ಜೈಲಿನಲ್ಲಿದ್ದುಕೊಂಡೇ ಲೋಕಸಭಾ ಚುನಾವಣೆಯಲ್ಲಿ ಗೆದ್ದವರಿವರು; ಪ್ರಮಾಣ ವಚನ ಸ್ವೀಕಾರದಲ್ಲಿ ಇವರು ಭಾಗವಹಿಸಬಹುದೇ?

ಮಂಗಳವಾರ ಚುನಾವಣಾ ಆಯೋಗವು ಪ್ರಕಟಿಸಿದ ಫಲಿತಾಂಶಗಳಲ್ಲಿ, ಜೈಲಿನಲ್ಲಿರುವ ಸಿಖ್ ಬೋಧಕ ಅಮೃತಪಾಲ್ ಸಿಂಗ್,  ಖದೂರ್ ಸಾಹಿಬ್ ಸ್ಥಾನದಿಂದ ಗೆದ್ದಿದ್ದಾರೆ. ಅದೇ ವೇಳೆ ಇಂಜಿನಿಯರ್ ರಶೀದ್ ಎಂದು ಕರೆಯಲ್ಪಡುವ ಶೇಖ್ ಅಬ್ದುಲ್ ರಶೀದ್ ಅವರು ಬಾರಾಮುಲ್ಲಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಲೋಕಸಭಾ ಚುನಾವಣೆಯಲ್ಲಿ ಗೆದ್ದವರಿವರು; ಪ್ರಮಾಣ ವಚನ ಸ್ವೀಕಾರದಲ್ಲಿ ಇವರು ಭಾಗವಹಿಸಬಹುದೇ?
ಅಮೃತಪಾಲ್ ಸಿಂಗ್- ಇಂಜಿನಿಯರ್ ರಶೀದ್
Follow us
|

Updated on: Jun 05, 2024 | 3:07 PM

ದೆಹಲಿ ಜೂನ್ 05 : ಭಯೋತ್ಪಾದನೆ ಆರೋಪದಲ್ಲಿ ಜೈಲು ಸೇರಿರುವ ಇಬ್ಬರು ಅಭ್ಯರ್ಥಿಗಳು ಜೈಲಿನಲ್ಲಿದ್ದುಕೊಂಡೇ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆದ್ದರೂ 18ನೇ ಲೋಕಸಭೆಯ ಕಲಾಪಕ್ಕೆ ಹಾಜರಾಗದಂತೆ ಕಾನೂನು ಅವರನ್ನು ದೂರವಿಡುತ್ತದೆಯಾದರೂ, ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಂವಿಧಾನಿಕ ಹಕ್ಕನ್ನು ಇವರು ಹೊಂದಿದ್ದಾರೆ. ಮಂಗಳವಾರ ಚುನಾವಣಾ ಆಯೋಗವು ಪ್ರಕಟಿಸಿದ ಫಲಿತಾಂಶಗಳಲ್ಲಿ, ಜೈಲಿನಲ್ಲಿರುವ ಸಿಖ್ ಬೋಧಕ ಅಮೃತಪಾಲ್ ಸಿಂಗ್ (Amritpal Singh),  ಖದೂರ್ ಸಾಹಿಬ್ ಸ್ಥಾನದಿಂದ ಗೆದ್ದಿದ್ದಾರೆ. ಅದೇ ವೇಳೆ ಇಂಜಿನಿಯರ್ ರಶೀದ್ (Engineer Rashid) ಎಂದು ಕರೆಯಲ್ಪಡುವ ಶೇಖ್ ಅಬ್ದುಲ್ ರಶೀದ್ ಅವರು ಬಾರಾಮುಲ್ಲಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ಯಾರು ಈ ಇಂಜಿನಿಯರ್ ರಶೀದ್ ?

ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಪ್ರಸ್ತುತ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕರಾಗಿದ್ದ ರಶೀದ್ ಬಾರಾಮುಲ್ಲಾದಿಂದ ಕಣದಲ್ಲಿದ್ದ 22 ಅಭ್ಯರ್ಥಿಗಳಲ್ಲಿ ಒಬ್ಬರು. ಇಂಜಿನಿಯರ್ ರಶೀದ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಅಂದ ಹಾಗೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟ ಮೊದಲ ನಾಯಕರಾಗಿದ್ದಾರೆ ರಶೀದ್. ರಶೀದ್ ಅವರು ಇಬ್ಬರು ಮಕ್ಕಳು ಅಬ್ರಾರ್ ರಶೀದ್ ಮತ್ತು ಅಸ್ರಾರ್ ರಶೀದ್ ತಮ್ಮ ತಂದೆಯ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಇಂಜಿನಿಯರ್ ರಶೀದ್ ಅವರು 2008 ಮತ್ತು 2014 ರಲ್ಲಿ ಲ್ಯಾಂಗೇಟ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದರು.2019 ರ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರು. ಅವರು ಅವಾಮಿ ಇತ್ತೆಹಾದ್ ಪಕ್ಷವನ್ನು ಮುನ್ನಡೆಸುತ್ತಿದ್ದರೂ, ಅವರು ಈ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಇನ್ನೊಂದು ವಿಷಯ ಏನಪ್ಪಾ ಅಂದ್ರೆ, ನ್ಯಾಷನಲ್‌ ಕಾನ್ಫರೆನ್ಸ್‌ನ ಓಮರ್‌ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿದ್ದ ಅಬ್ದುಲ್ ರಶೀದ್ ಶೇಖ್ 472481 ಮತಗಳನ್ನು ಗಳಿಸಿದ್ದಾರೆ. ಒಮ್ಮೆಯೂ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಇಲ್ಲಿ ಗೆದ್ದಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಸ್ಪರ್ಧಿಸಿದ ಇವರು ಚುನಾವಣೆ ಗೆಲ್ಲಲು ಖರ್ಚು ಮಾಡಿದ್ದು ಕೇವಲ ₹ 27,000

ಅಮೃತಪಾಲ್ ಸಿಂಗ್ ಯಾರು?

ಖಲಿಸ್ತಾನಿ ನಾಯಕ ಮತ್ತು ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್, ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಪ್ರಸ್ತುತ ದಿಬ್ರುಗಢದಲ್ಲಿ ಜೈಲಿನಲ್ಲಿದ್ದು, ಪಂಜಾಬ್ ನ ಖದೂರ್ ಸಾಹಿಬ್ ಲೋಕಸಭಾ ಸ್ಥಾನವನ್ನು ಗೆದ್ದಿದ್ದಾರೆ. ಅಸ್ಸಾಂ ಜೈಲಿನಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸಿದ ಅಮೃತಪಾಲ್ ಸಿಂಗ್ ಅವರು ಪ್ರಚಾರಕ್ಕಾಗಿ ಖಾದೂರ್ ಸಾಹಿಬ್ ಕ್ಷೇತ್ರಕ್ಕೆ ಬಂದೇ ಇಲ್ಲ. ಕಾಂಗ್ರೆಸ್‌ನ ಕುಲ್ಬೀರ್ ಸಿಂಗ್ ಝಿರಾ ವಿರುದ್ಧ ಸ್ಪರ್ಧಿಸಿದ್ದ ಸಿಂಗ್ 4,04,430 ಮತಗಳನ್ನು ಪಡೆದಿದ್ದಾರೆ. ಝಿರಾ ಅವರು 2,07,310 ಮತಗಳನ್ನು ಪಡೆದಿದ್ದು,ಆಮ್ ಆದ್ಮಿ ಪಕ್ಷದ (ಎಎಪಿ) ಲಾಲ್ಜಿತ್ ಸಿಂಗ್ ಭುಲ್ಲರ್ 1,94,836 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಂಕಿಅಂಶಗಳ ಪ್ರಕಾರ ಸಿಂಗ್ 1,97,120 ಮತಗಳ ಅಂತರದಿಂದ ಗೆದ್ದಿದ್ದಾರೆ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಮತ್ತು ಖಲಿಸ್ತಾನಿ ಕಾರ್ಯಕರ್ತ ಅಮೃತಪಾಲ್ ಸಿಂಗ್, ಫೆಬ್ರವರಿ 2023 ರಲ್ಲಿ ಅವರ ಬೆಂಬಲಿಗರೊಬ್ಬರನ್ನು ಬಂಧಿಸಿದ್ದಕ್ಕಾಗಿ ಜನರ ಗುಂಪೊಂದು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದಾಗ ಸುದ್ದಿಯಾಗಿದ್ದರು. ಶರಣಾಗುವ ಮೊದಲು ತಿಂಗಳುಗಟ್ಟಲೆ ತಲೆಮರೆಸಿಕೊಂಡಿದ್ದರಿಂದ ಭಾರೀ ಕಾರ್ಯಾಚರಣೆಯ ನಂತರ ಕಳೆದ ವರ್ಷ ಅವರನ್ನು ಬಂಧಿಸಲಾಯಿತು. ಅವರು ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಆರೋಪ ಹೊರಿಸಿದ್ದು ಇವರೀಗ ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದಾರೆ.

31 ವರ್ಷದ ಅಮೃತಪಾಲ್ ಸಿಂಗ್ ಪರವಾಗಿ ಅವರ ತಂದೆ ತಾರ್ಸೆಮ್ ಸಿಂಗ್ ಮತ್ತು ಸ್ಥಳೀಯ ಬೆಂಬಲಿಗರು ಪ್ರಚಾರ ನಡೆಸಿದ್ದರು. ಅಮೃತಪಾಲ್ ಸಿಂಗ್ ಅವರ ಅಭಿಯಾನವು ಪಂಜಾಬ್‌ನಲ್ಲಿ ಮಾದಕ ವ್ಯಸನದ ವಿರುದ್ಧ ಹೋರಾಡುವುದು, ಮಾಜಿ ಸಿಖ್ ಉಗ್ರಗಾಮಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವುದು ಮತ್ತು ರಾಷ್ಟ್ರದಲ್ಲಿ ಸಿಖ್ ಗುರುತನ್ನು ರಕ್ಷಿಸುವುದರ ಮೇಲೆ ಕೇಂದ್ರೀಕೃತವಾಗಿತ್ತು.

ಜೈಲಿನಲ್ಲಿರುವವರು ಪ್ರಮಾಣ ವಚನ ಸ್ವೀಕರಿಸಬಹುದೇ?

ಜೈಲಿನಿಂದಲೇ ಚುನಾವಣೆ ಗೆದ್ದ ಇವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶವಿರುತ್ತದೆಯೇ? ಈ ಪ್ರಶ್ನೆಗೆ ಸಂವಿಧಾನ ತಜ್ಞ ಮತ್ತು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ ಹೀಗಂತಾರೆ “ಅಂತಹ ಸಂದರ್ಭಗಳಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಪಾಲಿಸಲಾಗುತ್ತದೆ. ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವುದು ಸಾಂವಿಧಾನಿಕ ಹಕ್ಕು. ಇಂಜಿನಿಯರ್ ರಶೀದ್ ಮತ್ತು ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಬೇಕಾದರ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ, ಅವರು ಜೈಲಿಗೆ ಮರಳಬೇಕಾಗುತ್ತದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಸದನಕ್ಕೆ ಹಾಜರಾಗಲು ಸಾಧ್ಯವಾಗದಿರುವ ಬಗ್ಗೆ ಸ್ಪೀಕರ್‌ಗೆ ಪತ್ರ ಬರೆದು ತಿಳಿಸಲಾಗುವುದು. ನಂತರ ಸ್ಪೀಕರ್ ಅವರ ಮನವಿಗಳನ್ನು ಸದಸ್ಯರ ಗೈರುಹಾಜರಿಯ ಸದನ ಸಮಿತಿಗೆ ಕಳುಹಿಸುತ್ತಾರೆ. ಸಮಿತಿಯು ನಂತರ ಸದನದ ಕಲಾಪಗಳಿಗೆ ಗೈರುಹಾಜರಾಗಲು ಅವಕಾಶ ನೀಡಬೇಕೆ ಅಥವಾ ಬೇಡವೇ ಎಂದು ಶಿಫಾರಸು ಮಾಡುತ್ತದೆ. ನಂತರ ಶಿಫಾರಸನ್ನು ಸ್ಪೀಕರ್ ಸದನದ ಮತಕ್ಕೆ ಹಾಕುತ್ತಾರೆ ಎಂದಿದ್ದಾರೆ.

ಇಂಜಿನಿಯರ್ ರಶೀದ್ ಅಥವಾ ಸಿಂಗ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಕನಿಷ್ಠ ಎರಡು ವರ್ಷಗಳ ಕಾಲ ಜೈಲಿನಲ್ಲಿರಿಸಿದರೆ, 2013 ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಅಂತಹ ಪ್ರಕರಣಗಳಲ್ಲಿ ಸಂಸದರು ಮತ್ತು ಶಾಸಕರನ್ನು ಅನರ್ಹಗೊಳಿಸಲಾಗುವುದು, ಅವರು ತಮ್ಮ ಸ್ಥಾನಗಳನ್ನು ತಕ್ಷಣವೇ ಕಳೆದುಕೊಳ್ಳುತ್ತಾರೆ ಎಂದಿದ್ದಾರೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು