾವಣೆ; ಕಾಂಗ್ರೆಸ್​ನಿಂದ ಹೊಸ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕರಿಗೆ ಆದ್ಯತೆ

ಕಾಂಗ್ರೆಸ್ ಪಕ್ಷವು ತನ್ನ ತಂತ್ರದಿಂದಾಗಿ 2 ಸ್ಥಾನಗಳಿಂದ ತನ್ನ ಅಭ್ಯರ್ಥಿಗಳನ್ನು ಘೋಷಿಸಲು ವಿಳಂಬ ಮಾಡುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಕೂಡ ರಾಯ್ ಬರೇಲಿಯಿಂದ ತಮ್ಮ ಅಭ್ಯರ್ಥಿಯನ್ನು ಬಹಿರಂಗಪಡಿಸಿಲ್ಲ. ಬಿಜೆಪಿಯ ಆಂತರಿಕ ಸಮೀಕ್ಷೆಗಳು ಅಮೇಥಿಯಲ್ಲಿ ಸ್ಮೃತಿ ಇರಾನಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿವೆ. ಮುಂದಿನ 24 ರಿಂದ 30 ಗಂಟೆಗಳಲ್ಲಿ ಅಮೇಥಿ ಮತ್ತು ರಾಯ್ ಬರೇಲಿ ಅಭ್ಯರ್ಥಿಗಳನ್ನು ಪಕ್ಷ ಘೋಷಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಇಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ