PM Swearing-In Ceremony: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಶುರು

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ಈ ವಾರಾಂತ್ಯದಲ್ಲಿ ನೂತನ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಈಗಾಗಲೇ ಕೆಲಸ ಶುರು ಮಾಡಿವೆ.

PM Swearing-In Ceremony: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಶುರು
ರಾಷ್ಟ್ರಪತಿ ಭವನ
Follow us
|

Updated on: Jun 03, 2024 | 9:36 PM

ನವದೆಹಲಿ: ಈ ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಪ್ರಮಾಣ ವಚನ (Prime Minister Swearing-In Ceremony) ಸ್ವೀಕಾರ ಸಮಾರಂಭದ ಸ್ಥಳದಲ್ಲಿನ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ. ಭದ್ರತಾ ಸಿದ್ಧತೆಗಳ ಕುರಿತು ಸಭೆ ನಡೆಸಲಾಗಿದ್ದು, ಸಮಾರಂಭದ ಅಂಗವಾಗಿ ಕೇಂದ್ರ ಭದ್ರತಾ ಏಜೆನ್ಸಿಗಳು ಮತ್ತು ದೆಹಲಿ ಪೊಲೀಸರು (Delhi Police) ಬಹು ಹಂತದ ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಳನ್ನು ಯೋಜಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಅದರಂತೆ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಕಾರ್ಯಕ್ರಮದ ಸ್ಥಳವನ್ನು ಬದಲಾಯಿಸಿದರೆ ಆ ಸ್ಥಳಕ್ಕೆ ಅನುಗುಣವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ದಾಖಲೆ ಬರೆದ ಭಾರತದ ಲೋಕಸಭಾ ಚುನಾವಣೆ, 64 ಕೋಟಿ ಮಂದಿಯಿಂದ ಮತದಾನ

ಜೂನ್ 9 ಅಥವಾ 10ರಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮತ್ತೊಂದು ಮೂಲಗಳು ಖಚಿತಪಡಿಸಿವೆ. ಆರಂಭಿಕ ಮಾಹಿತಿಯ ಪ್ರಕಾರ, 12 ವಿದೇಶಿ ಗಣ್ಯರು ಸೇರಿದಂತೆ ಸುಮಾರು 10,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಜೂನ್ 4ರಂದು ನಡೆಯಲಿದೆ. 543 ಸದಸ್ಯ ಬಲದ ಲೋಕಸಭೆಗೆ ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳ ಜೊತೆಗೆ ಏಕಕಾಲದಲ್ಲಿ ಮತದಾನ ನಡೆಯಿತು. 7 ಹಂತಗಳಲ್ಲಿ ನಡೆದ ಸುದೀರ್ಘ ಅವಧಿಯ ಮತದಾನ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿದೆ. ಜೂನ್ 2ರಂದು ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.

ಇದನ್ನೂ ಓದಿ: Lok Sabha Election 2024 Results Live: ಲೋಕ ಫಲಿತಾಂಶಕ್ಕೂ ಮುನ್ನವೇ ಮಂಡ್ಯದಲ್ಲಿ ಬಿಜೆಪಿ ಸಂಭ್ರಮಾಚರಣೆ

ಜೂನ್ 1ರಂದು ನಡೆದ ಎಕ್ಸಿಟ್ ಪೋಲ್‌ಗಳು ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಭಾರೀ ಬಹುಮತದೊಂದಿಗೆ ಎನ್​ಡಿಎ 3ನೇ ಬಾರಿ ಅಧಿಕಾರಕ್ಕೆ ಬರಲಿದೆ ಎನ್ನಲಾಗುತ್ತಿದೆ. ಜೂನ್ 4ರಂದು ಮತ ಎಣಿಕೆ ನಡೆದಾಗ ಎಕ್ಸಿಟ್ ಪೋಲ್ ಭವಿಷ್ಯ ನಿಜವಾದರೆ, ಪ್ರಧಾನಿ ನರೇಂದ್ರ ಮೋದಿ ಅವರು ಜವಾಹರಲಾಲ್ ನೆಹರು ನಂತರ ಸತತ 3 ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಪ್ರಧಾನಿಯಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ