AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಇವಿಎಂ ಟ್ಯಾಂಪರಿಂಗ್; ಟಿಎಂಸಿ ಆರೋಪ

West Bengal Lok Sabha Polls: ಲೋಕಸಭಾ ಚುನಾವಣೆ ಆರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಈ ಲೋಕಸಭೆ ಚುನಾವಣೆಯ ನಡುವೆ ಟಿಎಂಸಿ ಬಿಜೆಪಿ ಬಂಗಾಳದ ರಘುನಾಥಪುರದಲ್ಲಿ ಇವಿಎಂ ಟ್ಯಾಂಪರಿಂಗ್ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದೆ.

Lok Sabha Elections 2024: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಇವಿಎಂ ಟ್ಯಾಂಪರಿಂಗ್; ಟಿಎಂಸಿ ಆರೋಪ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಇವಿಎಂ ಟ್ಯಾಂಪರಿಂಗ್; ಟಿಎಂಸಿ ಆರೋಪ
ಸುಷ್ಮಾ ಚಕ್ರೆ
|

Updated on:May 25, 2024 | 3:22 PM

Share

ಕೊಲ್ಕತ್ತಾ: ಲೋಕಸಭಾ ಚುನಾವಣೆಯ 6ನೇ ಹಂತದ (Lok Sabha Polls 6th Phase) ಮತದಾನ ಇಂದು ನಡೆಯುತ್ತಿದ್ದು, ಪಶ್ಚಿಮ ಬಂಗಾಳದ (West Bengal) ಬಂಕುರಾದ ರಘುನಾಥಪುರ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (EVM) ಬಿಜೆಪಿ ಟ್ಯಾಂಪರಿಂಗ್ ಮಾಡಿದೆ ಎಂದು ಟಿಎಂಸಿ (ತೃಣಮೂಲ ಕಾಂಗ್ರೆಸ್) ಆರೋಪಿಸಿದೆ. ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿ ಪಕ್ಷವು ಬಿಜೆಪಿ ಟ್ಯಾಗ್‌ಗಳೊಂದಿಗೆ ಇವಿಎಂಗಳನ್ನು ಇರಿಸಲಾಗಿರುವ ಫೋಟೋಗಳನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಬಿಜೆಪಿ ಟ್ಯಾಗ್ ಇರುವ 5 ಮತಯಂತ್ರಗಳನ್ನು ಕಂಡುಹಿಡಿಯಲಾಗಿದೆ ಎಂದು ಟಿಎಂಸಿ ಹೇಳಿಕೊಂಡಿದೆ. ಈ ಕಳವಳಗಳನ್ನು ತ್ವರಿತವಾಗಿ ಪರಿಹರಿಸಲು ಮತ್ತು ಬಿಜೆಪಿ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲು ತೃಣಮೂಲ ಕಾಂಗ್ರೆಸ್ ಪಕ್ಷವು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮನವಿ ಮಾಡಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಭವಿಷ್ಯ ನುಡಿದ ಯೋಗೇಂದ್ರ ಯಾದವ್; ಲೆಕ್ಕಾಚಾರ ಹೀಗಿದೆ

“ಬಿಜೆಪಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಮೂಲಕ ಮತಗಳನ್ನು ರಿಗ್ ಮಾಡಲು ಹೇಗೆ ಪ್ರಯತ್ನಿಸುತ್ತಿದೆ ಎಂದು ನೀವೇ ನೋಡಬಹುದು. ಇಂದು ಬಂಕುರಾದ ರಘುನಾಥಪುರದಲ್ಲಿ ಈ ರೀತಿಯ ಟ್ಯಾಗ್ ಹಾಕಲಾದ ಇವಿಎಂಗಳು ಪತ್ತೆಯಾಗಿವೆ. ಇನ್ನೂ 5 ಇವಿಎಂಗಳಲ್ಲಿ ಬಿಜೆಪಿ ಟ್ಯಾಗ್‌ಗಳು ಕಂಡುಬಂದಿವೆ. ಭಾರತೀಯ ಚುನಾವಣಾ ಆಯೋಗ ತಕ್ಷಣವೇ ಇದನ್ನು ಪರಿಶೀಲಿಸಬೇಕು ಮತ್ತು ಸರಿಪಡಿಸುವ ಕ್ರಮ ತೆಗೆದುಕೊಳ್ಳಬೇಕು” ಎಂದು ಟಿಎಂಸಿ ಅಧಿಕೃತ ಎಕ್ಸ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಇವಿಎಂ ಟ್ಯಾಂಪರಿಂಗ್ ಬಗ್ಗೆ ಬಿಜೆಪಿಯ ವಿರುದ್ಧ ಟಿಎಂಸಿ ಆರೋಪ ಮಾಡುವುದು ಇದೇ ಮೊದಲಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಹಿಂದೆ 2024ರ ಲೋಕಸಭೆ ಚುನಾವಣೆಯ ಹಿಂದಿನ ಹಂತಗಳಲ್ಲಿ ಕೂಡ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಿದ್ದಾರೆ ಮತ್ತು ಮತದಾರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ವಿರುದ್ಧ ಟೀಕಿಸಿದ್ದರು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿಷೇಧ ಹೇರಿದ ಚುನಾವಣಾ ಆಯೋಗ

ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಲು ಬಿಜೆಪಿ ಅನ್ಯಾಯದ ಆಚರಣೆಗಳನ್ನು ಆರಿಸಿಕೊಂಡಿದೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಮೇ 1ರಂದು ಮಮತಾ ಬ್ಯಾನರ್ಜಿ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಬಳಸುತ್ತಿರುವ ಇವಿಎಂಗಳನ್ನು ಬದಲಾಯಿಸುವ ಯೋಜನೆಯನ್ನು ಬಿಜೆಪಿ ರೂಪಿಸುತ್ತಿದೆ ಎಂದು ಆರೋಪಿಸಿದ್ದರು. ಚುನಾವಣಾ ಆಯೋಗ ನಿನ್ನೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಪ್ರತಿ ಬಾರಿ ಬಿಜೆಪಿ ಕಡಿಮೆ ಮತಗಳನ್ನು ಪಡೆಯುವ ಪ್ರದೇಶಗಳಲ್ಲಿ 5.75% ಹೆಚ್ಚು ಮತದಾನವಾಗಿದೆ. ಈ ಸಂಖ್ಯೆ ಹೇಗೆ ಏರಿತು?, ಇವಿಎಂ ಯಂತ್ರಗಳನ್ನು ಯಾರು ತಯಾರಿಸುತ್ತಾರೆ? ಮತ್ತು ಈ ಯಂತ್ರಗಳಲ್ಲಿ ಬಳಸುವ ಚಿಪ್‌ಗಳನ್ನು ಯಾರು ತಯಾರಿಸುತ್ತಾರೆ? ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಸುಮಾರು 1.9 ಮಿಲಿಯನ್ ಇವಿಎಂ ಯಂತ್ರಗಳು ಬಹಳ ಸಮಯದಿಂದ ಕಾಣೆಯಾಗಿವೆ. ನಾಪತ್ತೆಯಾಗಿರುವ ಇವಿಎಂಗಳಲ್ಲಿ ಸುಳ್ಳು ಡೇಟಾವನ್ನು ನಮೂದಿಸಲಾಗಿದೆ. ಈಗ ಬಳಸುತ್ತಿರುವ ಇವಿಎಂಗಳ ಬದಲಿಗೆ ಆ ಯಂತ್ರಗಳನ್ನು ಇರಿಸಲಾಗಿದೆ ಎಂಬ ವ್ಯಾಪಕ ಶಂಕೆ ಇದೆ ಎಂದು ಮೇ 1ರಂದು ಬಂಗಾಳದ ಮಾಲ್ಡಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 25 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ