Lok Sabha Polls 2024: ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್‌ಗೆ ನಿಷೇಧ
ತೆಲಂಗಾಣದಲ್ಲೂ ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಚುನಾವಣಾ ಪ್ರಚಾರ ಮಾಡದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಇದಕ್ಕೆ ಕಾರಣವೇನು? ಎಲ್ಲಿಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ? ಎಂಬಿತ್ಯಾದಿ ವಿವರ ಇಲ್ಲಿದೆ.
ಹೈದರಾಬಾದ್: ಲೋಕಸಭಾ ಚುನಾವಣೆಯ (Lok Sabha Elections) ಪ್ರಚಾರದಲ್ಲಿ ಭಾಗವಹಿಸದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್‌ಗೆ (KCR) ಚುನಾವಣಾ ಆಯೋಗ ನಿಷೇಧ ಹೇರಿದೆ. ಮುಂದಿನ 48 ಗಂಟೆ ಕಾಲ ಪ್ರಚಾರದಲ್ಲಿ ಭಾಗಿಯಾಗದಂತೆ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಕಾಂಗ್ರೆಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕೆಸಿಆರ್‌ಗೆ ಈ ನಿರ್ಬಂಧ ವಿಧಿಸಲಾಗಿದ್ದು, ಇಂದು ರಾತ್ರಿ 8 ಗಂಟೆಯಿಂದ 48 ಗಂಟೆ ಕಾಲ ಅವರು ಪ್ರಚಾರ ನಡೆಸುವಂತಿಲ್ಲ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥರಾಗಿರುವ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಮೇಲೆ 48 ಗಂಟೆಗಳ ಪ್ರಚಾರ ನಿಷೇಧವನ್ನು ವಿಧಿಸಲಾಗಿದೆ. ಸಿರ್ಸಿಲ್ಲಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಕೇಜ್ರಿವಾಲ್ರನ್ನು ಬಂಧಿಸಿದ್ದೇಕೆ?; ಇಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಮಾದರಿ ನೀತಿ ಸಂಹಿತೆಯ ಉಲ್ಲಂಘನೆ:
ಏಪ್ರಿಲ್ 5ರಂದು ಕೆಸಿಆರ್ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಈ ಆದೇಶ ನೀಡಿದೆ. ಮೇ 1 ರಂದು ರಾತ್ರಿ 8 ರಿಂದ ಜಾರಿಗೆ ಬಂದ ನಿಷೇಧವನ್ನು ಮಾದರಿಯ ನೀತಿ ಸಂಹಿತೆ ಉಲ್ಲಂಘನೆಯ ಆಧಾರದ ಮೇಲೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: Mallikarjun Kharge: ಶಿವ ವರ್ಸಸ್ ರಾಮ; ಚುನಾವಣೆ ಪ್ರಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ
ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯಿಸಿದ ಕೆಸಿಆರ್, ತಮ್ಮ ಟೀಕೆಗಳು ರಾಜ್ಯದಲ್ಲಿ ಕಾಂಗ್ರೆಸ್‌ನ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಸೀಮಿತವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಯಾವುದೇ ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ