ರಾಜಮಂಡ್ರಿ: ದೇವಸ್ಥಾನಗಳಿಗೆ ಭೇಟಿ ನೀಡುವ ಎಲ್ಲ ನಾಯಕರನ್ನು ಕಾಂಗ್ರೆಸ್ (Congress) ಪಕ್ಷದಿಂದ ವಜಾಗೊಳಿಸಲಾಗುತ್ತದೆ. ಆ ಪಕ್ಷದಲ್ಲಿ ಹಿಂದೂ ದೇವರನ್ನು ಪೂಜಿಸುವವರಿಗೆ ಸ್ಥಾನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಂಧ್ರಪ್ರದೇಶದ (Andhra Pradesh) ರಾಜಮಂಡ್ರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಾತುಗಳನ್ನು ಹೇಳಿದ್ದಾರೆ.
ರಾಧಿಕಾ ಖೇರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಸದಸ್ಯರು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳದಿರುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಪ್ರಧಾನಿ ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ: Lok Sabha Polls: ಮತದಾರರ ಸೇರ್ಪಡೆ ನಿಲ್ಲಿಸಿ; ಎಲ್ಲ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ
ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ವೈಎಸ್‌ಆರ್‌ಸಿಪಿಯನ್ನು ಗುರಿಯಾಗಿಸಿ ಟೀಕೆ ಮಾಡಿದ್ದಾರೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪ್ರಸ್ತುತ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಮಾತನಾಡಿದ ಮೋದಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ 5 ವರ್ಷಗಳ ಕಾಲ ಜನರಿಗಾಗಿ ದುಡಿಯುವ ಅವಕಾಶ ಸಿಕ್ಕಿತ್ತು. ಅವರು ಅದನ್ನು ವ್ಯರ್ಥ ಮಾಡಿ ರಾಜ್ಯವನ್ನು ಅಭಿವೃದ್ಧಿಯಲ್ಲಿ ಹಿಂದುಳಿಯುವಂತೆ ಮಾಡಿದ್ದಾರೆ ಎಂದು ಹೇಳಿದರು. ಚಂದ್ರಬಾಬು ನಾಯ್ಡು ಅವರ ಅಧಿಕಾರಾವಧಿಯಲ್ಲಿ ರಾಜ್ಯವು ಅಭಿವೃದ್ಧಿ ಪಯಣದಲ್ಲಿ ಮುಂಚೂಣಿಯಲ್ಲಿತ್ತು. ಆದರೆ ವೈಎಸ್‌ಆರ್‌ಸಿಪಿ ಅದನ್ನು ಹಳಿ ತಪ್ಪಿಸಿದರು ಎಂದು ಮೋದಿ ಒತ್ತಿ ಹೇಳಿದರು.
Addressed massive NDA rallies in Rajahmundry and Anakapalle. The participation of @ncbn Garu and @PawanKalyan Garu in these rallies made them even more special. Our alliance is going to the people with a positive agenda of development, development and development. pic.twitter.com/cSM3gds4If
— Narendra Modi (@narendramodi) May 6, 2024
ಆಂಧ್ರಪ್ರದೇಶ ಮತ್ತು ಭಾರತದಾದ್ಯಂತ ಅಭಿವೃದ್ಧಿಯ ಏಕೈಕ ಭರವಸೆ ಎನ್‌ಡಿಎ ಎಂಬುದನ್ನು ಮರೆಯಬೇಡಿ. ಕೇಂದ್ರದ ಯೋಜನೆಗಳನ್ನು ಆಂಧ್ರದಲ್ಲಿ ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಜನರ ಕಲ್ಯಾಣಕ್ಕೆ ಧಕ್ಕೆಯಾಗಿದೆ ಎಂದು ಮೋದಿ ಟೀಕಿಸಿದ್ದಾರೆ.
ಇದನ್ನೂ ಓದಿ: PM Modi Interview: 370ನೇ ವಿಧಿ ರದ್ದುಪಡಿಸಿ ಸಂವಿಧಾನಕ್ಕೆ ಶ್ರೇಷ್ಟ ಸೇವೆ ಸಲ್ಲಿಸಿದ್ದೇನೆ; ಪ್ರಧಾನಿ ಮೋದಿ
ಇನ್ನು, ಕಪ್ಪುಹಣದ ಬಗ್ಗೆ ಜನರು ಕಾಂಗ್ರೆಸ್ ‘ಶೆಜಾದಾ’ರಿಂದ ಉತ್ತರವನ್ನು ಹುಡುಕುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಜಾರ್ಖಂಡ್‌ನಲ್ಲಿರುವ ಕಾಂಗ್ರೆಸ್ ಸಚಿವರ ಆಪ್ತರ ಮನೆಯಿಂದ ಇತ್ತೀಚೆಗೆ ಹಣ ವಶಪಡಿಸಿಕೊಂಡ ಬಗ್ಗೆ ಅವರು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ‘ಕಾಂಗ್ರೆಸ್ ತನ್ನ ಸಚಿವರ ಆಪ್ತ ಕಾರ್ಯದರ್ಶಿಯ ಮನೆಗೆಲಸದವರ ಮನೆಯನ್ನು ಕಪ್ಪುಹಣದ ಗೋಡೌನ್ ಮಾಡಿಕೊಂಡಿದೆ’ ಎಂದು ಹೇಳಿದರು.
ಈ ಹಿಂದೆ ಜಾರ್ಖಂಡ್‌ನ ಕಾಂಗ್ರೆಸ್ ಸಂಸದರೊಬ್ಬರಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅವರು ನೆನಪಿಸಿಕೊಂಡರು. ಅವರ ಕಪ್ಪುಹಣವನ್ನು ಹಿಡಿಯುವುದಕ್ಕಾಗಿ ನನ್ನನ್ನು ನಿಂದಿಸಲಾಗುತ್ತಿದೆ. ಆದರೆ ಬಡವರ ಹಣದ ಬಗ್ಗೆ ನಾನು ಚಿಂತಿಸುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:16 pm, Mon, 6 May 24