Lok Sabha Elections 2024: ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ; ಯಾರಿಗೆ ಸಿಗಲಿದೆ ಬಹುಮತ?

Lok Sabha Polls Results: 2024ರ ಭಾರತದ ಲೋಕಸಭೆ ಚುನಾವಣೆ ಈ ಬಾರಿ 7 ಹಂತಗಳಲ್ಲಿ ನಡೆಯಿತು. ಇದು ಬಹಳ ಸುದೀರ್ಘವಾದ ಚುನಾವಣಾ ಪ್ರಕ್ರಿಯೆಯಾಗಿತ್ತು. ನಾಳೆ (ಜೂನ್ 4) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆಗೆ ತೆಗೆದುಕೊಳ್ಳಲಾಗುವುದು.

Lok Sabha Elections 2024: ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ; ಯಾರಿಗೆ ಸಿಗಲಿದೆ ಬಹುಮತ?
ಮತ ಎಣಿಕೆ
Follow us
ಸುಷ್ಮಾ ಚಕ್ರೆ
| Updated By: ವಿವೇಕ ಬಿರಾದಾರ

Updated on:Jun 04, 2024 | 5:02 AM

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Election Vote Counting) ಮಂಗಳವಾರ (ಜೂನ್ 4) ನಡೆಯಲಿದ್ದು, ಈ ಬಾರಿ ಯಾವ ಪಕ್ಷಕ್ಕೆ ಬಹುಮತ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಇಂಡಿಯ (INDIA) ಬಣ ಮತ್ತು ಎನ್​ಡಿಎ (NDA) ಒಕ್ಕೂಟದ ಮಧ್ಯೆ ಈ ಬಾರಿ ತೀವ್ರ ಪೈಪೋಡಿ ಏರ್ಪಟ್ಟಿತ್ತು. ಈ ಬಾರಿ ಬಿಜೆಪಿಗೆ ಅಧಿಕಾರ ಸಿಗಲು ಬಿಡಬಾರದು ಎಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಒಂದಾಗಿ ಇಂಡಿಯ (I.N.D.I.A) ಬಣವನ್ನು ರಚಿಸಿದ್ದವು. ಆದರೆ, ವಿಪಕ್ಷಗಳ ಒಗ್ಗಟ್ಟಿನ ಹೋರಾಟದ ನಡುವೆಯೂ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತೊಮ್ಮೆ ಸರ್ಕಾರ ರಚಿಸಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗುವುದು ಖಚಿತವಾಗಿದೆ.

ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಗಳು ಎನ್​ಡಿಎ ಭಾರೀ ಬಹುಮತದಿಂದ ಅಧಿಕಾರಕ್ಕೇರಲಿದೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ. ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆಯಲಿದೆ. ಚುನಾವಣಾ ಆಯೋಗದ (EC) ಪ್ರಕಾರ, ಎಲ್ಲ 7 ಹಂತಗಳಿಗೆ ಮತದಾನವು ಬೆಳಿಗ್ಗೆ 8ರಿಂದ ಪ್ರಾರಂಭವಾಗಲಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಮತಎಣಿಕೆಗೆ ಕೌಂಟ್ ಡೌನ್; ಬೆಂಗಳೂರಿನಲ್ಲಿ ಹೇಗಿದೆ ಸಿದ್ಧತೆ? ಇಲ್ಲಿದೆ ಪೂರ್ಣ ವಿವರ

ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಪ್ರಾರಂಭವಾಗಲಿದೆ. ಅಂಚೆ ಮತ ಎಣಿಕೆ ಆರಂಭವಾದ ಅರ್ಧ ಗಂಟೆಯ ನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ತಿಳಿಸಿದ್ದಾರೆ. ಮೊದಲು ಅಂಚೆ ಮತ ಎಣಿಕೆ ಆರಂಭಿಸಬೇಕು ಮತ್ತು ಅಂಚೆ ಮತಪತ್ರಗಳ ಫಲಿತಾಂಶವನ್ನು ಮೊದಲು ಪ್ರಕಟಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ನಿಯೋಗ ಭಾನುವಾರ ಆಯೋಗವನ್ನು ಭೇಟಿ ಮಾಡಿತ್ತು.

ಲೋಕಸಭೆಯ ಎಲ್ಲಾ 543 ಸದಸ್ಯರನ್ನು ಆಯ್ಕೆ ಮಾಡಲು 7 ಹಂತಗಳಲ್ಲಿ ಏಪ್ರಿಲ್ 19ರಿಂದ ಜೂನ್ 1ರವರೆಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಯಿತು. ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎಣಿಕೆಯ ಫಲಿತಾಂಶಗಳು ECI ವೆಬ್‌ಸೈಟ್‌ನಲ್ಲಿ results.eci.gov.in ಮತ್ತು ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದು. ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಿಂದ ಕ್ಷೇತ್ರವಾರು ಅಥವಾ ರಾಜ್ಯವಾರು ಫಲಿತಾಂಶಗಳ ಜೊತೆಗೆ ವಿಜೇತ ಅಥವಾ ಮುಂಚೂಣಿಯಲ್ಲಿರುವ ಅಥವಾ ಹಿಂದುಳಿದ ಅಭ್ಯರ್ಥಿಗಳ ವಿವರಗಳನ್ನು ಕಂಡುಹಿಡಿಯಲು ಬಳಕೆದಾರರು ಲಭ್ಯವಿರುವ ಫಿಲ್ಟರ್ ಅನ್ನು ಬಳಸಬಹುದು.

ಇದನ್ನೂ ಓದಿ: ಐತಿಹಾಸಿಕ ದಾಖಲೆ ಬರೆದ ಭಾರತದ ಲೋಕಸಭಾ ಚುನಾವಣೆ, 64 ಕೋಟಿ ಮಂದಿಯಿಂದ ಮತದಾನ

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ 2019ರಲ್ಲಿ 352 ಸ್ಥಾನಗಳನ್ನು ಗಳಿಸಿದ ದಾಖಲೆಗಿಂತ ತನ್ನ ಸಾಧನೆಯನ್ನು ಸುಧಾರಿಸಲು ಸಜ್ಜಾಗಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಿಜೆಪಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Mon, 3 June 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ