AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ಗೆಲುವು ಯಾರಿಗೆ? ಸಿಎಸ್​​ಡಿಎಸ್ ಸಮೀಕ್ಷೆಯಲ್ಲಿ ಬಿಜೆಪಿಗೆ ಬಲ, ದಕ್ಷಿಣ ಭಾರತದಲ್ಲಿಯೂ ಮೋದಿ ಮೋಡಿ

ಲೋಕಸಭೆ ಚುನಾವಣೆ ಬಗ್ಗೆ ಲೋಕನೀತಿ-ಸಿಎಸ್​ಡಿಎಸ್ 19 ರಾಜ್ಯಗಳಲ್ಲಿ ಸುಮಾರು 10 ಸಾವಿರ ಜನರನ್ನು ಸಮೀಕ್ಷೆಗೆ ಒಳಪಡಿಸಿದೆ. ಇದೀಗ ಸಮೀಕ್ಷಾ ವರದಿ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕಿಂತ ಶೇ 12ರಷ್ಟು ಹೆಚ್ಚು ಮತ ಪಡೆಯುವ ಬಗ್ಗೆ ಸುಳಿವು ನೀಡಿದೆ. ಸಮೀಕ್ಷೆಯಲ್ಲಿ ಇನ್ನೂ ಏನೇನು ತಿಳಿದುಬಂತು ಎಂಬ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆಯಲ್ಲಿ ಗೆಲುವು ಯಾರಿಗೆ? ಸಿಎಸ್​​ಡಿಎಸ್ ಸಮೀಕ್ಷೆಯಲ್ಲಿ ಬಿಜೆಪಿಗೆ ಬಲ, ದಕ್ಷಿಣ ಭಾರತದಲ್ಲಿಯೂ ಮೋದಿ ಮೋಡಿ
ಲೋಕಸಭೆ ಚುನಾವಣೆಯಲ್ಲಿ ಗೆಲುವು ಯಾರಿಗೆ? ಸಿಎಸ್​​ಡಿಎಸ್ ಸಮೀಕ್ಷೆಯಲ್ಲಿ ಬಿಜೆಪಿಗೆ ಬಲ, ದಕ್ಷಿಣ ಭಾರತದಲ್ಲಿಯೂ ಮೋದಿ ಮೋಡಿ
Ganapathi Sharma
|

Updated on: Apr 13, 2024 | 12:54 PM

Share

ನವದೆಹಲಿ, ಏಪ್ರಿಲ್ 13: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಆಡಳಿತಾರೂಢ ಬಿಜೆಪಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕಿಂತ ಶೇ 12ರಷ್ಟು ಹೆಚ್ಚು ಮತ ಪಡೆಯಲಿದೆ ಎಂಬುದು ಲೋಕನೀತಿ-ಸಿಎಸ್​ಡಿಎಸ್ (CSDS) ಸಮೀಕ್ಷೆಯಿಂದ ತಿಳಿದುಬಂದಿದೆ. ಹಾಗೆಯೇ ದಕ್ಷಿಣ -ಪೂರ್ವ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಈ ಬಾರಿ ಬಿಜೆಪಿ ಮೋಡಿ ಮಾಡಲಿದೆ ಎಂಬುದು ಸಮೀಕ್ಷಾ ವರದಿಯಲ್ಲಿ ಉಲ್ಲೇಖವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಗೆಲುವಾಗಲಿದೆ? ಚುನಾವಣೆಯಲ್ಲಿ ಚರ್ಚೆಯಾಗುವ ಮುಖ್ಯ ವಿಷಯಗಳು ಯಾವುವು ಎಂಬ ಬಗ್ಗೆ ಸಮೀಕ್ಷಾ ವರದಿ ಉಲ್ಲೇಖಿಸಿದೆ.

ಲೋಕ ನೀತಿ ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ ಅಥವಾ ಸಿಎಸ್​ಡಿಎಸ್ ರಾಜಕೀಯ ಮತ್ತು ಸಮಾಜದ ಬಗ್ಗೆ ನಿರಂತರ ಸಂಶೋಧನೆಯಲ್ಲಿ ತೊಡಗಿದೆ. ಈ ಹಿಂದೆಯೂ ಅನೇಕ ಬಾರಿ ಚುನಾವಣಾಪೂರ್ವ ಸಮೀಕ್ಷೆಗಳನ್ನು ನಡೆಸಿದ್ದು, ಯಾವೊಂದು ರಾಜಕೀಯ ಪಕ್ಷವೂ ಆಕ್ಷೇಪ ವ್ಯಕ್ತಪಡಿಸದ ರೀತಿಯಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕ ವಲಯದಲ್ಲಿ ಪ್ರತಿಷ್ಠೆ ಉಳಿಸಿಕೊಂಡಿದೆ.

ಬಿಜೆಪಿಗೆ ಮತ್ತೆ ಗೆಲುವು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ‘ಇಂಡಿಯಾ’ ಮೈತ್ರಿಕೂಟಕ್ಕಿಂತ ಶೇಕಡಾ 12 ರಷ್ಟು ಮತ ಪ್ರಮಾಣದ ಮುನ್ನಡೆ ಸಾಧಿಸಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಶೇ 46 ಮತ ಹಂಚಿಕೆ ಪಡೆದರೆ, ಇಂಡಿಯಾ ಶೇ 34ರ ಮತ ಹಂಚಿಕೆ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಸಮೀಕ್ಷೆಗೆ ಒಳಗಾದ ಹತ್ತರಲ್ಲಿ ನಾಲ್ಕು ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಕೂಡ ಸ್ವಲ್ಪ ಲಾಭವನ್ನು ಗಳಿಸುವ ನಿರೀಕ್ಷೆಯಿದೆ. ಆದರೆ, ಮತ ಹಂಚಿಕೆ ಪ್ರಮಾಣ ಗಮನಾರ್ಹ ಹೆಚ್ಚಳ ಕಂಡುಬಂದಿಲ್ಲ ಎಂದು ಸಮೀಕ್ಷಾ ವರದಿ ತಿಳಿಸಿದೆ.

ದಕ್ಷಿಣ – ಪೂರ್ವ ಭಾರತ, ಈಶಾನ್ಯದಲ್ಲಿ ಬಿಜೆಪಿ ಜಂಪ್!

ಪೂರ್ವ, ದಕ್ಷಿಣ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಮತ ಹಂಚಿಕೆಯಲ್ಲಿ ಭಾರೀ ಜಿಗಿತ ಕಂಡುಬಂದಿದೆ ಎಂದೂ ಸಮೀಕ್ಷಾ ವರದಿ ಉಲ್ಲೇಖಿಸಿದೆ. ಇದರ ಪ್ರಕಾರ, ದಕ್ಷಿಣ ಭಾರತದಲ್ಲಿ 2019ರಲ್ಲಿ ಶೇ 18ರಷ್ಟಿದ್ದ ಬಿಜೆಪಿ ಮತ ಹಂಚಿಕೆ ಈ ಬಾರಿ ಶೇ 25ಕ್ಕೆ ಹೆಚ್ಚಳವಾಗಲಿದೆ. ಪೂರ್ವ ಭಾರತ ಮತ್ತು ಈಶಾನ್ಯದಲ್ಲಿ 2019ರಲ್ಲಿ ಶೇ 34ರಷ್ಟಿದ್ದ ಮತ ಹಂಚಿಕೆ ಈ ಬಾರಿ ಶೇ 42ಕ್ಕೆ ಹೆಚ್ಚಳವಾಗಲಿದೆ.

ಸಮೀಕ್ಷೆಯ ಮುಖ್ಯಾಂಶಗಳು

  • ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಬಿಜೆಪಿ ಸರ್ಕಾರದ 10 ವರ್ಷಗಳ ಸಾಧನೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದು ಮೋದಿ ಸರ್ಕಾರಕ್ಕೆ ಮತ್ತೊಂದು ಅವಕಾಶವನ್ನು ನೀಡುವ ಬಗ್ಗೆ ಜನರ ಸಕಾರಾತ್ಮಕ ಒಲವನ್ನು ಸೂಚಿಸಿದೆ ಎಂದು ವರದಿ ತಿಳಿಸಿದೆ.
  • ಪ್ರಧಾನಿ ನರೇಂದ್ರ ಮೋದಿಯವರ ‘ಮೋದಿ ಗ್ಯಾರಂಟಿ’ ಮತದಾರರನ್ನು ಸೆಳೆಯುತ್ತಿದೆ, ಇದು ರಾಹುಲ್ ಗಾಂಧಿಯವರ ಭರವಸೆಗಳಿಗಿಂತ ಹೆಚ್ಚಿನ ಲಾಭವನ್ನು ಬಿಜೆಪಿಗೆ ನೀಡುತ್ತಿದೆ.
  • 2019 ಕ್ಕೆ ಹೋಲಿಸಿದರೆ ಸರ್ಕಾರದ ಕಾರ್ಯಕ್ಷಮತೆಯ ಕುರಿತಾದ ಮೆಚ್ಚುಗೆ ಪ್ರಮಾಣದಲ್ಲಿ ಕುಸಿತವಿದೆ. ನಗರ ಪ್ರದೇಶಗಳ ಜನರು ಮತ್ತೊಂದು ಅವಧಿಗೆ ಕಡಿಮೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
  • ಪ್ರಧಾನಿ ಮೋದಿ ವ್ಯಕ್ತಿತ್ವವು ನಿರ್ಣಾಯಕ ಅಂಶವಾಗಿ ಪರಿಣಮಿಸಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನ ರಾಹುಲ್ ಗಾಂಧಿಗಿಂತ ಪ್ರಧಾನಿಯಾಗಿ ಮೋದಿಗೇ ಆದ್ಯತೆ ನೀಡಿದ್ದಾರೆ.
  • ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಮೋದಿ ಕುರಿತಾದ ಅತ್ಯಂತ ಮೆಚ್ಚುಗೆಯ ಕೆಲಸಗಳಲ್ಲಿ ಒಂದಾಗಿ ಕಾಣುತ್ತದೆ. ಇದು ಮತದಾರರಲ್ಲಿ, ವಿಶೇಷವಾಗಿ ಎನ್​ಡಿಎ ಬೆಂಬಲಿಗರಲ್ಲಿ ಬಲವಾಗಿ ಪ್ರತಿಧ್ವನಿಸುತ್ತಿದೆ.
  • ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಮತದಾರರಲ್ಲಿ ಕಳವಳವಿದೆ. ಮೋದಿ ಮತ್ತು ಬಿಜೆಪಿಯ ನಿರಂತರ ಜನಪ್ರಿಯತೆಯ ಬಗ್ಗೆ ಇದು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.
  • ಆರ್ಥಿಕ ಸಂಕಷ್ಟದ ಹೊರತಾಗಿಯೂ, ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಲೋಕಸಭೆ ಚುನಾವಣೆ: ಚರ್ಚೆಯ ಪ್ರಮುಖ ವಿಷಯಗಳು ಯಾವುವು?

  • ಬೆಲೆ ಏರಿಕೆ ಮತ್ತು ಉದ್ಯೋಗ ಸೃಷ್ಟಿಯ ಕುರಿತಾದ ಕಳವಳ ಮತದಾರರಲ್ಲಿ ಢಾಳಾಗಿ ಕಂಡುಬಂದಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ಈ ಸಮಸ್ಯೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
  • ಪ್ರತಿಕ್ರಿಯಿಸಿದವರಲ್ಲಿ ಶೇ 62 ರಷ್ಟು ಮಂದಿ ಉದ್ಯೋಗ ಸೃಷ್ಟಿ ಹೆಚ್ಚು ಸವಾಲಿನದ್ದಾಗಿದೆ ಎಂದು ಭಾವಿಸಿದ್ದಾರೆ. ಆದರೆ, ಶೇ 12ರಷ್ಟು ಮಂದಿ ಇದು ದೊಡ್ಡದಲ್ಲ ಎಂದು ಹೇಳಿದ್ದಾರೆ.
  • ಜನರ ಮೇಲೆ ಹಣದುಬ್ಬರದ ಪರಿಣಾಮ ಆಗಿರುವುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಶೇ 71 ರಷ್ಟು ಜನರು ಸರಕುಗಳ ಬೆಲೆಗಳಲ್ಲಿ ಹೆಚ್ಚಳವಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಬಡ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ಬೆಲೆ ಏರಿಕೆ ಪರಿಣಾಮ ಬೀರಿರುವುದು ಕಂಡುಬಂದಿದೆ.

ಇದನ್ನೂ ಓದಿ: ಚುನಾವಣೆಗೂ ಮುನ್ನ ಸೋಲೊಪ್ಪಿದರೇ ಸಿದ್ದರಾಮಯ್ಯ? ‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ಅನುಮಾನವೆಂದ ಸಿಎಂ

ಲೋಕನೀತಿ ಸಿಎಸ್​ಡಿಎಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ 19 ರಾಜ್ಯಗಳಾದ್ಯಂತ 10,019 ಜನ ಭಾಗವಹಿಸಿದ್ದರು. ಇವರಿಂದ ಪಡೆದ ಪ್ರತಿಕ್ರಿಯೆಗಳ ಆಧಾರದಲ್ಲಿ ವರದಿ ಸಿದ್ಧಪಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?