ಜಯಂತ್ ಚೌಧರಿ ಅವರ ಆರ್‌ಎಲ್‌ಡಿಯೊಂದಿಗೆ ಮೈತ್ರಿ ಘೋಷಿಸಿದ ಅಖಿಲೇಶ್ ಯಾದವ್

ಆರ್‌ಎಲ್‌ಡಿ ಮತ್ತು ಎಸ್‌ಪಿ ಮೈತ್ರಿಗೆ ಎಲ್ಲರಿಗೂ ಅಭಿನಂದನೆಗಳು. ಗೆಲುವಿಗಾಗಿ ನಾವೆಲ್ಲರೂ ಒಂದಾಗೋಣ ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಏತನ್ಮಧ್ಯೆ, ರಾಷ್ಟ್ರೀಯ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ತಾನು ಸದಾ ಸಿದ್ಧ ಎಂದು ಜಯಂತ್ ಚೌಧರಿ ಹೇಳಿದರು.

ಜಯಂತ್ ಚೌಧರಿ ಅವರ ಆರ್‌ಎಲ್‌ಡಿಯೊಂದಿಗೆ ಮೈತ್ರಿ ಘೋಷಿಸಿದ ಅಖಿಲೇಶ್ ಯಾದವ್
ಅಖಿಲೇಶ್ ಯಾದವ್ -ಜಯಂತ್ ಚೌಧರಿ
Follow us
ರಶ್ಮಿ ಕಲ್ಲಕಟ್ಟ
|

Updated on:Jan 19, 2024 | 7:17 PM

ಲಕ್ನೋ ಜನವರಿ 19: ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸಮಾಜವಾದಿ ಪಕ್ಷ (Samajwadi Party) ಮತ್ತು ರಾಷ್ಟ್ರೀಯ ಲೋಕದಳ (RLD) ಮೈತ್ರಿ ಮಾಡಿಕೊಳ್ಳುವುದಾಗಿ ಶುಕ್ರವಾರ ಘೋಷಿಸಿವೆ. ಒಪ್ಪಂದದ ಪ್ರಕಾರ, ಅಖಿಲೇಶ್ ಯಾದವ್ (Akhilesh Yadav)ನೇತೃತ್ವದ ಪಕ್ಷವು ಪಶ್ಚಿಮ ಉತ್ತರ ಪ್ರದೇಶದಲ್ಲಿ ಜಯಂತ್ ಚೌಧರಿ ಅವರ ಪಕ್ಷಕ್ಕೆ ಏಳು ಸ್ಥಾನಗಳನ್ನು ಬಿಟ್ಟುಕೊಡಲಿದೆ.

ಆರ್‌ಎಲ್‌ಡಿ ಮತ್ತು ಎಸ್‌ಪಿ ಮೈತ್ರಿಗೆ ಎಲ್ಲರಿಗೂ ಅಭಿನಂದನೆಗಳು. ಗೆಲುವಿಗಾಗಿ ನಾವೆಲ್ಲರೂ ಒಂದಾಗೋಣ ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಏತನ್ಮಧ್ಯೆ, ರಾಷ್ಟ್ರೀಯ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ತಾನು ಸದಾ ಸಿದ್ಧ ಎಂದು ಚೌಧರಿ ಹೇಳಿದರು. “ನಮ್ಮ ಪ್ರದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ನಮ್ಮ ಮೈತ್ರಿಕೂಟದ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಮುಂದುವರಿಯಬೇಕೆಂದು ನಾವು ನಿರೀಕ್ಷಿಸುತ್ತೇವೆ” ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಏಳು ಸ್ಥಾನಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಆರ್‌ಎಲ್‌ಡಿ ಮುಖಂಡರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಸ್ಥಾನಗಳಿವೆ. 2014ರಿಂದ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದೆ. ಉತ್ತರ ಪ್ರದೇಶದಲ್ಲಿ 2022 ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಎಲ್‌ಡಿ ಮತ್ತು ಎಸ್‌ಪಿ ಸ್ಪರ್ಧಿಸಿದ್ದವು. ಮೈತ್ರಿಯು ಎರಡೂ ಪಕ್ಷಗಳಿಗೆ ಲಾಭದಾಯಕವಾಗಿದ್ದು, ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಮತ್ತು ಆರ್ ಎಲ್ ಡಿ 8 ಸ್ಥಾನಗಳನ್ನು ಗಳಿಸಿತ್ತು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್‌ಎಲ್‌ಡಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದ ಭಾಗವಾಗಿತ್ತು. ಇದು ಮಥುರಾ, ಬಾಗ್‌ಪತ್ ಮತ್ತು ಮುಜಾಫರ್ ನಗರ ಕ್ಷೇತ್ರಗಳಿಂದ ಸ್ಪರ್ಧಿಸಿದ್ದು ಎಲ್ಲಾ ಮೂರು ಸ್ಥಾನಗಳನ್ನು ಕಳೆದುಕೊಂಡಿತು. ಎಸ್‌ಪಿ ಮತ್ತು ಬಿಎಸ್‌ಪಿ ಕ್ರಮವಾಗಿ 5 ಮತ್ತು 10 ಸ್ಥಾನಗಳನ್ನು ಗೆದ್ದಿವೆ.

ಯುಪಿ, ದೆಹಲಿ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಮೈತ್ರಿ ಮಾಡಿಕೊಳ್ಳಲು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ಪ್ರಯತ್ನಗಳ ಮಧ್ಯೆ ಮೈತ್ರಿಯ ಘೋಷಣೆ ಬಂದಿದೆ.

ಇದನ್ನೂ ಓದಿ:ದೇವನಹಳ್ಳಿ: ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆಗೊಳಿಸಿದ ಮೋದಿ: ಏನಿದು? ಎಷ್ಟು ಕೋಟಿ ಖರ್ಚಾಗಿದೆ? ಇಲ್ಲಿದೆ ವಿವರ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರತಿಪಕ್ಷಗಳ ನಾಯಕರು ಈ ತಿಂಗಳ ಬಣದ ಸಭೆಯಿಂದ ಹೊರಗುಳಿದಿದ್ದರು. ಜಾಟ್ ಸಮುದಾಯದಲ್ಲಿ ಆರ್‌ಎಲ್‌ಡಿ ಬಹಳ ಜನಪ್ರಿಯವಾಗಿದ. ಜಾಟ್ ಪ್ರಾಬಲ್ಯದ ಕ್ಷೇತ್ರಗಳಾದ ಮುಜಾಫರ್‌ನಗರ, ಕಿಯಾರಾನಾ, ಬಿಜ್ನೋರ್, ಮಥುರಾ, ಬಾಗ್‌ಪತ್, ಅಮ್ರೋಹಾ ಮತ್ತು ಮೀರತ್‌ಗಳಲ್ಲಿ ಪ್ರಭಾವವನ್ನು ಹೊಂದಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಅಖಿಲೇಶ್ ಯಾದವ್ ಅವರು ರಾಷ್ಟ್ರೀಯ ರಾಜಕೀಯಕ್ಕಾಗಿ ಇಂಡಿಯಾ ಬ್ಲಾಕ್ ಎಂದು ಹೇಳಿ ಎಸ್ಪಿಗೆ ಸ್ಥಾನಗಳನ್ನು ನಿರಾಕರಿಸಿದ ನಂತರ ಕಾಂಗ್ರೆಸ್ ಜೊತೆ ಸಾರ್ವಜನಿಕ ವಾಗ್ವಾದ ನಡೆಸಿದರು. ಯಾದವ್ ಈ ಕ್ರಮವನ್ನು “ದ್ರೋಹ” ಎಂದು ಕರೆದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Fri, 19 January 24

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್