ಅನುಭವಿ ಚೆಸ್ ಆಟಗಾರ; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಕಾಂಗ್ರೆಸ್ ಸಮರ್ಥನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಥವಾ ಅವರ ಕುಟುಂಬದವರು ಈ ಹಿಂದೆ ತಮ್ಮ ಕುಟುಂಬದ ಯಾರೂ ರಾಯ್ಬರೇಲಿ ಅಥವಾ ಅಮೇಥಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಷ್ಟಪಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ ರಾಹುಲ್ ಗಾಂಧಿ ರಾಯ್ಬರೇಲಿಯಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ.
ನವದೆಹಲಿ: ರಾಹುಲ್ ಗಾಂಧಿ ಅವರು ಅಮೇಥಿಯ ಬದಲು ರಾಯ್ ಬರೇಲಿಯಲ್ಲಿ (Rae Bareli) ಸ್ಪರ್ಧಿಸುತ್ತಿರುವುದಕ್ಕೆ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಇದಕ್ಕೆ ಕಾಂಗ್ರೆಸ್ ನಾಯಕರು ಇಂದು ಸಾಮಾಜಿಕ ಜಾಲತಾಣಗಳಲ್ಲಿ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ‘ದಾರೋ ಮತ್, ಭಾಗೋ ಮತ್’ ಎಂದು ರಾಹುಲ್ ಗಾಂಧಿಯನ್ನು (Rahul Gandhi) ಲೇವಡಿ ಮಾಡಿದರೆ, ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಅಮೇಥಿಯಿಂದ ಕಾಂಗ್ರೆಸ್ ನಾಯಕ ‘ಓಡಿಹೋಗಿದ್ದಾರೆ’ ಎಂದು ಆರೋಪಿಸಿದ್ದರು. ಈ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, ಚೆಸ್ ಮತ್ತು ರಾಜಕೀಯದ ಅನುಭವಿ ಆಟಗಾರನಾಗಿ ರಾಯ್ ಬರೇಲಿಯಿಂದ ಸ್ಪರ್ಧಿಸುವ ರಾಹುಲ್ ಗಾಂಧಿ ಅವರ ನಿರ್ಧಾರವನ್ನು ಚೆನ್ನಾಗಿ ಯೋಚಿಚಿ, ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನೆನಪಿಡಿ, ರಾಹುಲ್ ಗಾಂಧಿ ರಾಜಕೀಯ ಮತ್ತು ಚದುರಂಗದ ಅನುಭವಿ ಆಟಗಾರ. ಕಾಂಗ್ರೆಸ್ ಪಕ್ಷದ ನಾಯಕತ್ವವು ಹೆಚ್ಚಿನ ಚರ್ಚೆಯ ನಂತರ ಮತ್ತು ದೊಡ್ಡ ಕಾರ್ಯತಂತ್ರದ ಭಾಗವಾಗಿ ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಇದಕ್ಕೆ ಬಿಜೆಪಿಯ ಸ್ವಯಂಘೋಷಿತ ಚಾಣಕ್ಯ ಈಗ ಹೇಗೆ ಪ್ರತಿಕ್ರಿಯಿಸುತ್ತಾರೆಂದು ನಾವೂ ಕಾಯುತ್ತಿದ್ದೇವೆ ಎಂದು ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
Many people have many opinions on the news of @RahulGandhi contesting elections from Rae Bareli.
Remember, he is an experienced player of politics and chess. The party leadership takes its decisions after much discussion, and as part of a larger strategy. This single decision…
— Jairam Ramesh (@Jairam_Ramesh) May 3, 2024
ಇದನ್ನೂ ಓದಿ: ಲೈಂಗಿಕ ಹಗರಣವಲ್ಲ ಸಾಮೂಹಿಕ ಅತ್ಯಾಚಾರ; ಪ್ರಜ್ವಲ್ ರೇವಣ್ಣ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ರಾಯ್ ಬರೇಲಿಯನ್ನು ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿಯವರು ಪ್ರತಿನಿಧಿಸಿದ್ದಾರೆ. ಅದು ‘ಅನುವಂಶಿಕತೆಯಲ್ಲ, ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಕೇವಲ ಅಮೇಥಿ-ರಾಯ್ಬರೇಲಿ ಮಾತ್ರವಲ್ಲ, ಉತ್ತರದಿಂದ ದಕ್ಷಿಣದವರೆಗೆ ಇಡೀ ದೇಶವು ಗಾಂಧಿ ಕುಟುಂಬದ ಭದ್ರಕೋಟೆಯಾಗಿದೆ. ರಾಹುಲ್ ಗಾಂಧಿ ಉತ್ತರ ಪ್ರದೇಶದಿಂದ 3 ಬಾರಿ ಮತ್ತು ಕೇರಳದಿಂದ ಒಮ್ಮೆ ಸಂಸದರಾಗಿದ್ದಾರೆ. ಆದರೆ, ಪ್ರಧಾನಿ ಮೋದಿ ಈ ರೀತಿಯ ಬದಲಾವಣೆಯ ಸವಾಲನ್ನು ಸ್ವೀಕರಿಸಿದ್ದಾರೆಯೇ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದರು.
जबसे राहुल जी की रायबरेली से लड़ने की खबर आयी है, हर ओर से खूब सारी टिप्पणियों की भरमार है।
भूलिए मत, राहुल जी शतरंज के माहिर खिलाड़ी हैं। उनकी एक ही चाल से BJP और उनके चरण चुंबकों को मूर्छा आ गई है।
• रायबरेली सिर्फ़ सोनिया जी की नहीं, ख़ुद इंदिरा गांधी जी की सीट रही है. यह…
— Supriya Shrinate (@SupriyaShrinate) May 3, 2024
ಇದನ್ನೂ ಓದಿ: Legislative Council Election: ಕರ್ನಾಟಕ ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಘೋಷಣೆ
ಈ ನಡುವೆ ಪ್ರಿಯಾಂಕಾ ಗಾಂಧಿ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಲೋಕಸಭೆಗೆ ಹೋಗಬಹುದು ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಸುಳಿವು ನೀಡಿದ್ದಾರೆ. ಪ್ರಿಯಾಂಕಾ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅವರು ನರೇಂದ್ರ ಮೋದಿ ವಿರುದ್ಧದ ಕಠಿಣ ಅಭ್ಯರ್ಥಿ ಎಂದು ಸಾಬೀತುಪಡಿಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಸದನವನ್ನು ತಲುಪುತ್ತಾರೆ ಎಂದು ಅವರು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:54 pm, Fri, 3 May 24