AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನಕ್ಕೆ ಹೋದ ನಾಯಕರು ಕಾಂಗ್ರೆಸ್​ನಿಂದ ವಜಾ; ಆಂಧ್ರದಲ್ಲಿ ಪ್ರಧಾನಿ ಮೋದಿ ಟೀಕೆ

PM Modi in Rajahmundry: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆ ಕುರಿತು ಕೆಲವು ಮುಖ್ಯಾಂಶಗಳು ಇಲ್ಲಿವೆ.

ದೇವಸ್ಥಾನಕ್ಕೆ ಹೋದ ನಾಯಕರು ಕಾಂಗ್ರೆಸ್​ನಿಂದ ವಜಾ; ಆಂಧ್ರದಲ್ಲಿ ಪ್ರಧಾನಿ ಮೋದಿ ಟೀಕೆ
ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on:May 06, 2024 | 10:49 PM

Share

ರಾಜಮಂಡ್ರಿ: ದೇವಸ್ಥಾನಗಳಿಗೆ ಭೇಟಿ ನೀಡುವ ಎಲ್ಲ ನಾಯಕರನ್ನು ಕಾಂಗ್ರೆಸ್ (Congress) ಪಕ್ಷದಿಂದ ವಜಾಗೊಳಿಸಲಾಗುತ್ತದೆ. ಆ ಪಕ್ಷದಲ್ಲಿ ಹಿಂದೂ ದೇವರನ್ನು ಪೂಜಿಸುವವರಿಗೆ ಸ್ಥಾನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಂಧ್ರಪ್ರದೇಶದ (Andhra Pradesh) ರಾಜಮಂಡ್ರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಾತುಗಳನ್ನು ಹೇಳಿದ್ದಾರೆ.

ರಾಧಿಕಾ ಖೇರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಸದಸ್ಯರು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳದಿರುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಪ್ರಧಾನಿ ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Lok Sabha Polls: ಮತದಾರರ ಸೇರ್ಪಡೆ ನಿಲ್ಲಿಸಿ; ಎಲ್ಲ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ವೈಎಸ್‌ಆರ್‌ಸಿಪಿಯನ್ನು ಗುರಿಯಾಗಿಸಿ ಟೀಕೆ ಮಾಡಿದ್ದಾರೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪ್ರಸ್ತುತ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಮಾತನಾಡಿದ ಮೋದಿ, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ 5 ವರ್ಷಗಳ ಕಾಲ ಜನರಿಗಾಗಿ ದುಡಿಯುವ ಅವಕಾಶ ಸಿಕ್ಕಿತ್ತು. ಅವರು ಅದನ್ನು ವ್ಯರ್ಥ ಮಾಡಿ ರಾಜ್ಯವನ್ನು ಅಭಿವೃದ್ಧಿಯಲ್ಲಿ ಹಿಂದುಳಿಯುವಂತೆ ಮಾಡಿದ್ದಾರೆ ಎಂದು ಹೇಳಿದರು. ಚಂದ್ರಬಾಬು ನಾಯ್ಡು ಅವರ ಅಧಿಕಾರಾವಧಿಯಲ್ಲಿ ರಾಜ್ಯವು ಅಭಿವೃದ್ಧಿ ಪಯಣದಲ್ಲಿ ಮುಂಚೂಣಿಯಲ್ಲಿತ್ತು. ಆದರೆ ವೈಎಸ್‌ಆರ್‌ಸಿಪಿ ಅದನ್ನು ಹಳಿ ತಪ್ಪಿಸಿದರು ಎಂದು ಮೋದಿ ಒತ್ತಿ ಹೇಳಿದರು.

ಆಂಧ್ರಪ್ರದೇಶ ಮತ್ತು ಭಾರತದಾದ್ಯಂತ ಅಭಿವೃದ್ಧಿಯ ಏಕೈಕ ಭರವಸೆ ಎನ್‌ಡಿಎ ಎಂಬುದನ್ನು ಮರೆಯಬೇಡಿ. ಕೇಂದ್ರದ ಯೋಜನೆಗಳನ್ನು ಆಂಧ್ರದಲ್ಲಿ ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಜನರ ಕಲ್ಯಾಣಕ್ಕೆ ಧಕ್ಕೆಯಾಗಿದೆ ಎಂದು ಮೋದಿ ಟೀಕಿಸಿದ್ದಾರೆ.

ಇದನ್ನೂ ಓದಿ: PM Modi Interview: 370ನೇ ವಿಧಿ ರದ್ದುಪಡಿಸಿ ಸಂವಿಧಾನಕ್ಕೆ ಶ್ರೇಷ್ಟ ಸೇವೆ ಸಲ್ಲಿಸಿದ್ದೇನೆ; ಪ್ರಧಾನಿ ಮೋದಿ

ಇನ್ನು, ಕಪ್ಪುಹಣದ ಬಗ್ಗೆ ಜನರು ಕಾಂಗ್ರೆಸ್ ‘ಶೆಜಾದಾ’ರಿಂದ ಉತ್ತರವನ್ನು ಹುಡುಕುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಜಾರ್ಖಂಡ್‌ನಲ್ಲಿರುವ ಕಾಂಗ್ರೆಸ್ ಸಚಿವರ ಆಪ್ತರ ಮನೆಯಿಂದ ಇತ್ತೀಚೆಗೆ ಹಣ ವಶಪಡಿಸಿಕೊಂಡ ಬಗ್ಗೆ ಅವರು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ‘ಕಾಂಗ್ರೆಸ್ ತನ್ನ ಸಚಿವರ ಆಪ್ತ ಕಾರ್ಯದರ್ಶಿಯ ಮನೆಗೆಲಸದವರ ಮನೆಯನ್ನು ಕಪ್ಪುಹಣದ ಗೋಡೌನ್ ಮಾಡಿಕೊಂಡಿದೆ’ ಎಂದು ಹೇಳಿದರು.

ಈ ಹಿಂದೆ ಜಾರ್ಖಂಡ್‌ನ ಕಾಂಗ್ರೆಸ್ ಸಂಸದರೊಬ್ಬರಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅವರು ನೆನಪಿಸಿಕೊಂಡರು. ಅವರ ಕಪ್ಪುಹಣವನ್ನು ಹಿಡಿಯುವುದಕ್ಕಾಗಿ ನನ್ನನ್ನು ನಿಂದಿಸಲಾಗುತ್ತಿದೆ. ಆದರೆ ಬಡವರ ಹಣದ ಬಗ್ಗೆ ನಾನು ಚಿಂತಿಸುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 6 May 24

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್