Lok Sabha Polls: ಚುನಾವಣೆ ಫಲಿತಾಂಶದ ನಂತರ ರಾಹುಲ್ ಗಾಂಧಿ ದೇಶ ಬಿಟ್ಟು ಓಡಿ ಹೋಗುತ್ತಾರೆ; ಯೋಗಿ ಆದಿತ್ಯನಾಥ್

ಬಿಜೆಪಿಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ವಿವಾದಿತ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಜಾರಿಗೊಳಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Lok Sabha Polls: ಚುನಾವಣೆ ಫಲಿತಾಂಶದ ನಂತರ ರಾಹುಲ್ ಗಾಂಧಿ ದೇಶ ಬಿಟ್ಟು ಓಡಿ ಹೋಗುತ್ತಾರೆ; ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Follow us
ಸುಷ್ಮಾ ಚಕ್ರೆ
|

Updated on: May 12, 2024 | 8:58 PM

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Polls 2024) ಫಲಿತಾಂಶ ಬಂದ ನಂತರ ಕಾಂಗ್ರೆಸ್ ಪಕ್ಷದ (Congress Party) ಬಗ್ಗೆ ಯಾರೂ ಕೇಳುವುದಿಲ್ಲ. ರಾಹುಲ್ ಗಾಂಧಿ (Rahul Gandhi) ದೇಶ ಬಿಟ್ಟು ಪಲಾಯನ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ರಜತ್ ಶರ್ಮಾ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದಲ್ಲಿ ಇಂಡಿಯಾ ಒಕ್ಕೂಟವು ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲುತ್ತದೆ, ಕಾಂಗ್ರೆಸ್ ಮೈತ್ರಿಕೂಟ ಗರಿಷ್ಠ ಸ್ಥಾನಗಳನ್ನು ಪಡೆಯುತ್ತದೆ ಎಂದು ನಾನು ಲಿಖಿತವಾಗಿ ಬರೆದುಕೊಡುತ್ತೇನೆ” ಎಂಬ ಕನೌಜ್ ರ್ಯಾಲಿಯಲ್ಲಿನ ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಯೋಗಿ ಆದಿತ್ಯನಾಥ್, ಇಂಡಿಯಾ ಮೈತ್ರಿಕೂಟವು ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ, ಅವರು ದೇಶ ಬಿಟ್ಟು ಓಡಿ ಹೋಗುತ್ತಾರೆ ಎಂದು ರಾಹುಲ್ ಗಾಂಧಿಗೆ ನಾನು ಬರೆದುಕೊಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಒಪ್ಪಿದರೆ ನಾನು ಸಿದ್ಧ; ಚುನಾವಣೆ ಕುರಿತ ಚರ್ಚೆಗೆ ತಯಾರೆಂದ ರಾಹುಲ್ ಗಾಂಧಿ

403 ಸ್ಥಾನಗಳ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಕೇವಲ ಇಬ್ಬರು ಶಾಸಕರನ್ನು ಹೊಂದಿದೆ. ಮುಂದಿನ ಬಾರಿ ಅವರು ಈ ಎರಡು ಸ್ಥಾನಗಳನ್ನೂ ಕಳೆದುಕೊಳ್ಳುತ್ತಾರೆ. ನಾನು ರಾಹುಲ್ ಗಾಂಧಿ ಅವರನ್ನು ಕೇಳಲು ಬಯಸುತ್ತೇನೆ, ಅವರು ಉತ್ತರ ಪ್ರದೇಶದಲ್ಲಿ 80 ಸೀಟುಗಳನ್ನು ಗೆಲ್ಲುವ ವಿಶ್ವಾಸವಿದ್ದರೆ, ಅವರು ಏಕೆ ಹೋಗಿ ವಯನಾಡಿನಲ್ಲಿ ಸ್ಪರ್ಧಿಸಿದರು? ಅವರು ಏಕೆ ಅಮೇಥಿ ತೊರೆದು ರಾಯ್ ಬರೇಲಿಯಿಂದ ಸ್ಪರ್ಧಿಸಿದರು? ರಾಹುಲ್ ಗಾಂಧಿ ಕೇವಲ ಕನಸಿನ ಲೋಕದಲ್ಲಿ ಜೀವಿಸುತ್ತಿದ್ದಾರೆ ಎಂದು ಯೋಗಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ